ರಾಣೆಬೇನ್ನೂರು ಸುದ್ದಿ: ಹೆಣ್ಣು ಮಕ್ಕಳ ಬಗ್ಗೆ ಅಶ್ಲೀಲ ಪದಗಳನ್ನು ಹಾಗೂ ಅವಹೇಳನ ಮಾಡಿದ್ದ ನಟಿ, ಬಿಜೆಪಿ ಮುಖಂಡೆ ಶೃತಿ ಹಾಗೂ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ರಾಣೆಬೇನ್ನೂರು ನಗರದಲ್ಲಿ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಗರದ ತಹಸೀಲ್ದಾರ ಕಚೇರಿ ಮುಂಭಾಗ ಸೇರಿದ ನೂರಾರು ಕಾಂಗ್ರೆಸ್ ಮಹಿಳಾ ಕಾರ್ಯಕರ್ತರು ಶೃತಿ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.
ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳನ್ನು ಟೀಕಿಸುವ ಭರದಲ್ಲಿ ಹೆಣ್ಣು ಮಕ್ಕಳಿಗೆ ಅಶ್ಲೀಲ ಹಾಗೂ ಅವಹೇಳನ ಮಾತುಗಳನ್ನು ಆಡಿದ್ದ ಶೃತಿ ಅವರಿಗೆ ಎಷ್ಟು ಜನ ಗಂಡಂದಿರು ಎಂದು ಮಹಿಳಾ ಕಾಂಗ್ರೆಸ್ ಕಾರ್ಯಕರ್ತರ ಪ್ರಶ್ನಿಸಿದರು.
ಇನ್ನೂ ಮಾಜಿ ಸಿಎಂ ಕುಮಾರಸ್ವಾಮಿ ಅವರು ಈಗಾಗಲೇ ಎರಡು ಮದುವೆಯಾಗಿದ್ದಾರೆ ಆದರೂ ಹೆಣ್ಣು ಮಕ್ಕಳ ಬಗ್ಗೆ ಮಾತನಾಡುವುದು ಕಡಿಮೆ ಮಾಡಿಲ್ಲ. ಅವರಿಗೆ ಹೆಣ್ಣು ಮಕ್ಕಳು ಈ ಚುನಾವಣೆಯಲ್ಲಿ ಸರಿಯಾದ ಬುದ್ದಿ ಕಲಿಸಬೇಕು ಎಂದು ಪೂರ್ಣಿಮಾ ಕೋಳಿವಾಡ ಹೇಳಿದರು.
ನಂತರ ಇವರ ಮೇಲೆ ಚುನಾವಣೆ ಆಯೋಗ ಕ್ರಮ ಕೈಗೊಳ್ಳಬೇಕು ಎಂದು ತಹಸೀಲ್ದಾರ ಮೂಲಕ ಮನವಿ ಸಲ್ಲಿಸಿದರು.

More Stories
ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.
ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.
ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.