ರಾಣೆಬೇನ್ನೂರ: ನಿರ್ಮಾಣ ಹಂತದ ಕುಡಿಯುವ ನೀರಿನ ಟ್ಯಾಂಕನಿಂದ ಬಿದ್ದು ಕಾರ್ಮಿಕನೊಬ್ಬ ಸ್ಥಳದಲ್ಲಿ ಮೃತಪಟ್ಟ ಘಟನೆ ತಾಲೂಕಿನ ಚಿಕ್ಕಹರಳಹಳ್ಳಿ ಗ್ರಾಮದಲ್ಲಿ ಭಾನುವಾರ ನಡೆದಿದೆ.
ಸವಣೂರು ತಾಲೂಕಿನ ಕಡಕೋಳ ಪುಟ್ಟಪ್ಪ ಗುಜ್ಜರಿ(28) ಮೃತ ಕಾರ್ಮಿಕ.
ಈತನು ಚಿಕ್ಕಹರಳಹಳ್ಳಿ ಗ್ರಾಮದಲ್ಲಿ ಹೊಸದಾಗಿ ನಿರ್ಮಾಣ ಮಾಡುತ್ತಿದ್ದ ಕುಡಿಯುವ ನೀರಿನ ಟ್ಯಾಂಕ್ ಕಟ್ಟಡದಲ್ಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ. ಇಂದು ಮೇಲೆ ನಿಂತು ಕೆಲಸ ಮಾಡುವಾಗ ಆಯಾತಪ್ಪಿ ಮೇಲಿಂದಯ ಬಿದ್ದು ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಈ ಸಮಯದಲ್ಲಿ ಗುತ್ತಿಗೆದಾರರ ಸ್ಥಳಕ್ಕೆ ಬಾರದೆ ಇರದೆ ಹಿನ್ನಲೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.
ರಾಣೆಬೇನ್ನೂರ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

More Stories
ಒಂಟಿ ಮನೆಯಲ್ಲಿದ್ದ ಮಹಿಳೆಯ ಕತ್ತು ಕೊಯ್ದು ಕೊಲೆಮಾಡಿದ ವ್ಯಕ್ತಿ ಬಂಧನ
ಹೊಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವ ರೈತ ಸಾವು
ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.