ರಾಣೆಬೇನ್ನೂರು: ರಾಜ್ಯದಲ್ಲಿ 2006ರ ನಂತರ ನೇಮಕ ಆಗಿರುವ ಸರ್ಕಾರಿ ಹಾಗೂ ಅನುದಾನಿತ ಸರ್ಕಾರಿ ಶಾಲೆಯ ಶಿಕ್ಷಕರಿಗೆ ಶೀಘ್ರವಾಗಿ ಸಿಎಂ ಸಿದ್ದರಾಮಯ್ಯರ ಹತ್ತಿರ ಚರ್ಚೆ ಮಾಡಿ ಹಳೆ ಪಿಂಚಣಿ ಯೋಜನೆ ಜಾರಿಗೆ ತರಲು ಪ್ರಯತ್ನಿಸುವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ರಾಣೆಬೇನ್ನೂರು ನಗರದ ಮೃತ್ಯುಂಜಯ ಸಭಾಭವನದಲ್ಲಿ ರಾಜ್ಯ ಮಟ್ಟದ ಅನುದಾನಿತ ಶಾಲಾ ಶಿಕ್ಷಕರು ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿರುವ ಖಾಲಿ ಹುದ್ದೆ ಭತಿರ್ಗೆ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಮಾತನಾಡಿದ್ದೇನೆ. 1996ರಿಂದ ಕನಿಷ್ಠ 5 ವರ್ಷದ ಅವಧಿಯಲ್ಲಿ ಖಾಲಿಯಾಗಿರುವ ಹುದ್ದೆಗಳಿಗೆ ತಕ್ಷಣ ತುಂಬಲು ಅವಕಾಶ ಮಾಡಿಕೊಡಬೇಕು ಎಂದು ಕೇಳಿದ್ದೇನೆ. ಈ ಬಗ್ಗೆ ಶ್ರೀದಲ್ಲಿ ಆದೇಶಿಸಲಾಗುವುದು ಎಂದರು.
ಚುನಾವಣೆ ಸಮಯದಲ್ಲಿ ನಮ್ಮ ಪ್ರಣಾಳಿಕೆಯಲ್ಲಿ ಓಪಿಎಸ್ ಜಾರಿ ಕುರಿತು ಭರವಸೆ ನೀಡಿದ್ದೇವೆ. ಅದರಂತೆ ನಮ್ಮ ಸರ್ಕಾರದ ಅವಧಿ ಮುಗಿಯುವುದರೊಳಗೆ ಭರವಸೆ ಈಡೇರಿಸಲಾಗುವುದು. ಈ ಕುರಿತು ಸಿಎಂ ಹಾಗೂ ಆಥಿರ್ಕ ಇಲಾಖೆ ಜತೆ ಚರ್ಚೆ ನಡೆಸಿ ಕ್ರಮವಹಿಸಲಾಗುವುದು ಎಂದು ಭರವಸೆ ನೀಡಿದರು.
ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ನ್ಯಾಯಾಲಯದ ಆದೇಶದಂತೆ ಮತ್ತು ಆರ್ಟಿಇ ತೀಪಿರ್ನಂತೆ ಪ್ರತಿ 30 ಮಕ್ಕಳಿಗೆ ಒಬ್ಬ ಶಿಕ್ಷಕರನ್ನು ನೇಮಕ ಮಾಡಬೇಕು ಎಂಬ ನಿಯಮದ ಪ್ರಕಾರ ಶಿಕ್ಷಕರ ಮತ್ತು ಮಕ್ಕಳ ಅನುಪಾತ ಮಾಡಿ, ನಂತರ ಹೆಚ್ಚುವರಿ ಶಿಕ್ಷಕರ ನೆಪವೊಡ್ಡಿ ನೇಮಕಾತಿ ತಡೆಹಿಡಿಯಲಾಗಿದೆ ಎಂಬುದು ಶಿಕ್ಷಕರ ಆರೋಪವಾಗಿದೆ. ಈ ಬಗ್ಗೆ ನ್ಯಾಯಾಲಯದಿಂದ ತೀರ್ಪು ಪ್ರಕಟವಾಗಲಿದೆ. ಆಬಳಿಕ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದರು.
ಸರ್ಕಾರ ಕಾಲ್ಪನಿಕ ವೇತನ ನೀಡುವುದು. ಜ್ಯೋತಿ ಸಂಜೀವಿನಿ ಜಾರಿಗೊಳಿಸುವುದು ಸೇರಿ ಅನುದಾನಿತ ಶಿಕ್ಷಕರ ಬೇಡಿಕೆ ಈಡೇರಿಸಲು ಬದ್ಧವಿದೆ. ಆದರೆ, ಇದರ ಬಗ್ಗೆ ಸಮಗ್ರ ಚರ್ಚೆಯಾಗಿ ನಂತರ ಜಾರಿ ಮಾಡಲಾಗುವುದು. ಅನುದಾನಿತ ಶಾಲಾ ಮಕ್ಕಳಿಗೆ ಸರ್ಕಾರಿ ಶಾಲೆ ಮಕ್ಕಳಿಗೆ ನೀಡುವ ರೀತಿಯಲ್ಲಿ ಶೂ ಮತ್ತು ಸಾಕ್ಸ್ ನೀಡಲಾಗುವುದು. ಶಿಕ್ಷಕರಿಗೆ ಹಬ್ಬದ ಮುಂಗಡ ಹಣ ಪಾವತಿ ಮಾಡುವ ಕುರಿತು ಚಚಿರ್ಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.
ವಿಧಾನಸಭೆ ಉಪಾಧ್ಯಕ್ಷ ರುದ್ರಪ್ಪ ಲಮಾಣಿ ಮಾತನಾಡಿ, ಅನುದಾನಿತ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆ ತುಂಬಲು ಸರ್ಕಾರ ಈಗಾಗಲೇ ಆದೇಶ ಮಾಡಿದೆ. ಆದರೆ, ಒಳ ಮೀಸಲಾತಿ ಸಲುವಾಗಿ ಅದನ್ನು ತಡೆಹಿಡಿಯಲಾಗಿದೆ. ಆದ್ದರಿಂದ ಈ ಬಗ್ಗೆ ಶಿಕ್ಷಣ ಸಚಿವರು ಗಮನ ಹರಿಸಿ ಸಮಸ್ಯೆಗೆ ಪರಿಹಾರ ಒದಗಿಸಬೇಕು. ಎಸ್ಸಿ, ಎಸ್ಟಿ ಶಿಕ್ಷಣ ಸಂಸ್ಥೆಗಳಿಗೆ ಸರ್ಕಾರದಿಂದ ವಿವಿಧ ಯೋಜನೆಯಡಿ ಅನುದಾನ ನೀಡಬೇಕು ಎಂದು ಮನವಿ ಮಾಡಿದರು.
ಸಂದ ರಾಜ್ಯ ಗೌರವಾಧ್ಯಕ್ಷ ಕೆ. ಹನುಮಂತಪ್ಪ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕರಿಗೆ ಪ್ರಶಸ್ತಿ ವಿತರಿಸಲಾಯಿತು. ವಿದ್ಯಾಥಿರ್ಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು.
ಸಂಘದ ಜಿಲ್ಲಾಧ್ಯಕ್ಷ ನಾಗರಾಜ ನಲವಾಗಲ, ಯುಎಸ್ಎ ಪಾರ್ಥಸಾರಥಿ, ರಾಜ್ಯಾಧ್ಯಕ್ಷ ಎನ್. ಗೋಪಾಲರಾವ್, ಪ್ರಧಾನ ಕಾರ್ಯದಶಿರ್ ಎಂ.ಕೆ. ರಾಜು, ಡಿಡಿಪಿಐ ಮೋಹನ ದಂಡಿನ, ಬಿಇಒ ಶ್ಯಾಮಸುಂದರ ಅಡಿಗ, ಪ್ರಮುಖರಾದ ಆರ್. ನಾಗರತ್ನ, ಕಲ್ಯಾಣರಾವ ಬಿರಾದಾರ್, ವಿಜಯಕುಮಾರ ಒಪ್ಪಾರಿ, ಮಾಲತೇಶ ಎಂ., ಎಸ್.ಎಚ್. ಪಾಟೀಲ, ಮಾರುತಿ ಲಮಾಣಿ, ಎಂ.ಎಸ್. ಪಾಟೀಲ, ಬಸವರಾಜ ನಾಯಕ, ಮಧು ಅಳಲಗೇರಿ, ಸುಧಾ ಕೋಟಿಹಾಳ, ಎಸ್.ಸಿ. ಹಿರೇಮಠ ಮತ್ತಿತರರು ಉಪಸ್ಥಿತರಿದ್ದರು.
More Stories
ಕೈ-ಕಮಲ ನಡುವೆ ರಾಜಕೀಯ ಪ್ರತಿಷ್ಠೆ; ನಗರಸಭೆ ಸಾಮಾನ್ಯ ಸಭೆ ಮುಂದೂಡಿಕೆ.
ಹಾನಗಲ್ ತಹಸೀಲ್ದಾರ ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ.
ಬಿಗರ ಊಟ ಮಾಡಿ ಬರುತ್ತಿದ್ದವರು ಮಸಣಕ್ಕೆ *ನಿಂತಿದ್ದ ಟ್ರ್ಯಾಕ್ಟರ್ ಟ್ರೈಲರ್ ಗೆ ಟಾಟಾ ಸುಪ್ರೋ ಡಿಕ್ಕಿ* *ಸ್ಥಳದಲ್ಲಿಯೆ ಮೂವರ ದುರ್ಮರಣ, 20ಕ್ಕೂ ಅಧಿಕರಿಗೆ ಗಂಭೀರ ಗಾಯ*