ರಾಣೆಬೇನ್ನೂರ: ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿ.ಕೆ. ಶಿವಕುಮಾರ್ ಅವರ ಮನೆಗೆ ಶಿಗ್ಗಾವಿ ಶಾಸಕ ಯಾಸೀರ್ ಅಹ್ಮದ್ ಖಾನ್ ಪಠಾಣ, ಹಾನಗಲ್ ಶಾಸಕ ಶ್ರೀನಿವಾಸ್ ಮಾನೆ, ರಾಣೆಬೆನ್ನೂರು ಶಾಸಕ ಪ್ರಕಾಶ ಕೋಳಿವಾಡ ಅವರು ಶುಕ್ರವಾರ ರಾತ್ರಿ ಭೇಟಿ ನೀಡಿದರು. ಅವರ ಜೊತೆಯಲ್ಲಿ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಆನಂದ್ ಗಡ್ಡದೇವರಮಠ ಸಹ ಹಾಜರಿದ್ದರು.
‘ಕಾಂಗ್ರೆಸ್ ಪಕ್ಷಕ್ಕೆ ಬಹುಮತ ಸಿಗುತ್ತಿದ್ದಂತೆ, ಮುಖ್ಯಮಂತ್ರಿ ಸ್ಥಾನದ ಅಧಿಕಾರ ಹಂಚಿಕೆ ಸಂಬಂಧ ಮಾತುಕತೆ ನಡೆದಿತ್ತು’ ಎಂಬ ಮಾತುಗಳು ಹರಿದಾಡುತ್ತಿವೆ. ಇದಕ್ಕೆ ಪ್ರತಿಯಾಗಿ, ಹಲವು ಶಾಸಕರು ದೆಹಲಿಗೂ ಹೋಗಿ ವರಿಷ್ಠರನ್ನು ಭೇಟಿಯಾದ ಬಗ್ಗೆ ಮಾಹಿತಿಯಿದೆ. ಇದರ ನಡುವೆಯೇ ಹಾವೇರಿಯ ಕೆಲ ಶಾಸಕರು ಸಹ ಡಿ.ಕೆ.ಶಿವಕುಮಾರ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿರುವುದು ಮತದಾರರಲ್ಲಿ ಕುತೂಹಲ ಮೂಡಿಸಿದೆ.

More Stories
ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.
ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.
ಸ್ಪೆಷಲ್ ತರಗತಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ,ಮಾಸ್ತರ ಎಸ್ಕೇಪ್..!