ರಾಣೆಬೆನ್ನೂರ: ಹೆತ್ತ ತಾಯಿಯ ಮೇಲೆ ಹಲ್ಲೆ ಮಾಡಿದ ಮಗ ಹಾಗೂ ಸೊಸೆಗೆ ಒಂದೂವರೆ ವರ್ಷ ಜೈಲು ಶಿಕ್ಷೆ ಹಾಗೂ ತಲಾ ಒಬ್ಬರಿಗೆ 15 ಸಾವಿರ ರೂ. ದಂಡ ವಿಧಿಸಿ ಇಲ್ಲಿಯ ಅಧಿಕ ದಿವಾಣಿ ನ್ಯಾಯಾಲಯದ ಜೆಎಂಎಫ್ಸಿ ನ್ಯಾಯಾಧೀಶೆ ಮೇಘಶ್ರೀ ತೀರ್ಪು ನೀಡಿ ಶುಕ್ರವಾರ ಆದೇಶಿಸಿದ್ದಾರೆ.
ತಾಲೂಕಿನ ಕುಮಾರಪಟ್ಟಣ(ಕೋಡಿಯಾಲ ಹೊಸಪೇಟೆ) ಗ್ರಾಮದ ಅಶೋಕ ಪುಟ್ಟಪ್ಪ ಮಡಿವಾಳರ ಹಾಗೂ ಆತನ ಪತ್ನಿ ಪುಷ್ಪಾ ಅಶೋಕ ಮಡಿವಾಳರ ಜೈಲು ಶಿಕ್ಷೆಗೆ ಒಳಗಾದ ಆರೋಪಿತರು.
ಇವರು ಮನೆಯಲ್ಲಿದ್ದ ತಾಯಿಯ ಮೇಲೆ ದೈಹಿಕವಾಗಿ ಹಾಗೂ ಮಾನಸಿಕವಾಗಿ ದಿನ ನಿತ್ಯವೂ ಹಿಂಸೆ ಮಾಡಿದ್ದರು. ಈ ಕುರಿತು ಕುಮಾರಪಟ್ಟಣಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಸಿಲಾಗಿತ್ತು. ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಸಾಕ್ಷಧಾರಗಳ ಸಮೇತ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರು ಶಿಕ್ಷೆ ಪ್ರಕಟಿಸಿ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಕವಿತಾ ಎಸ್.ಜಿ. ವಾದ ಮಂಡಿಸಿದ್ದರು.

More Stories
16 ಲಕ್ಷ ಮೌಲ್ಯದ ಬಂಗಾರ ಮಾರಾಟ ಮಾಡಲು ಯತ್ನಿಸಿದ ಮಹಿಳೆ ಬಂಧನ…
ಹಾವೇರಿ ಜಿಲ್ಲಾಸತ್ರ ಕೋರ್ಟ್‌ಗೆ ಬಾಂಬ್ ಬೆದರಿಕೆ ಪತ್ರ; ಕೋರ್ಟನಿಂದ ಓಡಿ ಬಂದ ಕಕ್ಷಿದಾರರು, ವಕೀಲರು.
ಸಾಯಿ ಆಸ್ಪತ್ರೆ ವೈದ್ಯನ ಮೇಲೆ ಹಲ್ಲೆ: 8 ಜನರ ವಿರುದ್ಧ ಪ್ರಕರಣ ದಾಖಲು.