ರಾಣೆಬೇನ್ನೂರ: ಸಿಎಂ ಬದಲಾವಣೆ ವಿಚಾರ ಕಾಂಗ್ರೆಸ್ ಹೈಕಮಾಂಡಗೆ ಬಿಟ್ಟ ವಿಚಾರವಾಗಿದ್ದು, ಅದರ ಬಗ್ಗೆ ನಾನು ಮಾತನಾಡುವುದಕ್ಕೆ ಹೋಗಲ್ಲ ಎಂದು ವಿಧಾನಸಭೆ ಮಾಜಿ ಅಧ್ಯಕ್ಷ ಕೆ.ಬಿ.ಕೋಳಿವಾಡ ಹೇಳಿದರು
ನಗರದಲ್ಲಿ ಇಂದು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಕೆಲ ದಿನಗಳಿಂದ ನಡೆಯುತ್ತಿದ್ದ ಚರ್ಚೆಗೆ
ಇಂದು ಬೆಳಿಗ್ಗೆ ಸಿಎಂ-ಡಿಸಿಎಂ ಈಗಾಗಲೇ ಭೇಟಿ ನೀಡಿ ಮಾತನಾಡಿದ್ದಾರೆ.
ಕಾಂಗ್ರೆಸ್ ಪಕ್ಷ ಗಟ್ಟಿಯಾಗಿದ್ದು ಸುಮಾರು 136 ಜನರ ಶಾಸಕರ ಬೆಂಬಲ ಇರುವುದರಿಂದ ಪಕ್ಷಕ್ಕೆ ಏನು ಆಗಲ್ಲ ಎಂದು ತಿಳಿಸಿದರು.
ಇನ್ನೂ ಶಾಸಕರಾದ ಯಾಸೀರಖಾನ ಪಠಾಣ, ಶ್ರೀನಿವಾಸ ಮಾನೆ ಹಾಗೂ ಪ್ರಕಾಶ ಕೋಳಿವಾಡ ಡಿಸಿಎಂ ಡಿ.ಕೆ.ಶಿವಕುಮಾರ ಭೇಟಿಯಾದ ವಿಚಾರಕ್ಕೆ ಮಾತನಾಡಿದ ಅವರು, ಹಾವೇರಿ ಜಿಲ್ಲೆಗೆ ಈ ಬಾರಿ ಸಚಿವ ಸ್ಥಾನ ನೀಡಬೇಕು ಎಂದು ಮನವಿ ಮಾಡಿದ್ದಾರೆ ಆದರೆ ಅದರ ನಿರ್ಣಯ ವರಿಷ್ಠರಗೆ ಬಿಟ್ಟ ವಿಚಾರವಾಗಿದೆ.
ನಮ್ಮ ಜಿಲ್ಲೆಯಿಂದ
ಹಾವೇರಿ ಶಾಸಕ ರುದ್ರಪ್ಪ ಲಮಾಣಿ, ಹಾನಗಲ್ ಶಾಸಕ ಶ್ರೀನಿವಾಸ ಮಾನೆ ಹಾಗೂ ಬ್ಯಾಡಗಿ ಶಾಸಕರಾದ ಬಸವರಾಜ ಶಿವಣ್ಣನವರ ಆಕಾಂಕ್ಷಿಗಳಾಗಿದ್ದಾರೆ. ಆದರೆ ಸಿಎಂ-ಡಿಸಿಎಂ ಅವರು ಹಾವೇರಿ ಪರಿಗಣಿಸಿ ಮುಂದಿನ ದಿನಗಳಲ್ಲಿ ಸಚಿವ ಸ್ಥಾನ ನೀಡಬಹುದು ಎಂಬ ನಂಬಿಕೆ ಇದೆ ಎಂದು ಹೇಳಿದರು.

More Stories
ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.
ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.
ಸ್ಪೆಷಲ್ ತರಗತಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ,ಮಾಸ್ತರ ಎಸ್ಕೇಪ್..!