ರಾಣೆಬೇನ್ನೂರ: ರೈತರ ಬೆಳೆಗಳಿಗೆ ಬೆಂಬಲ ಬೆಲೆ. ಬೆಳಹಾನಿ ಪರಿಹಾರವನ್ನು ರೈತರಿಗೆ ನೀಡುವಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ಕ್ರಮ ಖಂಡಿಸಿ ಬಿಜೆಪಿ, ಜೆಡಿಎಸ್ ಪಕ್ಷ ಹಾಗೂ ರೈತರು ನಗರದಲ್ಲಿ ಸೋಮವಾರ ಬೃಹತ್ ಪ್ರತಿಭಟನೆ ನಡೆಸಿದರು.
ನಗರದ ಕೆಇಬಿ ಗಣೇಶ ದೇವಸ್ಥಾನದಿಂದ ಎತ್ತಿನ ಚಕ್ಕಡಿ ಮೂಲಕ ಆರಂಭವಾದ ಪ್ರತಿಭಟನೆ ಮೆರವಣಿಗೆ ಬಸ್ ನಿಲ್ದಾಣ, ಹಲಗೇರಿ ವೃತ್ತ, ಕುರಬಗೇರಿ ಕ್ರಾಸ್ ಮೂಲಕ ತಹಶಿಲ್ದಾರ ಕಚೇರಿವರಗೆ ನಡೆಯಿತು.
ಮಾಜಿ ಶಾಸಕ ಅರುಣಕುಮಾರ ಪೂಜಾರ ಮಾತನಾಡಿ, ಕಾಂಗ್ರೆಸ್ ಸರ್ಕಾರ ರಾಜ್ಯದ ರೈತನಿಗೆ ನಮ್ಮದಿ ಇಲ್ಲದಂತೆ ಮಾಡಿದೆ. ರೈತನು ತಾನು ಬೆಳೆದ ಮೆಕ್ಕೆಜೋಳ ಹಾಗೂ ಕಬ್ಬಿಗೆ ಬೆಂಬಲ ಬೆಲೆ ನೀಡಬೇಕಾಗಿದೆ. ರೈತರ ಹೋರಾಟಕ್ಕೆ ಮಣಿದ ಸರ್ಕಾರ ಬೆಳಗಾವಿ ಭಾಗದಲ್ಲಿ ಕಬ್ಬು ಬೆಳಗಾರರಿಗೆ 3300ರೂ. ನೀಡಲಾಗುತ್ತಿದೆ. ಹೀಗಾಗಿ ರಾಜ್ಯದ ಎಲ್ಲಾ ಕಬ್ಬು ಬೆಳೆಗಾರರಿಗೆ 3500ರೂ, ಬೆಂಬಲ ಬೆಲೆ ನೀಡಬೇಕು. ಈ ಭಾಗದಲ್ಲಿ ಭತ್ತ ಬೆಳೆಗಾರರು ಹೆಚ್ಚಾಗಿದ್ದು, ಈಗಾಗಲೇ ಕೇಂದ್ರ ಸರ್ಕಾರ ಬೆಂಬಲ ನೀಡಿದೆ. ಆದ್ದರಿಂದ ರಾಜ್ಯ ಸರ್ಕಾರವು ಭತ್ತಕ್ಕೆ ಹೆಚ್ಚಿನ ಬೆಲೆ ನೀಡಬೇಕು ಎಂದು ಆಗ್ರಹಿಸಿದರು.
ಜೆಡಿಎಸ್ ಮುಖಂಡ ಮಂಜುನಾಥ ಗೌಡಶಿವಣ್ಣನವರ ಮಾತನಾಡಿ, ರಾಜ್ಯದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಸರ್ಕಾರ ಇದ್ದ ಸಮಯದಲ್ಲಿ ರಾಜ್ಯದ ರೈತರ ಸಾಲಮನ್ನಾ ಮಾಡುವ ಮೂಲಕ ರಾಜ್ಯದ ರೈತರ ಜೀವನ ಉಳಿಸಿದವರು. ಆದರೆ ಕಾಂಗ್ರೆಸ್ ಸರ್ಕಾರ ರೈತರನ್ನು ಸಂಪೂರ್ಣವಾಗಿ ಕಡೆಗಣಿಸಿದ್ದು ರಾಜ್ಯದ ರೈತರಿಗೆ ಅನ್ಯಾಯ ಮಾಡುತ್ತಿದೆ ಎಂದು ಹೇಳಿದರು.
ಕೂಡಲೇ ರಾಜ್ಯ ಸರ್ಕಾರ ರೈತರಿಗೆ ಬೆಂಬಲ ಬೆಲೆ ಹಾಗೂ ಪರಿಹಾರ ನೀಡಬೇಕು ಎಂದು ತಿಳಿಸಿದರು.
ನಂತರ ತಹಶಿಲ್ದಾರರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲಿ ರಾಜ್ಯ ಘಟಕದ ಉಪಾಧ್ಯಕ್ಷ ಡಾ.ಬಸವರಾಜ ಕೇಲಗಾರ, ನಗರ ಘಟಕದ ಅಧ್ಯಕ್ಷ ಮಂಜುನಾಥ ಕಾಟಿ, ಗ್ರಾಮೀಣ ಘಟಕದ ಅಧ್ಯಕ್ಷ ಸುಭಾಶ ಶಿರಗೇರಿ, ಚೋಳಪ್ಪ ಕಸವಾಳ, ಸಂತೋಷಕುಮಾರ ಪಾಟೀಲ, ಕೆ.ಶಿವಲಿಂಗಪ್ಪ, ಎಸ್.ಎಸ್. ರಾಮಲಿಂಗಣ್ಣನವರ, ಭಾರತಿ ಜಂಬಗಿ, ನಿಂಗರಾಜ ಕೋಡಿಹಳ್ಳಿ, ಪ್ರಕಾಶ ಪೂಜಾರ, ಸಿದ್ದಪ್ಪ ಚಿಕ್ಕಬಿದರಿ, ಮೌನೇಶ ತಳವಾರ, ಮಲ್ಲಿಕಾರ್ಜುನ ಅಂಗಡಿ, ಸೇರಿದಂತೆ ಮತ್ತಿತರರು ಇದ್ದರು. ಎ.ಬಿ.ಪಾಟೀಲ ಮತ್ತಿತರಿದ್ದರು.

More Stories
ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.
ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.
ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.