ರಾಣೆಬೆನ್ನೂರ: ರೈತರ ಬೆಳೆಗಳಿಗೆ ಬೆಂಬಲ ಬೆಲೆಯಿಲ್ಲ. ಬೆಳಹಾನಿಗೆ ಪರಿಹಾರವಿಲ್ಲ. ಹೀಗಾಗಿ ರೈತ ವಿರೋಧಿ ಸರ್ಕಾರದ ಕ್ರಮ ಖಂಡಿಸಿ ಎನ್‌ಡಿಎ ಹಾಗೂ ಜೆಡಿಎಸ್ ಪಕ್ಷದ ವತಿಯಿಂದ ನಾಳೆ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಮಾಜಿ ಶಾಸಕ ಆರುಣಕುಮಾರ ಪೂಜಾರ ಹೇಳಿದರು.
ನಗರದ ಬಿಜೆಪಿ ಕಾರ್ಯಾಲಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ರೈತನಿಗೆ ನಮ್ಮದಿ ಇಲ್ಲದಾಗಿದೆ. ರೈತನು ಬೆಳೆದ ಮೆಕ್ಕೆಜೋಳ ಹಾಗೂ ಕಬ್ಬಿಗೆ ಬೆಂಬಲ ಬೆಲೆ ನೀಡಬೇಕಾಗಿದೆ. ರೈತರ ಹೋರಾಟಕ್ಕೆ ಮಣಿದ ಸರ್ಕಾರ ಬೆಳಗಾವಿ ಭಾಗದಲ್ಲಿ ಕಬ್ಬು ಬೆಳಗಾರರಿಗೆ 3300ರೂ. ನೀಡಲಾಗುತ್ತಿದೆ. ಹೀಗಾಗಿ ರಾಜ್ಯದ ಎಲ್ಲಾ ಕಬ್ಬು ಬೆಳೆಗಾರರಿಗೆ 3500ರೂ, ಬೆಂಬಲ ಬೆಲೆ ನೀಡಬೇಕು. ಈ ಭಾಗದಲ್ಲಿ ಭತ್ತ ಬೆಳೆಗಾರರು ಹೆಚ್ಚಾಗಿದ್ದು, ಈಗಾಗಲೇ ಕೇಂದ್ರ ಸರ್ಕಾರ ಬೆಂಬಲ ನೀಡಿದೆ. ಆದ್ದರಿಂದ ರಾಜ್ಯ ಸರ್ಕಾರವು ಭತ್ತಕ್ಕೆ ಹೆಚ್ಚಿನ ಬೆಲೆ ನೀಡಬೇಕು ಎಂದು ಒತ್ತಾಯಿಸಿದರು.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಿ.ಎಸ್. ವೈ ಹಾಗೂ ಬಸವರಾಜ ಬೊಮ್ಮಾಯಿ ಅವರು ಕೃಷಿ ಬಜೆಟ್ ಮಂಡನೆ ಮಾಡುವ ಮೂಲಕ ರೈತರ ಹಿತಕಾಯುವ ಕೆಲಸ ಮಾಡಿದ್ದರು. ಆದರೆ ಕಾಂಗ್ರೆಸ್ ಸರ್ಕಾರ ರೈತರನ್ನು ಸಂಪೂರ್ಣವಾಗಿ ಕಡೆಗಾಣಿಸಿದ್ದು, ಸರ್ಕಾರದ ಕ್ರಮವನ್ನು ಖಂಡಿಸಿ ಪ್ರತಿಭಟನೆ ನಡೆಸಲಾಗುತ್ತಿದೆ. ಆದ್ದರಿಂದ ನಗರ ಹಾಗೂ ಗ್ರಾಮೀಣ ಘಟಕದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ವಿನಂಶಿಸಿದರು.
ಈ ಸಮಯದಲ್ಲಿ ಬಹಾರ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು.
ರಾಜ್ಯ ಘಟಕದ ಉಪಾಧ್ಯಕ್ಷ ಡಾ.ಬಸವರಾಜ ಕೇಲಗಾರ, ನಗರ ಘಟಕದ ಅಧ್ಯಕ್ಷ ಮಂಜುನಾಥ ಕಾಟ, ಗ್ರಾಮೀಣ ಘಟಕದ ಅಧ್ಯಕ್ಷ ಸುಭಾಶಶಿರಗೇರಿ, ಚೋಳಪ್ಪ ಕಸವಾಳ, ಕೆ.ಶಿವಲಿಂಗಪ್ಪ, ಎಸ್.ಎಸ್. ರಾಮಲಿಂಗಣ್ಣನವರ, ಭಾರತಿ ಜಂಬಗಿ, ನಿಂಗರಾಜ ಕೋಡಿಹಳ್ಳಿ, ಪ್ರಕಾಶ ಪೂಜಾರ, ಸಿದ್ದಪ್ಪ ಚಿಕ್ಕಬಿದರಿ ಸೇರಿದಂತೆ ಮತ್ತಿತರರು ಇದ್ದರು. ಎ.ಬಿ.ಪಾಟೀಲ,

More Stories
ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ* *ಸವಣೂರ ತಾಪಂ ಪ್ರಭಾರ ಇಓ, ರಾಣೆಬೆನ್ನೂರ ಆರ್ ಐ ಮನೆ ಮೇಲೆ ದಾಳಿ..
ಸಮಾಜದಲ್ಲಿ ದುರ್ಬಲರನ್ನ ಗುರುತಿಸುವುದು ನಿಜವಾದ ಪತ್ರಿಕೋದ್ಯಮ; ಮಾಲತೇಶ ಅಂಗೂರು
ಸರಿಯಾದ ಮಾಹಿತಿ ನೀಡುವ ಮೂಲಕ ಸಮೀಕ್ಷೆ ಯಶಸ್ವಿ ಮಾಡಿ ಶಾಸಕ ಪ್ರಕಾಶ ಕೋಳಿವಾಡ