ಮೈಸೂರು: ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ, ಬಿಬಿಎಂಪಿ ಸೇರಿದಂತೆ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ಆದಷ್ಟು ಬೇಗ ನಡೆಸುತ್ತೇವೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮೈಸೂರಿನಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು, ‘ಚುನಾವಣೆ ನಡೆಸಲು ತಯಾರಿದ್ದೇವೆ. ಅಗತ್ಯವಾದ ಎಲ್ಲ ಕ್ರಮವನ್ನೂ ನಮ್ಮ ಸರ್ಕಾರದಿಂದ ಕೈಗೊಳ್ಳಲಾಗಿದೆ. ಅಡ್ವೊಕೇಟ್ ಜನರಲ್ ಜೊತೆ ಚರ್ಚಿಸುತ್ತೇವೆ. ಕಾನೂನು ಪ್ರಕಾರ ಏನೇನು ಮಾಡಬೇಕೆಂದು ಹೇಳುತ್ತಾರೆಯೋ ಅದೆಲ್ಲವನ್ನೂ ಮಾಡುತ್ತೇವೆ. ಕ್ಷೇತ್ರ ಪುನರ್ ವಿಂಗಡಣೆ ಆಗುತ್ತದೆ. ನಂತರ ಮೀಸಲಾತಿ ಪ್ರಕಟಿಸುತ್ತೇವೆ’ ಎಂದು ಹೇಳಿದರು.
ಜುಲೈ ಅಥವಾ ಅಗಸ್ಟ್ ನಲ್ಲಿ ಚುನಾವಣೆ ನಡೆಯುವುದು ಬಹುತೇಕ ಖಚಿತವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

More Stories
16 ಲಕ್ಷ ಮೌಲ್ಯದ ಬಂಗಾರ ಮಾರಾಟ ಮಾಡಲು ಯತ್ನಿಸಿದ ಮಹಿಳೆ ಬಂಧನ…
ಹಾವೇರಿ ಜಿಲ್ಲಾಸತ್ರ ಕೋರ್ಟ್‌ಗೆ ಬಾಂಬ್ ಬೆದರಿಕೆ ಪತ್ರ; ಕೋರ್ಟನಿಂದ ಓಡಿ ಬಂದ ಕಕ್ಷಿದಾರರು, ವಕೀಲರು.
ಸಿಎಂ ಕುರ್ಚಿ ಗುದ್ದಾಟದ ವಿಚಾರ…! ಮತ್ತೆ ಗರಂ ಆದ ಸಿಎಂ ಸಿದ್ಧರಾಮಯ್ಯ.