16 ಲಕ್ಷ ಮೌಲ್ಯದ ಬಂಗಾರ ಮಾರಾಟ ಮಾಡಲು ಯತ್ನಿಸಿದ ಮಹಿಳೆ ಬಂಧನ…

ಹಾವೇರಿ ಜಿಲ್ಲಾಸತ್ರ ಕೋರ್ಟ್‌ಗೆ ಬಾಂಬ್ ಬೆದರಿಕೆ ಪತ್ರ; ಕೋರ್ಟನಿಂದ ಓಡಿ ಬಂದ ಕಕ್ಷಿದಾರರು, ವಕೀಲರು.

ಸಿಎಂ ಕುರ್ಚಿ ಗುದ್ದಾಟದ ವಿಚಾರ…! ಮತ್ತೆ ಗರಂ ಆದ ಸಿಎಂ ಸಿದ್ಧರಾಮಯ್ಯ.

ಸಾಯಿ ಆಸ್ಪತ್ರೆ ವೈದ್ಯನ ಮೇಲೆ ಹಲ್ಲೆ: 8 ಜನರ ವಿರುದ್ಧ ಪ್ರಕರಣ ದಾಖಲು.

ಹಾವೇರಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ನಿಂಗರಾಜ ಕೋಡಿಹಳ್ಳಿ, ಪ್ರಧಾನ ಕಾರ್ಯದರ್ಶಿಯಾಗಿ ಸಿದ್ದು ಚಿಕ್ಕಬಿದರಿ ನೇಮಕ.

ನ್ಯಾಯಬೆಲೆ ಅಂಗಡಿ ಪ್ರಾಧಿಕಾರವನ್ನು ವರ್ಗಾವಣೆ ಮಾಡಿಕೊಡಲು ಲಂಚ ಸ್ವೀಕಾರ, ರಾಣೆಬೆನ್ನೂರ ತಹಶೀಲ್ದಾರ ಕಛೇರಿಯ ಆಹಾರ ನಿರೀಕ್ಷಕ ಬಂಧನ.

ಉಚಿತ ಚಿಕನ್ ಬಿರಿಯಾನಿ ಬೇಕಾ,‌ ಆಗಾದ್ರೆ ಬಸ್ ನಿಲ್ದಾಣಕ್ಕೆ ಬನ್ನಿ.

ಅಂಬೇಡ್ಕರ್, ಗಾಂಧಿ ಹೆಸರು ಅಳಿಸಲು ಹೊರಟಿರುವ ವಿರುದ್ಧ ನನ್ನ ಹೋರಾಟ; ಸಚಿವ ಸತೀಶ ಜಾರಕಿಹೊಳಿ

ನಗರಸಭೆ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಜಿಲ್ಲಾಧಿಕಾರಿ.

ತವರ ಮನೆಗೆ ಹೆಂಡತಿ ಹೋದಾಗ ಎರಡನೇ ಮದುವೆಯಾದ ಭೂಪ ಜೈಲು ಪಾಲು…!

ದಾರಿ ತಪ್ಪಿ ಬಂದಿದಲ್ಲ, ದಾರಿ ಹುಡಕಿಕೊಂಡು ಬಂದೇನಿ; ಗಜರಾಜನ ಕೂಗಾಟ

ತಾಯಿ ಮೇಲೆ ಹಲ್ಲೆ ಮಾಡಿದ್ರೆ ಹುಷಾರ…! ಪುತ್ರ, ಸೊಸೆಗೆ ಜೈಲು ಪಾಲು

ನಿರ್ಮಾಣ ಹಂತದ ಟ್ಯಾಂಕನಿದ್ದು ಬಿದ್ದು ಕಾರ್ಮಿಕ ಸಾವು.

ಒಂಟಿ ಮನೆಯಲ್ಲಿದ್ದ ಮಹಿಳೆಯ ಕತ್ತು ಕೊಯ್ದು ಕೊಲೆ‌ಮಾಡಿದ ವ್ಯಕ್ತಿ ಬಂಧನ

ರಾಣೆಬೇನ್ನೂರ ನಗರದಲ್ಲಿ ಮಹಿಳೆಯ ಭೀಕರ ಕೊಲೆ, ಕಾರಣ ನಿಗೂಢ…!

ಹೊಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವ ರೈತ ಸಾವು

ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.

ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.

ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.

ಸ್ಪೆಷಲ್ ತರಗತಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ,ಮಾಸ್ತರ ಎಸ್ಕೇಪ್..!

ಎಸ್ಟಿ ನಕಲಿ ಜಾತಿ ಪ್ರಮಾಣ ಪತ್ರ ವಿತರಣೆ ಹಾಗೂ ಅನ್ಯ ಪ್ರಬಲ ಜಾತಿ ಎಸ್ಟಿ ಸೇರ್ಪಡೆ ವಿರೋಧಿಸಿ ವಾಲ್ಮೀಕಿ ಸಮುದಾಯ ಪ್ರತಿಭಟನೆ.

ರಾಣೆಬೆನ್ನೂರು: ನಾಯಕ ತಳವಾರ ಮತ್ತು ಪರಿವಾರ ಮಾತ್ರ ಪರಿಶಿಷ್ಟ ಪಂಗಡಕ್ಕೆ ಸೇರಿದ್ದು ಹಿಂದುಳಿದ ವರ್ಗದ ಜಾತಿಗಳಿಗೆ ತಳವಾರ ಹೆಸರಿನಲ್ಲಿ ನಕಲಿ ಎಸ್.ಟಿ. ಜಾತಿ ಪ್ರಮಾಣ ಪತ್ರ ನೀಡುತ್ತಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ, ವಾಲ್ಮೀಕಿ ನಾಯಕ ಸಮಾಜದಿಂದ ಗುರುವಾರ ಪ್ರತಿಭಟನೆ ನಡೆಸಿದರು.

ತಾಲೂಕು ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಸಮಾಜದ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಪಾದಯಾತ್ರೆ ಮೂಲಕ ತಹಸೀಲ್ದಾರ ಕಚೇರಿಗೆ ತೆರಳಿ, ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಸಮಾಜದ ಮುಖಂಡ ಚಂದ್ರಣ್ಣ ಬೇಡರ ಮಾತನಾಡಿ, ನಕಲಿ ಜಾತಿ ಪ್ರಮಾಣ ಪತ್ರಗಳ ಹಾವಳಿ ರಾಜ್ಯ ಸರ್ಕಾರ ಕೂಡಲೇ ನಿಲ್ಲಿಸಬೇಕು ಮತ್ತು ಪರಿಶಿಷ್ಟ ಪಂಗಡದ ನಿಜವಾದ ನಾಯಕ ತಳವಾರರಿಗೆ ಅನ್ಯಾಯವಾಗುತ್ತಿರುವುದನ್ನು ತಡೆಗಟ್ಟಬೇಕು ಎಂದು ಒತ್ತಾಯಿಸಿದರು.

ಕರ್ನಾಟಕ ರಾಜ್ಯದಲ್ಲಿ ಪರಿಶಿಷ್ಟ ಪಂಗಡದ ನಾಯಕ ತಳವಾರ ಹೆಸರಿನಲ್ಲಿ ಅಕ್ರಮವಾಗಿ ಬೇರೆ ಸಮುದಾಯದವರು ಜಾತಿ ಪ್ರಮಾಣ ಪತ್ರಗಳನ್ನು ಪಡೆದು ಸೌಲಭ್ಯಗಳನ್ನು ವಂಚಿಸುತ್ತಿದ್ದಾರೆ. ಇದರಿಂದ ನೈಜ ತಳವಾರ ಜಾತಿಯವರಿಗೆ ಶಿಕ್ಷಣ, ನೇಮಕಾತಿ ಮತ್ತು ರಾಜಕೀಯ ಕ್ಷೇತ್ರಗಳಲ್ಲಿ ಘೋರ ಅನ್ಯಾಯ ಸಂಭವಿಸಿದೆ ಎಂದು ತಿಳಿಸಿದರು.

ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗೆ ಹೆಚ್ಚುವರಿ 1000 ಕೋಟಿ ರೂ. ಅನುದಾನ ಬಿಡುಗಡೆ ಮಾಡಬೇಕು. ನಕಲಿ ಜಾತಿ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಿ ಕ್ರಮ ಕೈಗೊಳ್ಳಬೇಕು. ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಅಧ್ಯಯನ ಪೀಠ ಸ್ಥಾಪಿಸಿ, ಪರಿಶಿಷ್ಟ ಪಂಗಡದ ಜನಾಂಗದ ಆರ್ಥಿಕ, ಶೈಕ್ಷಣಿಕ, ರಾಜಕೀಯ ವಿಷಯಗಳ ಬಗ್ಗೆ ಅಧ್ಯಯನ ಮಾಡಬೇಕು ಎಂದು ಹೇಳಿದರು.

ರಾಜ್ಯದ ಕೆಲ ತಾಲೂಕಿನಲ್ಲಿ ವಾಲ್ಮೀಕಿ ಭವನಗಳ ಕಟ್ಟಡ ಕಾಮಗಾರಿ ಅರ್ಧಕ್ಕೆ ನಿಂತಿವೆ ಕೂಡಲೇ ಸಿಎಂ ಸಿದ್ದರಾಮಯ್ಯ ಅವರು ಪೂರ್ಣಗೊಳಿಸಬೇಕು. ಜತೆಗೆ ವಿದ್ಯಾರ್ಥಿ ವೇತನ ಮತ್ತು ಸಹಾಯಧನಗಳನ್ನು ನಿರಂತರವಾಗಿ ನೀಡಬೇಕು. ಪರಿಶಿಷ್ಟ ಪಂಗಡದ ಹೆಸರಿನಲ್ಲಿ ನಕಲಿ ಜಾತಿ ಪ್ರಮಾಣ ಪತ್ರ ಪಡೆಯುತ್ತಿರುವ ಹೋರಾಟಗಾರರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ಹಿಂಪಡೆದು ಭದ್ರತೆ ಒದಗಿಸಬೇಕು. ಬೇರೆ ಪ್ರಬಲ ಸಮುದಾಯಗಳನ್ನು ಎಸ್.ಟಿ. ಪಟ್ಟಿಗೆ ಸೇರಿಸುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ಸಮಾಜದ ಮುಖಂಡರಾದ ರವಿಂದ್ರಗೌಡ ಪಾಟೀಲ, ಕರಬಸಪ್ಪ ಕೂಲೇರ, ಹನುಮಂತ ಮೀನಕಟ್ಟಿ, ರಾಜೇಂದ್ರ ಬಸೇನಾಯಕ, ಶಶಿಧರ ಬಸೇನಾಯಕ, ರಾಜು ಮಾದಮ್ಮನವರ, ಭೀಮಣ್ಣ ಎಡಚಿ, ಮೌನೇಶ ತಳವಾರ, ರಾಯಣ್ಣ ಮಾಗನೂರು, ಬಸವರಾಜ ತಳವಾರ, ಸಂಜೀವ ಶಿಡಗನಾಳ, ನಾಗೇಶ ತಳವಾರ, ರವಿ ತಳವಾರ, ಶ್ರೀನಿವಾಸ ಹುಬ್ಬಳ್ಳಿ, ಮಂಜುನಾಥ ತಳವಾರ ಮತ್ತಿತರರು ಹಾಜರಿದ್ದರು.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!