ರಾಣೆಬೇನ್ನೂರ:ಫೋನ್ ಬ್ಯೂಸಿ ಬರುತ್ತೆ ಅಂತಾ ಮಹಿಳೆಯೊಬ್ಬಳನ್ನು ಕತ್ತು ಕೊಯ್ದು ಕೊಲೆ ಮಾಡಿದ್ದ ಆರೋಪಿಯನ್ನು 24 ಗಂಟೆಯೊಳಗೆ ಇಲ್ಲಿಯ ಶಹರ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಹಾವೇರಿ ತಾಲೂಕಿನ ಕಳ್ಳಿಹಾಳ ಗ್ರಾಮದ ಚಂದ್ರಪ್ಪ ಶಿವಲಿಂಗಪ್ಪ ಸಣ್ಣಮಲ್ಲಪ್ಪನವರ (36) ಬಂಧಿತ ಆರೋಪಿ.
ಈತ ಭಾನುವಾರ ರಾತ್ರಿ ನಗರದ ಕೂನಬೇವು ರಸ್ತೆಯಲ್ಲಿರುವ ಒಂಟಿ ಮನೆಯಲ್ಲಿ ವಾಸವಾಗಿದ್ದ ಲಲಿತಾ ಕರಬಸಪ್ಪ ಬ್ಯಾಡಗಿ (42) ಎಂಬುವಳನ್ನು ಕತ್ತು ಕೊಯ್ದು ಕೊಲೆ ಮಾಡಿ ಪರಾರಿಯಾಗಿದ್ದ.
ಈ ಕುರಿತು ಪ್ರಕರಣ ದಾಖಲಿಸಿಕೊಂಡ ಶಹರ ಠಾಣೆ ಪೊಲೀಸರು ಎಸ್ಪಿ ಯಶೋಧಾ ವಂಟಗೋಡಿ ಹಾಗೂ ಡಿವೈಎಸ್ಪಿ ಲೋಕೇಶ ಜೆ. ಮಾರ್ಗದರ್ಶನದಲ್ಲಿ ಪಿಎಸ್ಐ ಗಡ್ಡೆಪ್ಪ ಗುಂಜುಟಗಿ ಹಾಗೂ ಎಚ್.ಸಿ. ದೊಡ್ಡಮನಿ ನೇತೃತ್ವದ ತಂಡ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.
ಒಂಟಿ ಮನೆಯಲ್ಲಿದ್ದ ಮಹಿಳೆಯ ಕತ್ತು ಕೊಯ್ದು ಕೊಲೆಮಾಡಿದ ವ್ಯಕ್ತಿ ಬಂಧನ

More Stories
ಹೊಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವ ರೈತ ಸಾವು
ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.
ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.