ರಾಣೆಬೇನ್ನೂರ:ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದಾಳೆಂದು ನಾಲ್ಕು ವರ್ಷದ ಹೆತ್ತ ಮಗಳನ್ನೇ ತಾಯಿ ಮತ್ತು ಅಕ್ರಮ ಸಂಬಂಧ ಹೊಂದಿದ ವ್ಯಕ್ತಿ ಸೇರಿಕೊಂಡು ಹತ್ಯೆ ಮಾಡಿರುವ ಘಟನೆ ತಾಲೂಕಿನ ಗುಡ್ಡದ ಆನ್ವೇರಿ ಗ್ರಾಮದಲ್ಲಿ ನಡೆದಿರುವುದು ತಡವಾಗಿ ಬೆಳಕಿದೆ ಬಂದಿದೆ.
ನಗರದ ಎಕೆಜಿ ಕಾಲನಿ ಗಂಗಮ್ಮ ಮಂಜುನಾಥ ಗುತ್ತಲ (36) ಹಾಗೂ ಗೌರಿಶಂಕರ ನಗರ ಅಣ್ಣಪ್ಪ ಹನುಮಂತಪ್ಪ ಮಡಿವಾಳರ (40) ಕೊಲೆ ಮಾಡಿದ ಆರೋಪಿಗಳು.
ಗಂಗಮ್ಮನ ಮೂರನೇ ಮಗಳಾದ ಪ್ರೀಯಾಂಕಾ (4) ಕೊಲೆಯಾದವಳು.
ಇವರಿಬ್ಬರು ಅನೈತಿಕ ಸಂಬಂಧ ಹೊಂದಿದ್ದರು. ಎರಡು ತಿಂಗಳ ಹಿಂದೆ ಗಂಗಮ್ಮ ತನ್ನ ಪತಿ ಬಿಟ್ಟು ಮಗಳನ್ನು ಕರೆದುಕೊಂಡು ಅಣ್ಣಪ್ಪನ ಜೊತೆ ಹೋಗಿ ಗುಡ್ಡದ ಆನ್ವೇರಿ ಗ್ರಾಮದಲ್ಲಿ ವಾಸವಾಗಿದ್ದರು.
ಆದರೆ ಇಬ್ಬರ ನಡುವಿನ ಅಕ್ರಮ ಸಂಬಂಧಕ್ಕೆ ಮಗಳು ಅಡ್ಡಿಯಾಗುತ್ತಿದ್ದಾಳೆಂದು ಆಕೆಯ ಕೊಲೆಗೆ ಸಂಚು ರೂಪಿಸಿದ್ದಾರೆ. ಆ. 5ರಂದು ಮಗಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ ಹಾವೇರಿ ತಾಲೂಕಿನ ಕುರಗುಂದ ಗ್ರಾಮದ ತುಂಗಾ ಮೇಲ್ದಂಡೆ ಯೋಜನೆ ಕಾಲುವೆ ಬಳಿ ಸುಟ್ಟು ಹಾಕಲು ಪ್ರಯತ್ನಿಸಿದ್ದರು.
ಆದರೆ ಬಾಲಕಿಯ ದೇಹ ಅರ್ಧ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ಕುರಿತು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದ ಗುತ್ತಲ ಠಾಣೆ ಪೊಲೀಸರು ಬಾಲಕಿಯನ್ನು ಅಪರಿಚಿತ ಶವ ಎಂದು ಅಂತ್ಯಸಂಸ್ಕಾರ ನೆರವೇರಿಸಿದ್ದರು.
ಗಂಡ ಮಗಳನ್ನಾದರೂ ಕೊಡು ಎಂದಾಗ ಪ್ರಕರಣ ಬೆಳಕಿಗೆ…
ಗಂಗಮ್ಮಳ ಪತಿ ಮಂಜುನಾಥ ‘ನೀನು ಅವನ ಜತೆಗೆ ಜೀವನ ಮಾಡು, ಆದರೆ ನನ್ನ ಮಗಳನ್ನು ನನಗೆ ಕೊಟ್ಟು ಬಿಡು’ ಎಂದು ಪಟ್ಟುಹಿಡಿದ್ದಿದ್ದ. ಆಗ ಗಂಗಮ್ಮ ಮಗಳು ಮೈಸೂರಿನಲ್ಲಿದ್ದಾಳೆ, ಆರಾಮ ಇಲ್ಲ, ಆಸ್ಪತ್ರೆಯಲ್ಲಿದ್ದಾಳೆ ಎಂದು ಕಥೆ ಕಟ್ಟುತ್ತ ಒಂದು ತಿಂಗಳು ಕಾಲ ದೂಡಿದ್ದಾಳೆ. ಇದರಿಂದಾಗಿ ಮಂಜುನಾಥ ಮಗಳನ್ನು ಕೊಡಿಸುವಂತೆ ಶಹರ ಠಾಣೆ ಪಿಎಸ್ಐ ಗಡ್ಡಪ್ಪ ಗುಂಜುಟಗಿ ಮೊರೆ ಹೋಗಿದ್ದಾನೆ. ಪಿಎಸ್ಐ ಮಗಳ ವಿಚಾರವಾದರೆ ಕೂಡಲೇ ಬಗೆಹರಿಸುವೆ ಎಂದು ಗಂಗಮ್ಮ ಮತ್ತು ಅಣ್ಣಪ್ಪನನ್ನು ಕರೆತಂದು ವಿಚಾರಿಸಿದಾಗ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ.
ಸದ್ಯ ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ಹೊಡೆದು ಹೆಚ್ಚಿನ ವಿಚಾರಣೆ ಮುಂದುವರಿಸಿದ್ದಾರೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
More Stories
ನಕಲಿ ಬೀಜದಂಗಡಿಯವರ ಜತೆ “ಡೀಲ್ ಮಾಡಿಕೊಂಡಿಲ್ಲ” ಶಾಸಕ ಪ್ರಕಾಶ ಕೋಳಿವಾಡ ಆಕ್ರೋಶ.
ಅನುಭವ ಮಂಟಪ ಮಾದರಿ ಗಣಪತಿ ಸಮಿತಿ ವತಿಯಿಂದ ರಕ್ತದಾನ ಶಿಬಿರ
ಬಹಳಷ್ಟು ಲಾಭ ಕೊಡುವುದಾಗಿ ನಂಬಿಸಿ 75.42 ಲಕ್ಷ ರೂ. ವಂಚನೆ