ರಾಣೆಬೆನ್ನೂರ: ನಗರದ ಎರಡು ಕಡೆಗಳಲ್ಲಿ ಮಂಗಳವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸುವ ಮೂಲಕ ಅಕ್ರಮ ಆಸ್ತಿಗಳಿಸಿದ ಸರ್ಕಾರಿ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ.
ಇಲ್ಲಿಯ ಚೋಳಮರಡೇಶ್ವರ ನಗರದ ನಿವಾಸಿ ಸವಣೂರ ತಾಪಂ ಪ್ರಭಾರ ಇಓ ಬಸವರಾಜ ಶಿಡೇನೂರ ಹಾಗೂ ಸಿದ್ದೇಶ್ವರ ನಗರದ ನಿವಾಸಿ ರಾಣೆಬೆನ್ನೂರ ಕಂದಾಯ ನಿರೀಕ್ಷಕ ಅಶೋಕ ಅರಳೇಶ್ವರ ಮನೆ ಮೇಲೆ ದಾಳಿಯಾಗಿರುವುದು.
ದಾವಣಗೆರೆ ಹಾಗೂ ಹಾವೇರಿ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು ಮನೆಯಲ್ಲಿರುವ ದಾಖಲಾತಿ, ಚಿನ್ನಾಭರಣ ಹಾಗೂ ನಗದು ಪರಿಶೀಲನೆ ನಡೆಸುತ್ತಿದ್ದಾರೆ.
ಇಬ್ಬರ ಮನೆಯಲ್ಲೂ ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ, ಸೈಟು, ಜಮೀನು ಸೇರಿದಂತೆ ಅಕ್ರಮವಾಗಿ ಖರೀದಿಸಿದ ದಾಖಲಾತಿ ದೊರೆತಿದ್ದು, ಅಧಿಕಾರಿಗಳು ಪರೀಶಿಲನೆ ನಡೆಸಿದ್ದಾರೆ
More Stories
ಕೈ-ಕಮಲ ನಡುವೆ ರಾಜಕೀಯ ಪ್ರತಿಷ್ಠೆ; ನಗರಸಭೆ ಸಾಮಾನ್ಯ ಸಭೆ ಮುಂದೂಡಿಕೆ.
ಹಾನಗಲ್ ತಹಸೀಲ್ದಾರ ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ.
ಬಿಗರ ಊಟ ಮಾಡಿ ಬರುತ್ತಿದ್ದವರು ಮಸಣಕ್ಕೆ *ನಿಂತಿದ್ದ ಟ್ರ್ಯಾಕ್ಟರ್ ಟ್ರೈಲರ್ ಗೆ ಟಾಟಾ ಸುಪ್ರೋ ಡಿಕ್ಕಿ* *ಸ್ಥಳದಲ್ಲಿಯೆ ಮೂವರ ದುರ್ಮರಣ, 20ಕ್ಕೂ ಅಧಿಕರಿಗೆ ಗಂಭೀರ ಗಾಯ*