ರಾಣೆಬೇನ್ನೂರು ಸುದ್ದಿ: ನಗರದ ಬಸ್ ನಿಲ್ದಾಣದಲ್ಲಿ ವೃದ್ಧ ಅಜ್ಜಿಯ ಕಾಲ ಮೇಲೆ ಸರ್ಕಾರಿ ಬಸ್ ಹರಿದು ಸಂಪೂರ್ಣವಾಗಿ ನಜ್ಜುಗುಜ್ಜಾದ ಘಟನೆ ನಡೆದಿದೆ.
ತಾಲೂಕಿನ ಮುದೇನೂರು ಗ್ರಾಮದ 65 ವರ್ಷ ವೃದ್ಧೆಯ ಕಾಲಿನ ಮೇಲೆ ಇದೀಗ ಬಸ್ ಹರಿದಿದೆ.
ನರಳಾಡುತ್ತಾ ಬಸ್ ನಿಲ್ದಾಣದಲ್ಲಿ ಬಿದ್ದಿದ್ದ ವೃದ್ದೆಯನ್ನು ಆಸ್ಪತ್ರೆಗೆ ಸ್ಥಳಾಂತರ ಮಾಡಲು ಹಿಂದೇಟು ಹಾಕಿದ ಕಾರಣ ಸುಮಾರು ಒಂದು ಗಂಟೆ ನರಳಾಡಿದ ವೃದ್ದೆ ಅಜ್ಜಿ. ಅಪಘಾತ ಸಂಭವಿಸಿ ಅರ್ಧ ಗಂಟೆ ಕಳೆದರೂ ಸ್ಥಳಕ್ಕೆ ಬಾರದ ಸಾರಿಗೆ ಇಲಾಖೆಯ ಅಧಿಕಾರಿಗಳು ವಿರುದ್ಧ ಜನರ ಆಕ್ರೋಶ ವ್ಯಕ್ತಪಡಿಸಿದರು. ಬಸ್ ಚಾಲಕನ ನಿರ್ಲಕ್ಷವೇ ದುರಂತಕ್ಕೆ ಕಾರಣ ಎಂದು ಆರೋಪಿಸಿದ ಕುಟುಂಬಸ್ಥರು.
ನಂತರ ಅಂಬುಲೆನ್ಸ್ ಮೂಲಕ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ರಾಣೆಬೇನ್ನೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
More Stories
ತುಂಗಭದ್ರಾ ನದಿಯಲ್ಲಿ 15 ಕಿ.ಮೀ. ಈಜಿ ಪ್ರಾಣ ಉಳಿಸಿಕೊಂಡ ಮೈಸೂರಿನ ವೃದ್ಧ…!
ಮೂರು ಬೈಕಗಳ ನಡುವೆ ಭೀಕರ ಅಪಘಾತ ಒರ್ವ ಯುವಕ ಸಾವು, ಮೂವರು ಗಂಭೀರ.
ಆಟೋ ಚಾಲಕರಿಗೆ ಸನ್ಮಾನ ಸಮಾರಂಭ ಮಾಡಲಿರುವ “ಪರಮೇಶಣ್ಣ ಗೂಳಣ್ಣನವರ”