ರಾಣೆಬೇನ್ನೂರ: ನ್ಯಾಯಬೆಲೆ ಅಂಗಡಿ ಪ್ರಾಧಿಕಾರವನ್ನು ಅನುಕಂಪದ ಆಧಾರದ ಮೇಲೆ ಪಿರಾದುದಾರರ ಹೆಸರಿಗೆ ಮಂಜೂರು ಮಾಡಲು ಇಪ್ಪತ್ತು ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆಹಾರ ನೀರಿಕ್ಷಕ ಶಂಭು ಮಹದೇವಪ್ಪ ಸೋಮನಹಳ್ಳಿ ಅವರನ್ನು ಲೋಕಾಯುಕ್ತ ಪೋಲಿಸರು ಟ್ರ್ಯಾಪ್ ಮಾಡಿದ್ದಾರೆ.
ಗಣೇಶ ನಗರದ ರಾಘವೇಂದ್ರ ಪಾಸ್ತೆ ಇವರು ತಮ್ಮ ತಂದೆ ಹೆಸರಿಗಿರುವ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು 20,000/- ಗಳಿಗೆ ಬೇಡಿಕೆ ಇಟ್ಟಿದ್ದರು. ಈ ಸಮಯದಲ್ಲಿ 20,000/- ಗಳ ಲಂಚದ ಹಣವನ್ನು ಪಡೆದುಕೊಳ್ಳುವಾಗ ಯಶಸ್ವಿಯಾಗಿ ಟ್ರ್ಯಾಪ್ ಮಾಡಿದ್ದು ಇರುತ್ತದೆ. ಸದರಿ ಪ್ರಕರಣದ ತನಿಖೆಯನ್ನು ಎಂ.ಎಸ್ ಕೌಲಾಪುರೆ, ಪೊಲೀಸ್ ಅಧೀಕ್ಷಕರು ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಸಿ ಮಧುಸೂದನ,ತನಿಖಾಧಿಕಾರಿಗಳಾದ ವಿಶ್ವನಾಥ ಕಲ್ಲೂರಿ, ಪೊಲೀಸ್ ನಿರೀಕ್ಷಕರು ಹಾಗೂ ಸಿಬ್ಬಂದಿ ರವರು ಕಾರ್ಯಾಚರಣೆಯಲ್ಲಿ ಭಾಗಿಯಾಗಿರುತ್ತಾರೆ. ಸದರಿ ಆರೋಪಿತನನ್ನು ರಾಣೆಬೆನ್ನೂರ ತಹಶೀಲ್ದಾರ ಕಛೇರಿಯಲ್ಲಿ ದಸ್ತಗಿರಿ ಮಾಡಿದ್ದು, ತನಿಖೆ ಮುಂದುವರೆದಿದೆ.

More Stories
16 ಲಕ್ಷ ಮೌಲ್ಯದ ಬಂಗಾರ ಮಾರಾಟ ಮಾಡಲು ಯತ್ನಿಸಿದ ಮಹಿಳೆ ಬಂಧನ…
ಹಾವೇರಿ ಜಿಲ್ಲಾಸತ್ರ ಕೋರ್ಟ್‌ಗೆ ಬಾಂಬ್ ಬೆದರಿಕೆ ಪತ್ರ; ಕೋರ್ಟನಿಂದ ಓಡಿ ಬಂದ ಕಕ್ಷಿದಾರರು, ವಕೀಲರು.
ಸಿಎಂ ಕುರ್ಚಿ ಗುದ್ದಾಟದ ವಿಚಾರ…! ಮತ್ತೆ ಗರಂ ಆದ ಸಿಎಂ ಸಿದ್ಧರಾಮಯ್ಯ.