ರಾಣೆಬೇನ್ನೂರು: ರಾಜ್ಯದಲ್ಲಿ ಯಾವ ಮೋದಿ ಹವಾ ಇಲ್ಲ ಸರ್ಕಾರದ ನೀಡಿದ ಗ್ಯಾರಂಟಿ ಯೋಜನೆಗಳ ಹವಾ ಇದೆ ಎಂದು ವಿಧಾನಸಭಾ ಮಾಜಿ ಅಧ್ಯಕ್ಷರಾದ ಕೆ.ಬಿ.ಕೋಳಿವಾಡ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಕಳೆದ ಬಾರಿಯ ಚುನಾವಣೆಯಲ್ಲಿ ಅವರು ಪ್ರತಿಯೊಬ್ಬ ನಾಗರೀಕನಿಗೆ 15 ಲಕ್ಷ ರೂಪಾಯಿ ಅಕೌಂಟ್ ಗೆ ಹಾಕುತ್ತವೆ ಅಲ್ಲದೆ ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡಿ ನಿರುದ್ಯೋಗ ಮುಕ್ತ ಮಾಡುತ್ತವೆ ಎಂದು ಸುಳ್ಳ ಭರವಸೆ ನೀಡಿದ್ದಾರೆ. ಇದರಿಂದ ದೇಶದಲ್ಲಿ ಮೋದಿ ಹವಾ ಹೋಗಿರುವುದು ಕಂಡು ಬಂದಿದೆ.
ರಾಜ್ಯ ಸರ್ಕಾರದಲ್ಲಿ ಸಿದ್ದರಾಮಯ್ಯ ನೀಡಿರುವ ಐದು ಪಂಚ ಗ್ಯಾರಂಟಿ ಯೋಜನೆ ಜನರಿಗೆ ತಲುಪಿದ್ದು, ಜನರು ವಿಶ್ವಾಸ ಇಟ್ಟಿದ್ದಾರೆ. ಇದರಿಂದ ರಾಜ್ಯದ ಇಪ್ಪತ್ತು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಲಿದೆ ಎಂದು ತಿಳಿಸಿದರು..
More Stories
ಬಹಳಷ್ಟು ಲಾಭ ಕೊಡುವುದಾಗಿ ನಂಬಿಸಿ 75.42 ಲಕ್ಷ ರೂ. ವಂಚನೆ
ಕಾಕೋಳ ಗ್ರಾಮದಲ್ಲಿ ಸೊಸೈಟಿಗೆ ಕನ್ನ ಹಾಕಿದ ಕಳ್ಳರು.
ಅಧಿಕಾರ ಶಾಶ್ವತವಲ್ಲ, ಜನರ ಸೇವೆ ನಿಜಾವಾದ ಶಾಶ್ವತ ಮಾಜಿ ಶಾಸಕ ಅರುಣಕುಮಾರ ಪೂಜಾರ