16 ಲಕ್ಷ ಮೌಲ್ಯದ ಬಂಗಾರ ಮಾರಾಟ ಮಾಡಲು ಯತ್ನಿಸಿದ ಮಹಿಳೆ ಬಂಧನ…

ಹಾವೇರಿ ಜಿಲ್ಲಾಸತ್ರ ಕೋರ್ಟ್‌ಗೆ ಬಾಂಬ್ ಬೆದರಿಕೆ ಪತ್ರ; ಕೋರ್ಟನಿಂದ ಓಡಿ ಬಂದ ಕಕ್ಷಿದಾರರು, ವಕೀಲರು.

ಸಿಎಂ ಕುರ್ಚಿ ಗುದ್ದಾಟದ ವಿಚಾರ…! ಮತ್ತೆ ಗರಂ ಆದ ಸಿಎಂ ಸಿದ್ಧರಾಮಯ್ಯ.

ಸಾಯಿ ಆಸ್ಪತ್ರೆ ವೈದ್ಯನ ಮೇಲೆ ಹಲ್ಲೆ: 8 ಜನರ ವಿರುದ್ಧ ಪ್ರಕರಣ ದಾಖಲು.

ಹಾವೇರಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ನಿಂಗರಾಜ ಕೋಡಿಹಳ್ಳಿ, ಪ್ರಧಾನ ಕಾರ್ಯದರ್ಶಿಯಾಗಿ ಸಿದ್ದು ಚಿಕ್ಕಬಿದರಿ ನೇಮಕ.

ನ್ಯಾಯಬೆಲೆ ಅಂಗಡಿ ಪ್ರಾಧಿಕಾರವನ್ನು ವರ್ಗಾವಣೆ ಮಾಡಿಕೊಡಲು ಲಂಚ ಸ್ವೀಕಾರ, ರಾಣೆಬೆನ್ನೂರ ತಹಶೀಲ್ದಾರ ಕಛೇರಿಯ ಆಹಾರ ನಿರೀಕ್ಷಕ ಬಂಧನ.

ಉಚಿತ ಚಿಕನ್ ಬಿರಿಯಾನಿ ಬೇಕಾ,‌ ಆಗಾದ್ರೆ ಬಸ್ ನಿಲ್ದಾಣಕ್ಕೆ ಬನ್ನಿ.

ಅಂಬೇಡ್ಕರ್, ಗಾಂಧಿ ಹೆಸರು ಅಳಿಸಲು ಹೊರಟಿರುವ ವಿರುದ್ಧ ನನ್ನ ಹೋರಾಟ; ಸಚಿವ ಸತೀಶ ಜಾರಕಿಹೊಳಿ

ನಗರಸಭೆ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಜಿಲ್ಲಾಧಿಕಾರಿ.

ತವರ ಮನೆಗೆ ಹೆಂಡತಿ ಹೋದಾಗ ಎರಡನೇ ಮದುವೆಯಾದ ಭೂಪ ಜೈಲು ಪಾಲು…!

ದಾರಿ ತಪ್ಪಿ ಬಂದಿದಲ್ಲ, ದಾರಿ ಹುಡಕಿಕೊಂಡು ಬಂದೇನಿ; ಗಜರಾಜನ ಕೂಗಾಟ

ತಾಯಿ ಮೇಲೆ ಹಲ್ಲೆ ಮಾಡಿದ್ರೆ ಹುಷಾರ…! ಪುತ್ರ, ಸೊಸೆಗೆ ಜೈಲು ಪಾಲು

ನಿರ್ಮಾಣ ಹಂತದ ಟ್ಯಾಂಕನಿದ್ದು ಬಿದ್ದು ಕಾರ್ಮಿಕ ಸಾವು.

ಒಂಟಿ ಮನೆಯಲ್ಲಿದ್ದ ಮಹಿಳೆಯ ಕತ್ತು ಕೊಯ್ದು ಕೊಲೆ‌ಮಾಡಿದ ವ್ಯಕ್ತಿ ಬಂಧನ

ರಾಣೆಬೇನ್ನೂರ ನಗರದಲ್ಲಿ ಮಹಿಳೆಯ ಭೀಕರ ಕೊಲೆ, ಕಾರಣ ನಿಗೂಢ…!

ಹೊಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವ ರೈತ ಸಾವು

ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.

ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.

ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.

ಸ್ಪೆಷಲ್ ತರಗತಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ,ಮಾಸ್ತರ ಎಸ್ಕೇಪ್..!

ಅಂಬೇಡ್ಕರ್, ಗಾಂಧಿ ಹೆಸರು ಅಳಿಸಲು ಹೊರಟಿರುವ ವಿರುದ್ಧ ನನ್ನ ಹೋರಾಟ; ಸಚಿವ ಸತೀಶ ಜಾರಕಿಹೊಳಿ

ರಾಣೆಬೇನ್ನೂರ: ಈ ದೇಶದ ಮಹಾನನಾಯಕರಾದ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಸ್ವಾತಂತ್ರ್ಯ ತಂದು ಕೊಟ್ಟ ಮಹಾತ್ಮ ಗಾಂಧಿಯವರು ಹೆಸರನ್ನು ಅಳಿಸಬೇಕು‌ ಎಂದು ಒಂದು ವರ್ಗ ಹೋರಾಟ ಮಾಡುತ್ತಿದೆ ಅಂತಹ ವರ್ಗದ ವಿರುದ್ಧ ನಾವುಗಳು ಹೋರಾಟ ಮಾಡಬೇಕಾಗಿದೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ನಗರದ ಡಾ.ಬಿ.ಆರ್.ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಪ್ರತಿಷ್ಠಾಪನೆ ಮಾಡಿರುವ ಸಂವಿಧಾನ ಶಿಲ್ಪಿ, ಮಹಾಮಾನವತವಾದಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಕಂಚಿನ ಪ್ರತಿಮೆಯನ್ನು ಶನಿವಾರ ಅನಾವರಣ ಮಾಡಿ ಮಾತನಾಡಿದರು.

ಶಿಕ್ಷಣ ಕಲಿಯುವ ವಿದ್ಯಾರ್ಥಿಗಳು ಕಳೆದ ಒಂದು ವರ್ಷದಿಂದ ಹೋರಾಟ ಮಾಡಿ ತಮ್ಮ ಸ್ವಂತ ಖರ್ಚಿನಲ್ಲಿ ಇಂತಹ ಮೂರ್ತಿ ನಿರ್ಮಾಣ ಮಾಡಿತುವುದು ಹೆಮ್ಮೆಯ ಸಂಗತಿ. ಇಂತಹ ಮಾದರಿಗಳು ರಾಜ್ಯಕ್ಕೆ, ರಾಷ್ಟ್ರಕ್ಕೆ ಪ್ರೇರಣೆಯಾಗಬೇಕು ಎಂದು ತಿಳಿಸಿದರು.

ಇನ್ನೂ ಹಿಂದಿನ ದಿನಗಳಲ್ಲಿ ನಾವು ಶಿಕ್ಷಣ ಪಡೆಯಬೇಕಾದ ಸಮಯದಲ್ಲಿ ಅಸ್ಪೃಶ್ಯತೆ ಮತ್ತು ಅವಮಾನಗಳನ್ನು ಅನುಭವಿಸಿದೇವಿ. ಅದು ಸಂವಿಧಾನ ಬಂದ ನಂತರ ಸ್ವಲ್ಪ ಕಡಿಮೆಯಾಗಿದೆ ಆದರೆ ರಾಜ್ಯದಲ್ಲಿ ಇನ್ನೂ ಎಷ್ಟೋ ಶಾಸಕರಿಗೆ ದೇವಸ್ಥಾನಕ್ಕೆ ಪ್ರವೇಶವಿಲ್ಲ ಎಂದು ಮಾರ್ಮಿಕವಾಗಿ ಹೇಳಿದರು.

ವಿದ್ಯಾರ್ಥಿಗಳು ಡಾ.ಬಿ.ಆರ್.ಅಂಬೇಡ್ಕರ್
ಮೂರ್ತಿ ಮೂರ್ತಿಯಾಗಿ ಉಳಿಯಬಾರದು ಅದನ್ನು ನೋಡಿದಾಗ ಅವರಂತೆ ನಾನು ಸಮಾಜವನ್ನು ಕಟ್ಟುತ್ತೆನೆ ಹಾಗೂ ಸದೃಢವಾಗಿ ಮಾಡುತ್ತೇನೆ ಎಂಬ ಪ್ರತಿಜ್ಞೆಯನ್ನು ತಾವು ಪ್ರತಿನಿತ್ಯವೂ ಮಾಡಬೇಕು. ಅಂದಾಗ ಮಾತ್ರ ಅವರ ಆಶಯಗಳು ಸಫಲವಾಗುತ್ತದೆ.

ಮಕ್ಕಳ ಶಿಕ್ಷಣ ಮತ್ತು ರಾಜಕೀಯ ರಂಗದಲ್ಲಿ ಮಾತ್ರ ಬರಬಾರದು ಎಲ್ಲಾ ರಂಗದಲ್ಲಿ ಬರಬೇಕು. ಶಾಲೆಗಳಲ್ಲಿ ಅಂಬೇಡ್ಕರ್ ಹಾಗೂ ಮಹಾತ್ಮ ಗಾಂಧಿಯವರ ಪ್ರತಿಮೆ ನಿರ್ಮಾಣ ಮಾಡಬೇಕು. ಈ ಭೂಮಿ ಎಲ್ಲಿಯವರೆಗೆ ಇರುತ್ತದೆ ಅಲ್ಲಿಯವರೆಗೆ ಡಾ.ಬಿ.ಆರ್.ಅಂಬೇಡ್ಕರ್ ಹೆಸರು ಇರಬೇಕು ಎಂದು ಹೇಳಿದರು.

ಮಾಜಿ ಸಚಿವರಾದ ಎಚ್.ಆಂಜನೇಯ ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ಅವರು ಬಾಲಕರಾಗಿದ್ದಾಗ ಬಾವಿಯಲ್ಲಿ ನೀರು ನೀಡಲು ಹಿಂದೇಟು ಹಾಕುತ್ತಿದ್ದರು. ಆದರೆ ಇದೀಗ ದಲಿತರ ಮಕ್ಕಳು ಶಾಲೆಯಲ್ಲಿ ಮುಂದಿನ ಬೆಂಚಿನಲ್ಲಿ ಕೂತುಕೊಂಡು ಶಿಕ್ಷಣ ಪಡೆಯುತ್ತಿದ್ದಾರೆ ಅಂದರೆ ಅದಕ್ಕೆ ಕಾರಣ ಸಂವಿಧಾನ.
ಸಮಾಜದಲ್ಲಿ ಎಷ್ಟು ನೋವು, ನಲಿವು, ಜಾತಿ ವ್ಯವಸ್ಥೆ ಅನುಭವಿಸುತ್ತಾರೆ ಅವರ ಮುಂದೆ ಜೀವನದಲ್ಲಿ ಮುಂದೆ ಬರುತ್ತಾರೆ ಎಂದು ತಿಳಿಸಿದರು.
ಡಾ.ಬಿ.ಆರ್.ಅಂಬೇಡ್ಕರ್ ಅವರನ್ನ ಬಿಜೆಪಿ ಅವರು ಕಾಂಗ್ರೆಸ್ ಪಕ್ಷ ಮೋಸ ಮಾಡಿದೆ ಎಂದು ಹೇಳುತ್ತಾರೆ. ಆದರೆ ಅವರನ್ನು ಗೌರವಿಸಿದ್ದು ಕಾಂಗ್ರೆಸ್ ಪಕ್ಷ ಎಂದು ನಾನು ಹೆಮ್ಮೆಯಿಂದ ಹೇಳುತ್ತೆನೆ ಎಂದು ತಿಳಿಸಿದರು.

ಉಪಸಭಾಪತಿ ರುದ್ರಪ್ಪ ಲಮಾಣಿ,
ಶಾಸಕರಾದ ಪ್ರಕಾಶ ಕೋಳಿವಾಡ, ಯು.ಬಿ.ಬಣಕಾರ,
ಆನಂದಸ್ವಾಮಿ ಗಡ್ಡದೇವರಮಠ, ಸಂಜೀವಕುಮಾರ ನೀರಲಗಿ, ಎಸ್.ಎಫ್.ಎನ್.ಗಾಜಿಗೌಡ್ರು,
ಸಮಾಜ ಕಲ್ಯಾಣ ಅಧಿಕಾರಿ ಪ್ರಶಾಂತ ವರಗಪ್ಪನವರ, ತಹಶಿಲ್ದಾರ ಆರ್.ಎಚ್.ಭಾಗವಾನ, ತಾಪಂ ಇಓ ವೆಂಕಟೇಶ ಬಿದರಿ, ಪೌರಾಯುಕ್ತ ಎಫ್.ಐ.ಇಂಗಳಗಿ.
ಏಳುಕೋಟೆಪ್ಪ ಎಸ್.ಪಾಟೀಲ, ಡಾ.ಸುಭಾಸಚಂದ್ರ ನಾಟೀಕರ ಸೇರಿದಂತೆ ಮತ್ತಿತರಿದ್ದರು.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!