ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.

ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.

ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.

ಸ್ಪೆಷಲ್ ತರಗತಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ,ಮಾಸ್ತರ ಎಸ್ಕೇಪ್..!

ಬಿಜೆಪಿ, ಜೆಡಿಎಸ್ ಹಾಗೂ ರೈತ ನಾಯಕ ರವಿಂದ್ರಗೌಡ ಪಾಟೀಲ ನೇತೃತ್ವದಲ್ಲಿ ಬೃಹತ್ ರೈತರ ಹೋರಾಟ.

ನಗರದಲ್ಲಿ NDA ವತಿಯಿಂದ ಕಾಂಗ್ರೆಸ್ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ.

ಬೆಂಬಲ ಬೆಲೆ ನೀಡಲು ಆಗ್ರಹಿಸಿ ಸರ್ಕಾರದ ವಿರುದ್ಧ ನಾಳೆ ಬಿಜೆಪಿ-ಜೆಡಿಎಸ್ ಜಂಟಿ ಪ್ರತಿಭಟನೆ

ಹೆಂಡತಿ ಹೊಡೆದು ಕೊಲೆ ಮಾಡಿದ ಪತಿರಾಯ..

ನಾವು ಯಾರನ್ನು ಟಾರ್ಗೆಟ್ ಮಾಡಲ್ಲ, ಮಾಡಿದ್ರೆ ಬೀಡಲ್ಲ ಎಸ್ಪಿ ಯಶೋಧ ವಂಟಗೋಡಿ.

ದೈಹಿಕ ಸಂಪರ್ಕ ಮಾಡಿ ಯುವತಿಗೆ ಕೈಕೊಟ್ಟ ಯುವಕ. ಯುವತಿ ಆತ್ಮಹತ್ಯೆ ಹುಡಗನ‌ ಮನೆ ಮುಂದೆ ಶವವಿಟ್ಟು ಪ್ರತಿಭಟನೆ..

ತಮ್ಮನ ಸಾವಿನಿಂದ ಮನನೊಂದ ಅಕ್ಕನು ನೇಣಿಗೆ ಶರಣು…!

ಸಚಿವ ಶಿವಾನಂದ ಪಾಟೀರನ್ನ BJP ಎಂದ ರೊಬೋಟ್

ರಾಣೆಬೇನ್ನೂರ ನಗರದಲ್ಲಿ ಭವ್ಯವಾಗಿ ನಡೆದ ಆರ್ ಎಸ್ ಎಸ್ ಪಥ ಸಂಚಲನ, ಒಂದು ಸಾವಿರ ಗಣವೇಷಧಾರಿಗಳು ಭಾಗಿ

ಎರಡು ವರ್ಷದಲ್ಲಿ ಎಷ್ಟು ಬಾರಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಗೆ ಹಾಜರಾಗದ ದಲಿತ ವಿರೋಧಿ ಶಾಸಕ; ಮಾಜಿ ಶಾಸಕ ಅರುಣಕುಮಾರ ಪೂಜಾರ.

ಕುದರಿಹಾಳ ಗ್ರಾಮದಲ್ಲಿ ಸಿಡಿಲು ಬಡಿದು ಯುವ ಕೃಷಿಕ ಸಾವು

ಕೈ-ಕಮಲ ನಡುವೆ ರಾಜಕೀಯ ಪ್ರತಿಷ್ಠೆ; ನಗರಸಭೆ ಸಾಮಾನ್ಯ ಸಭೆ ಮುಂದೂಡಿಕೆ.

ಹಾನಗಲ್ ತಹಸೀಲ್ದಾರ ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ.

ಬಿಗರ ಊಟ ಮಾಡಿ ಬರುತ್ತಿದ್ದವರು ಮಸಣಕ್ಕೆ *ನಿಂತಿದ್ದ ಟ್ರ್ಯಾಕ್ಟರ್ ಟ್ರೈಲರ್ ಗೆ ಟಾಟಾ ಸುಪ್ರೋ ಡಿಕ್ಕಿ* *ಸ್ಥಳದಲ್ಲಿಯೆ ಮೂವರ ದುರ್ಮರಣ, 20ಕ್ಕೂ ಅಧಿಕರಿಗೆ ಗಂಭೀರ ಗಾಯ*

ತಾಪಂ ಪ್ರಭಾರ ಇಓ ಬಸವರಾಜ ಶಿಡೇನೂರ ಬಳಿ ಒಂದೂವರೆ ಕೋಟಿ ಆಸ್ತಿ..

ಕಂದಾಯ ನಿರೀಕ್ಷ ಅಶೋಕ‌ ಅರಳೇಶ್ವರ ಬಳಿ ಕೋಟ್ಯಾಂತರ ಆಸ್ತಿ ಪತ್ತೆ.

ಎಸ್ಟಿ ನಕಲಿ ಜಾತಿ ಪ್ರಮಾಣ ಪತ್ರ ವಿತರಣೆ ಹಾಗೂ ಅನ್ಯ ಪ್ರಬಲ ಜಾತಿ ಎಸ್ಟಿ ಸೇರ್ಪಡೆ ವಿರೋಧಿಸಿ ವಾಲ್ಮೀಕಿ ಸಮುದಾಯ ಪ್ರತಿಭಟನೆ.

ರಾಣೆಬೆನ್ನೂರು: ನಾಯಕ ತಳವಾರ ಮತ್ತು ಪರಿವಾರ ಮಾತ್ರ ಪರಿಶಿಷ್ಟ ಪಂಗಡಕ್ಕೆ ಸೇರಿದ್ದು ಹಿಂದುಳಿದ ವರ್ಗದ ಜಾತಿಗಳಿಗೆ ತಳವಾರ ಹೆಸರಿನಲ್ಲಿ ನಕಲಿ ಎಸ್.ಟಿ. ಜಾತಿ ಪ್ರಮಾಣ ಪತ್ರ ನೀಡುತ್ತಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ, ವಾಲ್ಮೀಕಿ ನಾಯಕ ಸಮಾಜದಿಂದ ಗುರುವಾರ ಪ್ರತಿಭಟನೆ ನಡೆಸಿದರು.

ತಾಲೂಕು ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಸಮಾಜದ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಪಾದಯಾತ್ರೆ ಮೂಲಕ ತಹಸೀಲ್ದಾರ ಕಚೇರಿಗೆ ತೆರಳಿ, ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಸಮಾಜದ ಮುಖಂಡ ಚಂದ್ರಣ್ಣ ಬೇಡರ ಮಾತನಾಡಿ, ನಕಲಿ ಜಾತಿ ಪ್ರಮಾಣ ಪತ್ರಗಳ ಹಾವಳಿ ರಾಜ್ಯ ಸರ್ಕಾರ ಕೂಡಲೇ ನಿಲ್ಲಿಸಬೇಕು ಮತ್ತು ಪರಿಶಿಷ್ಟ ಪಂಗಡದ ನಿಜವಾದ ನಾಯಕ ತಳವಾರರಿಗೆ ಅನ್ಯಾಯವಾಗುತ್ತಿರುವುದನ್ನು ತಡೆಗಟ್ಟಬೇಕು ಎಂದು ಒತ್ತಾಯಿಸಿದರು.

ಕರ್ನಾಟಕ ರಾಜ್ಯದಲ್ಲಿ ಪರಿಶಿಷ್ಟ ಪಂಗಡದ ನಾಯಕ ತಳವಾರ ಹೆಸರಿನಲ್ಲಿ ಅಕ್ರಮವಾಗಿ ಬೇರೆ ಸಮುದಾಯದವರು ಜಾತಿ ಪ್ರಮಾಣ ಪತ್ರಗಳನ್ನು ಪಡೆದು ಸೌಲಭ್ಯಗಳನ್ನು ವಂಚಿಸುತ್ತಿದ್ದಾರೆ. ಇದರಿಂದ ನೈಜ ತಳವಾರ ಜಾತಿಯವರಿಗೆ ಶಿಕ್ಷಣ, ನೇಮಕಾತಿ ಮತ್ತು ರಾಜಕೀಯ ಕ್ಷೇತ್ರಗಳಲ್ಲಿ ಘೋರ ಅನ್ಯಾಯ ಸಂಭವಿಸಿದೆ ಎಂದು ತಿಳಿಸಿದರು.

ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗೆ ಹೆಚ್ಚುವರಿ 1000 ಕೋಟಿ ರೂ. ಅನುದಾನ ಬಿಡುಗಡೆ ಮಾಡಬೇಕು. ನಕಲಿ ಜಾತಿ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಿ ಕ್ರಮ ಕೈಗೊಳ್ಳಬೇಕು. ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಅಧ್ಯಯನ ಪೀಠ ಸ್ಥಾಪಿಸಿ, ಪರಿಶಿಷ್ಟ ಪಂಗಡದ ಜನಾಂಗದ ಆರ್ಥಿಕ, ಶೈಕ್ಷಣಿಕ, ರಾಜಕೀಯ ವಿಷಯಗಳ ಬಗ್ಗೆ ಅಧ್ಯಯನ ಮಾಡಬೇಕು ಎಂದು ಹೇಳಿದರು.

ರಾಜ್ಯದ ಕೆಲ ತಾಲೂಕಿನಲ್ಲಿ ವಾಲ್ಮೀಕಿ ಭವನಗಳ ಕಟ್ಟಡ ಕಾಮಗಾರಿ ಅರ್ಧಕ್ಕೆ ನಿಂತಿವೆ ಕೂಡಲೇ ಸಿಎಂ ಸಿದ್ದರಾಮಯ್ಯ ಅವರು ಪೂರ್ಣಗೊಳಿಸಬೇಕು. ಜತೆಗೆ ವಿದ್ಯಾರ್ಥಿ ವೇತನ ಮತ್ತು ಸಹಾಯಧನಗಳನ್ನು ನಿರಂತರವಾಗಿ ನೀಡಬೇಕು. ಪರಿಶಿಷ್ಟ ಪಂಗಡದ ಹೆಸರಿನಲ್ಲಿ ನಕಲಿ ಜಾತಿ ಪ್ರಮಾಣ ಪತ್ರ ಪಡೆಯುತ್ತಿರುವ ಹೋರಾಟಗಾರರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ಹಿಂಪಡೆದು ಭದ್ರತೆ ಒದಗಿಸಬೇಕು. ಬೇರೆ ಪ್ರಬಲ ಸಮುದಾಯಗಳನ್ನು ಎಸ್.ಟಿ. ಪಟ್ಟಿಗೆ ಸೇರಿಸುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ಸಮಾಜದ ಮುಖಂಡರಾದ ರವಿಂದ್ರಗೌಡ ಪಾಟೀಲ, ಕರಬಸಪ್ಪ ಕೂಲೇರ, ಹನುಮಂತ ಮೀನಕಟ್ಟಿ, ರಾಜೇಂದ್ರ ಬಸೇನಾಯಕ, ಶಶಿಧರ ಬಸೇನಾಯಕ, ರಾಜು ಮಾದಮ್ಮನವರ, ಭೀಮಣ್ಣ ಎಡಚಿ, ಮೌನೇಶ ತಳವಾರ, ರಾಯಣ್ಣ ಮಾಗನೂರು, ಬಸವರಾಜ ತಳವಾರ, ಸಂಜೀವ ಶಿಡಗನಾಳ, ನಾಗೇಶ ತಳವಾರ, ರವಿ ತಳವಾರ, ಶ್ರೀನಿವಾಸ ಹುಬ್ಬಳ್ಳಿ, ಮಂಜುನಾಥ ತಳವಾರ ಮತ್ತಿತರರು ಹಾಜರಿದ್ದರು.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!