ರಾಣೆಬೇನ್ನೂರ: ರೈತರು ಬೆಳೆದ ಮೆಕ್ಕೆಜೋಳ, ಕಬ್ಬು ಹಾಗೂ ಭತ್ತಕ್ಕೆ ಬೆಂಬಲ ನೀಡುವಂತೆ ಆಗ್ರಹಿಸಿ ತಾಲೂಕಿನ ಮಾಕನೂರು ಕ್ರಾಸ್ ಬಳಿ ಕರ್ನಾಟಕ ರಾಜ್ಯ ರೈತ ಸಂಘಟನೆ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.
ತಾಲೂಕಿನ ಕೋಡಿಯಾಲ ಹೊಸಪೇಟೆ ಗ್ರಾಮದ ಮಹರ್ಷಿ ವಾಲ್ಮೀಕಿ ವೃತ್ತದಿಂದ ಆರಂಭವಾದ ಮೆರವಣಿಗೆಗೆ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಹಾಗೂ ಪುಣ್ಯಕೋಟಿ ಮಠದ ಬಾಲಯೋಗಿ ಜಗದೀಶ್ವರ ಸ್ವಾಮೀಜಿ ಮೆರವಣಿಗೆಗೆ ಚಾಲನೆ ನೀಡಿದರು.
ಮೆರವಣಿಗೆಯಲ್ಲಿ ಭಾಗಿಯಾದ ರೈತರು ಕಾಲ್ನಡಿಗೆ ಮೂಲಕ ಪಿ.ಬಿ.ರಸ್ತೆ ಮಾರ್ಗವಾಗಿ ಸುಮಾರು ಒಂದು ಕಿ.ಮೀ ವರಗೆ ಸಾಗಿ ಮಾಕನೂರು ಕ್ರಾಸ್ ಬಳಿ ಬಂದು ಸೇರಿದರು. ಜಿಲ್ಲೆಯ ರೈತರಿಗೆ ಸೂಕ್ತ ಬೆಲೆ ದೊರೆಯುವವರೆಗೂ ಹಾಗೂ ಜಿಲ್ಲಾಧಿಕಾರಿಯವರು ಬೆಂಬಲ ಬೆಲೆ ಘೋಷಣೆ ಮಾಡುವವರೆಗೂ ಧರಣಿ ಮುಂದುವರಿಯಲಿದೆ ಎಂದು ಎಚ್ಚರಿಸಿದರು.
ಮಾಜಿ ಶಾಸಕ ಅರುಣಕುಮಾರ ಪೂಜಾರ ಮಾತನಾಡಿ, ರಾಜ್ಯ ಸರ್ಕಾರ ಬೆಳಗಾವಿ ಜಿಲ್ಲೆಯ ರೈತರಿಗೆ ಒಂದು ನ್ಯಾಯ ಹಾಗೂ ಹಾವೇರಿ ರೈತರಿಗೆ ಮತ್ತೊಂದು ನ್ಯಾಯ ಮಾಡುತ್ತಿದೆ. ಇದರಿಂದ ಜಿಲ್ಲೆಯಲ್ಲಿ ಕಬ್ಬು, ಭತ್ತ, ಮೆಕ್ಕೆಜೋಳ ಬೆಳೆಗಾರರಿಗೆ ಅನ್ಯಾಯವಾಗುತ್ತಿದೆ. ಆದ್ದರಿಂದ ರಾಜ್ಯ ಸರ್ಕಾರ ಕೂಡಲೇ ಸೂಕ್ತ ಕ್ರಮ ಕೈಗೊಂಡು ಬೆಳಗಾವಿ ಕಬ್ಬು ಬೆಳೆಗಾರರಿಗೆ ನೀಡಿದ ದರವನ್ನು ಹಾವೇರಿ ಬೆಳೆಗಾರರಿಗೂ ನೀಡಬೇಕು ಎಂದು ಆಗ್ರಹಿಸಿದರು.
ರೈತ ಸಂಘದ ಸಂಘಟನಾ ಕಾರ್ಯದರ್ಶಿ ರವೀಂದ್ರಗೌಡ ಪಾಟೀಲ ಮಾತನಾಡಿ, ಜಿಲ್ಲೆಯಲ್ಲಿ ಕಬ್ಬು, ಭತ್ತ ಹಾಗೂ ಮೆಕ್ಕೆಜೋಳ ಪ್ರಮುಖ ಬೆಳೆಗಳಾಗಿವೆ. ಶೇ. 80ರಷ್ಟು ರೈತರು ಈ ಬೆಳೆಗಳ ಮೇಲೆ ಅವಲಂಬಿತರಾಗಿದ್ದಾರೆ. ಆದರೆ, ಬೆಳೆ ಚನ್ನಾಗಿ ಬೆಳೆದರೂ ರೈತರಿಗೆ ಬೆಲೆ ದೊರೆಯುತ್ತಿಲ್ಲ. ಹೀಗಾಗಿ ರೈತ ಸರಣಿ ಆತ್ಮಹತ್ಯೆ ಪ್ರಕರಣ ನಿಯಂತ್ರಣಕ್ಕೆ ಬರುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರ ಕೂಡಲೇ ಕಬ್ಬು ಬೆಳೆಗಾರರಿಗೆ ಪ್ರತಿ ಟನ್ಗೆ 3500 ರೂ., ಪ್ರತಿ ಕ್ವಿಂಟಾಲ್ ಮೆಕ್ಕೆಜೋಳಕ್ಕೆ 3 ಸಾವಿರ ರೂ. ಹಾಗೂ ಭತ್ತಕ್ಕೆ 3300 ರೂ. ಬೆಂಬಲ ಬೆಲೆ ಘೋಷಣೆ ಮಾಡಬೇಕು. ಅಲ್ಲಿಯವರೆಗೆ ಧರಣಿ ಕೈಬಿಡುವುದಿಲ್ಲ ಎಂದು ಪಟ್ಟುಹಿಡಿದರು.
ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ, ಪುಣ್ಯಕೋಟಿ ಮಠದ ಬಾಲಯೋಗಿ ಜಗದೀಶ್ವರ ಸ್ವಾಮೀಜಿ ಮೆರವಣಿಗೆಗೆ ಚಾಲನೆ ನೀಡಿದರು. ಎಸ್ಪಿ ಯಶೋಧಾ ವಂಟಗೋಡಿ ನೇತೃತ್ವದಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿತ್ತು.
ಜೆಡಿಎಸ್ ಜಿಲ್ಲಾಧ್ಯಕ್ಷ ಮಂಜುನಾಥ ಗೌಡಶಿವಣ್ಣನವರ, ರೈತ ಸಂದ ಜಿಲ್ಲಾಧ್ಯಕ್ಷ ಈರಣ್ಣ ಹಲಗೇರಿ, ಬಿಜೆಪಿ ಮುಖಂಡರಾದ ನಿಂಗರಾಜ ಕೋಡಿಹಳ್ಳಿ, ಚೋಳಪ್ಪ ಕಸವಾಳ, ಪವನಕುಮಾರ ಮಲ್ಲಾಡದ, ಪ್ರಕಾಶ ಪೂಜಾರ, ಪರಮೇಶಣ್ಣ ಗೂಳಣ್ಣನವರ, ಮೌನೇಶ ತಳವಾರ, ಕಾಂಗ್ರೆಸ್ ಮುಖಂಡರಾದ ಚಂದ್ರಣ್ಣ ಬೇಡರ, ಕರಬಸಪ್ಪ ಕೂಲೇರ, ವಕೀಲ ನಾಗರಾಜ ಕುಡಪಲಿ, ಕರವೇ ಅಧ್ಯಕ್ಷ ನಿತ್ಯಾನಂದ ಕುಂದಾಪುರ ಹಾಗೂ ದಾವಣಗೆರೆ, ಹರಿಹರ ರೈತರು, ಎಪಿಎಂಸಿ ಹಮಾಲಿ ಕಾಮಿರ್ಕರ ಸಂ, ದಲಾಲರ ಸಂ, ಬೀಜೋತ್ಪಾದಕರ ಸಂ, ವಿವಿಧ ಮಹಿಳಾ ಸಂಟನೆಗಳ ಮುಖಂಡರು, ಕಾರ್ಯಕರ್ತರು ಸೇರಿ ಸಾವಿರಾರು ಜನ ಪಾಲ್ಗೊಂಡಿದ್ದರು.

More Stories
ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.
ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.
ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.