ರಾಣೆಬೇನ್ನೂರ: ಕುಡಿದು ನಿಶೆಯಲ್ಲಿ ಗಂಡನೊಬ್ಬ ಹೆಂಡತಿಯನ್ನು ಹೊಡೆದು ಕೊಲೆ ಮಾಡಿದ ಘಟನೆ ತಾಲೂಕಿನ ವಡೇರಾಯನಹಳ್ಳಿ ಗ್ರಾಮದಲ್ಲಿ ಗುರುವಾರ ನಡೆದಿದೆ.
ಮೃತಳನ್ನ ಪವಿತ್ರಾ ಮಂಜಯ್ಯ ಊದಗಟ್ಟಿ(42) ಕೊಲೆಯಾದ ಮಹಿಳೆ ಎಂದು ತಿಳಿದು ಬಂದಿದೆ.
ಗಂಡ ಮಂಜಯ್ಯ ಕುಡಿತದ ದಾಸನಾಗಿದ್ದು ಪ್ರತಿ ನಿತ್ಯವೂ ಕುಡಿದು ಬಂದು ಹೆಂಡತಿ ಜತೆ ಕ್ಯಾತೆ ತಗೆಯುತ್ತಿದ್ದ. ಈ ಹಿನ್ನಲೆ ಹೆಂಡತಿಯ ಜತೆ ತಡರಾತ್ರಿ ಜಗಳ ಮಾಡಿ ಹೊಡೆದು ಕೊಲೆ ಮಾಡಿದ್ದಾನೆ ಎಂದು ಮೃತಳ ತಾಯಿ ಪೋಲಿಸ್ ಠಾಣೆಗೆ ದೂರು ನೀಡಿದ್ದಾರೆ.
ಮೃತ ಪವಿತ್ರಾಗೆ ಮೂರು ಹೆಣ್ಣು ಮಕ್ಕಳು ಇದ್ದು ಇದೀಗ ಅನಾಥವಾಗಿವೆ. ಸ್ಥಳಕ್ಕೆ ಕುಮಾರಪಟ್ಟಣಂ ಪೋಲಿಸರು ಭೇಟಿ ನೀಡಿ ಆರೋಪಿಯನ್ನು ವಶಪಡಿಸಿಕೊಂಡಿದ್ದಾರೆ.

More Stories
16 ಲಕ್ಷ ಮೌಲ್ಯದ ಬಂಗಾರ ಮಾರಾಟ ಮಾಡಲು ಯತ್ನಿಸಿದ ಮಹಿಳೆ ಬಂಧನ…
ಹಾವೇರಿ ಜಿಲ್ಲಾಸತ್ರ ಕೋರ್ಟ್‌ಗೆ ಬಾಂಬ್ ಬೆದರಿಕೆ ಪತ್ರ; ಕೋರ್ಟನಿಂದ ಓಡಿ ಬಂದ ಕಕ್ಷಿದಾರರು, ವಕೀಲರು.
ಸಿಎಂ ಕುರ್ಚಿ ಗುದ್ದಾಟದ ವಿಚಾರ…! ಮತ್ತೆ ಗರಂ ಆದ ಸಿಎಂ ಸಿದ್ಧರಾಮಯ್ಯ.