ರಾಣೆಬೇನ್ನೂರ: ಕಳೆದ ಮೂರು ದಿನಗಳಿಂದ ಜಿಲ್ಲೆಯ ಹಿರೇಕೆರೂರ, ಬ್ಯಾಡಗಿ ಹಾಗೂ ರಾಣೆಬೆನ್ನೂರ ಭಾಗದಲ್ಲಿ ಓಡಾಡಿಕೊಂಡಿದ್ದ ಕಾಡಾನೆ ಸೋಮವಾರ ತಾಲೂಕಿನ ಕೂಸಗೂರ ಗ್ರಾಮದ ಬಳಿ ನೀಲಗಿರಿ ಅರಣ್ಯ ತೋಪಿಗೆ ಬಂದು ಬೀಡುಬಿಟ್ಟಿದೆ.
ಕಾಡಿನಿಂದ ತಪ್ಪಿಸಿಕೊಂಡ ಒಂಟಿ ಸಲಗ ಮೊದಲು ಹಿರೇಕೆರೂರ ಮಾರ್ಗವಾಗಿ ಬ್ಯಾಡಗಿ ತಾಲೂಕಿನ ಹಿರೇಅಣಜಿ, ಮೋಟೆಬೆನ್ನೂರ, ಸಾತೇನಹಳ್ಳಿ, ಚಿಕ್ಕೇರೂರ ಸೇರಿ ವಿವಿಧೆಡೆ ಓಡಾಡಿ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿತ್ತು. ರಾತ್ರಿ ಸಮಯದಲ್ಲಿ ಮತ್ತೇ ಸಂಚಾರ ಮಾಡುತ್ತ ಬಂದ ಆನೆ ಕೂಸಗೂರ ಗ್ರಾಮದ ಬಳಿ ಬಂದು ನಿಂತಿದೆ.
ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಆನೆ ಸೆರೆ ಹಿಡಿಯಲು ಸಿದ್ಧತೆ ನಡೆಸಿದ್ದಾರೆ. ಅದಕ್ಕಾಗಿ ಶಿವಮೊಗ್ಗ ಸಕ್ರೆಬೈಲು ಬಿಡಾರದ ಆನೆಗಳಾದ ಸೋಮಣ್ಣ ಮತ್ತು ಬಹದ್ದೂರ್ ಎಂಬ ಎರಡು ಆನೆಗಳನ್ನು ತರಿಸಿಕೊಳ್ಳಲಾಗಿದೆ. ಆದರೆ, ಕಾರ್ಯಾಚರಣೆಗೆ 5 ಆನೆಗಳು ಬೇಕಾಗಿರುವ ಕಾರಣ ಮೈಸೂರಿನಿಂದ 3 ಬಿಡಾರದ ಆನೆಗಳನ್ನು ತರಿಸಿಕೊಳ್ಳಲು ವ್ಯವಸ್ಥೆ ಮಾಡಿಕೊಂಡಿದ್ದಾರೆ.
ಆನೆ ಸುತ್ತಲೂ ಕ್ಯಾಮರಾ ಕಣ್ಗಾವಲು…
ಕೂಸಗೂರು ಅರಣ್ಯ ಪ್ರದೇಶದಲ್ಲಿ ಬೀಡು ಬಿಟ್ಟಿರುವ ಆನೆ ಮತ್ತೇ ಬೇರೆಡೆ ಹೋಗದಂತೆ ನೋಡಿಕೊಳ್ಳಲು ಅರಣ್ಯ ಇಲಾಖೆ ಸಿಬ್ಬಂದಿಯನ್ನು ಆನೆಯ ಸುತ್ತಲಿನ ಅರಣ್ಯ ಪ್ರದೇಶದಲ್ಲಿ ನಿಯೋಜಿಸಲಾಗಿದೆ. ಇದರ ಜತೆಗೆ ಆನೆಯ ಚಲನವಲನದ ಮೇಲೆ ಗಮನ ಹರಿಸಲು ಡ್ರೋನ್ ಕ್ಯಾಮರಾ ಬಿಡಲಾಗಿದೆ. ರಾತ್ರಿ ಸಮಯದಲ್ಲಿ ಆನೆ ಬೇರೆಡೆ ಹೋಗದಂತೆ ವಿದ್ಯುತ್ ದೀಪಗಳ ವ್ಯವಸ್ಥೆ ಕೂಡ ಮಾಡಲಾಗಿದೆ.
ದಾರಿ ತಪ್ಪಿ ಬಂದಿದಲ್ಲ, ದಾರಿ ಹುಡಕಿಕೊಂಡು ಬಂದೇನಿ; ಗಜರಾಜನ ಕೂಗಾಟ

More Stories
16 ಲಕ್ಷ ಮೌಲ್ಯದ ಬಂಗಾರ ಮಾರಾಟ ಮಾಡಲು ಯತ್ನಿಸಿದ ಮಹಿಳೆ ಬಂಧನ…
ಹಾವೇರಿ ಜಿಲ್ಲಾಸತ್ರ ಕೋರ್ಟ್‌ಗೆ ಬಾಂಬ್ ಬೆದರಿಕೆ ಪತ್ರ; ಕೋರ್ಟನಿಂದ ಓಡಿ ಬಂದ ಕಕ್ಷಿದಾರರು, ವಕೀಲರು.
ಸಾಯಿ ಆಸ್ಪತ್ರೆ ವೈದ್ಯನ ಮೇಲೆ ಹಲ್ಲೆ: 8 ಜನರ ವಿರುದ್ಧ ಪ್ರಕರಣ ದಾಖಲು.