ಕುಕನೂರ: ರಾಜ್ಯದಲ್ಲಿ ಇತ್ತಿಚೀನ ದಿನಗಳಲ್ಲಿ ನಮ್ಮ ಬಿಜೆಪಿ ಪಕ್ಷದಲ್ಲಿ ಯುವಕರಿಗೆ ಹೆಚ್ಚಿನ ಮಹತ್ವ ನೀಡಲಾಗುತ್ತಿದೆ ಎಂದು ಮಾಜಿ ಸಚಿವ ಹಾಲಪ್ಪ ಆಚಾರ ಹೇಳಿದರು.
ತಾಲೂಕಿನ ಮಸಬಹಂಚಿನಾಳ ಗ್ರಾಮದ ಬಿಜೆಪಿ ಪಕ್ಷದ ಕಚೇರಿಯಲ್ಲಿ ನೂತನವಾಗಿ ಆಯ್ಕೆಯಾದ ಹಿಂದುಳಿದ ವರ್ಗಗದ ಮೋರ್ಚಾ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಮತ್ತು ಕಾರ್ಯದರ್ಶಿಗಳು ಹಾಗೂ ಸರ್ವ ಸದಸ್ಯರಿಗೆ ಅಭಿನಂದನೆ ಸಲ್ಲಿಸಿ ಅವರು ಮಾತನಾಡಿದರು.
ಪಕ್ಷದಲ್ಲಿ ನಿಷ್ಠೆ ಹಾಗೂ ಪ್ರಾಮಾಣಿಕತೆಯಿಂದ ಕೆಲಸ ಮಾಡಿದಲ್ಲಿ ಉನ್ನತ ಹುದ್ದೆಗಳು ನಿಮ್ಮನ್ನು ಹುಡುಕಿಕೊಂಡು ಬರುತ್ತವೆ ಮೊದಲು ಪಕ್ಷ ನಿಷ್ಠೆಗೆ ಬೆಲೆ ನೀಡಿ ಹಾಗೂ ಈ ಭಾರಿಯ ಲೋಕಸಭಾ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕು ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ತಾಲೂಕು ಅಧ್ಯಕ್ಷ ಮಾರುತಿ ಗಾವರಾಳ, ಪ್ರಧಾನ ಕಾರ್ಯದರ್ಶಿ ಅಯ್ಯನಗೌಡ್ರು ಕೆಂಚಮ್ಮನವರು, ಹಿಂದುಳಿದ ವರ್ಗದ ಮೋರ್ಚಾ ಅಧ್ಯಕ್ಷರಾದ ಶ್ರೀನಿವಾಸ ತೀಮ್ಮಾಪೂರ, ಲಕ್ಷ್ಮಣ ಕಾಳಿ. ವಿಜಯ ದಾಸರ. ಕುಂಟೆಪ್ಪ ಉಚ್ಚಲಕುಂಟಾ.ಸೇರಿದಂತೆ ಪಕ್ಷದ ಅನೇಕ ಪ್ರಮುಖರು ಹಾಜರಿದ್ದರು.
More Stories
ಹೆಂಡತಿ ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡ ಗಂಡ ತಡಸ ಗ್ರಾಮದಲ್ಲಿ ಘಟನೆ
ದೇವರಗುಡ್ಡ ಮಾಲತೇಶ ಸ್ವಾಮಿಯ ಆಡಳಿತ ತಹಸೀಲ್ದಾರ್ ಸುಪರ್ದಿಗೆ…
ಸ್ವಚ್ಛ ಕೈಯಿಂದ ಕೆಲಸ ಮಾಡಿ ಇಲ್ಲ ರಾಜೀನಾಮೆ ಕೊಟ್ಟು ಹೊರಗೆ ಹೋಗಿ; ಲೋಕಾಯುಕ್ತ ಅಧಿಕಾರಿಗಳು.