ರಾಣೆಬೇನ್ನೂರ: ಜನರು ಸಂಚಾರ ನಿಯಮಗಳನ್ನು ಸರಿಯಾಗಿ ಪಾಲಿಸಿ, ಇಲ್ಲವಾದರೆ ಸಂಚಾರ ನಿಯಮಗಳನ್ನು ಉಲ್ಲಂಘನೆ ಮಾಡಿದರೆ ಟೋಯಿಂಗ್ ವಾಹನ ಮೂಲಕ ನಿಮ್ಮ ವಾಹನವನ್ನು ತೆಗೆದುಕೊಂಡು ಹೋಗಲಾಗುವುದು ಎಂದು ಜಿಲ್ಲಾ ಪೋಲಿಸ ವರಿಷ್ಠಾಧಿಕಾರಿ ಯಶೋಧ ವಂಟಗೋಡಿ ಹೇಳಿದರು.
ನಗರದಲ್ಲಿ ಬುಧವಾರ ಶಾಸಕರ ಅನುದಾನ ಅಡಿಯಲ್ಲಿ ಖರೀದಿಸಿದ ನೂತನ ಟೋಯಿಂಗ್ ವಾಹನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ರಾಣೆಬೇನ್ನೂರ ನಗರ ಪ್ರತಿನಿತ್ಯವೂ ಬೆಳೆಯುತ್ತಿರುವ ವಾಣಿಜ್ಯ ನಗರವಾಗಿದೆ. ಇದರಿಂದ ನಿತ್ಯವೂ ಸಂಚಾರ ದಟ್ಟಣೆ ಹೆಚ್ಚಾಗಿದ್ದು ಸಾರ್ವಜನಿಕರಿಗೆ ತೊಂದರೆಗಳನ್ನು ಉಂಟುಮಾಡುತ್ತಿದೆ. ಅಲ್ಲದೆ ವಾಹನ ಸವಾರರು ಸಹ ಸಂಚಾರ ನಿಯಮಗಳನ್ನು ಉಲ್ಲಂಘಿಸಿ ವಾಹನಗಳ ರಸ್ತೆಯ ಮೇಲೆ ಪಾರ್ಕಿಂಗ್ ಮಾಡುತ್ತಿರುವುದು ಕಂಡು ಬಂದಿದೆ. ಇದರಿಂದ ಇಂತಹ ಉಲ್ಲಂಘನೆ ಮಾಡಿದವರ ಮೇಲೆ ನಿಗಾ ಇಡಲು ಶಾಸಕರು ಟೋಯಿಂಗ್ ವಾಹನವನ್ನು ಇಲಾಖೆಗೆ ನೀಡಿದ್ದಾರೆ ಎಂದು ಹೇಳಿದರು.
ಇನ್ನೂ ನಾವು ಯಾರನ್ನು ಟಾರ್ಗೆಟ್ ಮಾಡುವುದಿಲ್ಲ ಆದರೆ ವಾಹನ ಸವಾರರಿಗೆ ಎಚ್ಚರಿಕೆ ನೀಡಬೇಕು ಎಂಬ ಉದ್ದೇಶ ಹಾಗೂ ಸಂಚಾರ ನಿಯಮಗಳನ್ನು ಪಾಲನೆ ಮಾಡಬೇಕು ಎಂಬ ಉದ್ದೇಶ ನಮ್ಮದಾಗಿದೆ ಎಂದರು.
ಶಾಸಕ ಪ್ರಕಾಶ ಕೋಳಿವಾಡ ಮಾತನಾಡಿ, ರಾಣೆಬೇನ್ನೂರ ನಗರಕ್ಕೆ ಈ ಟೋಯಿಂಗ್ ವಾಹನ ಅವಶ್ಯಕತೆ ಇದೆ ಎಂಬದು ನಾನು ಶಾಸಕನಾಗುವು ಮುಂಚೆ ಯೋಚನೆ ಮಾಡಿದ್ದೆ. ಇದರ ಉದ್ದೇಶ ನಗರದಲ್ಲಿ ಕೈಗಾರಿಕೆ, ವಾಣಿಜ್ಯ ಹಾಗೂ ಸಾರ್ವಜನಿಕರು ಸುಲಲಿತವಾಗಿ ಕೆಲಸ ಆಗಬೇಕು ಎಂಬ ಉದ್ದೇಶ ಇದೆ ಎಂದು ತಿಳಿಸಿದರು.
ನಂತರ ಸಾರ್ವಜನಿಕರಿಗೆ ಟೋಯಿಂಗ್ ವಾಹನ ಬಗ್ಗೆ ಅರಿವು ಮೂಡಿಸಲು ನಗರದ ಕೆ.ಇ.ಬಿ. ಗಣೇಶ ದೇವಸ್ಥಾನದಿಂದ ಅಂಚೆ ವೃತ್ತದವರಿಗೆ ಜಾಥ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಡಿಎಸ್ಪಿ ಜೆ.ಲೋಕೆಶಪ್ಪ, ಸಿಪಿಐ ಸಿದ್ದೇಶ, ನಾಗಯ್ಯ ಕಾಡದೇವರ, ವೆಂಕಟರೆಡ್ಡಿ, ನಗರಸಭೆ ಪೌರಾಯುಕ್ತ ಫಕ್ಕಿರಪ್ಪ ಇಂಗಳಗಿ ಸೇರಿದಂತೆ ಪೊಲೀಸ್ ಸಿಬ್ಬಂದಿ ಹಾಗೂ ಸಾರ್ವಜನಿಕರು ಭಾಗಿಯಾಗಿದ್ದರು.

More Stories
ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.
ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.
ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.