ರಾಣೆಬೇನ್ನೂರು: ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿರುವ ತುಂಗಭದ್ರಾ ನದಿಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳಲು ಹೋಗಿದ್ದ ಮಹಿಳೆಯೊಬ್ಬಳು ಸತತವಾಗಿ ಈಜಿಕೊಂಡು ಜೀವ ಉಳಿಸಿಕೊಂಡ ಘಟನೆ ತಾಲೂಕಿನ ನಿಟ್ಟಪಳ್ಳಿ ಗ್ರಾಮದ ಬಳಿ ನಡೆದಿದೆ.
ಮಹಿಳೆಯನ್ನು ರಟ್ಟಿಹಳ್ಳಿ ಮೂಲದ ರೂಪಾ(32) ಎಂದು ತಿಳಿದು ಬಂದಿದೆ.

ಮಹಿಳೆ ಬೆಳಿಗ್ಗೆ ತುಂಗಭದ್ರಾ ನದಿಗೆ ಜಿಗಿದಿದ್ದಾಳೆ ಆದರೆ ಅವಳಿಗೆ ಈಜು ಬರುವ ಹಿನ್ನೆಲೆ ಸುಮಾರು ಮೂರು ಕಿಮೀ ನದಿಯಲ್ಲಿ ಈಜಿ ಬಂದು ನಿಟ್ಟಪಳ್ಳಿ ಗ್ರಾಮದ ಬಳಿ ಮರ ಹಿಡಿದುಕೊಂಡು ನಿಂತಿದ್ದಾಳೆ. ಈ ಸಮಯದಲ್ಲಿ ಗ್ರಾಮಸ್ಥರ ಕಣ್ಣಿಗೆ ಬಿದ್ದಾಗ ಪೋಲಿಸರಿಗೆ ಹಾಗೂ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ.
ಕೂಡಲೇ ಕಾರ್ಯಚರಣೆಗೆ ಇಳಿದ ಪೋಲಿಸರು ಹಾಗೂ ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿ ಮಹಿಳೆಯನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ರವಾನಿಸಿದ್ದಾರೆ.

More Stories
ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.
ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.
ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.