ರಾಣೆಬೇನ್ನೂರು: ಕುಡಿಯುವ ನೀರಿಗಾಗಿ ಗ್ರಾಮದ ಜನರು ಪ್ರತಿಭಟನೆ ಮಾಡುವುದು ಕಾಮನ್ ಆದರೆ ಶಾಲಾ ಮಕ್ಕಳು ಯಾಕೆ ಪ್ರತಿಭಟನೆ ಮಾಡಿದ್ದಾರೆ ಎಂದು ಎಲ್ಲರಿಗೂ ಆಶ್ಚರ್ಯ ಇರಬಹುದು.
ಹೌದು ರಾಣೆಬೇನ್ನೂರು ತಾಲೂಕಿನ ಬಿಲ್ಲಹಳ್ಳಿ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ ಹದಿನೈದು ದಿನಗಳಿಂದ ಕೊರತೆ ಉಂಟಾಗಿದ್ದು, ಶಾಲಾ ಮಕ್ಕಳಿಗೆ ಊಟದ ನಂತರ ನೀರು ಕುಡಿಯಲು ಹಾಗೂ ಶೌಚಾಲಯ ಬಳಸಲು ನೀರು ಇಲ್ಲದಂತಾಗಿದೆ. ಇದರಿಂದ ನಿತ್ಯವೂ ಮಕ್ಕಳು ಹಾಗೂ ಶಿಕ್ಷಕರು ಸಮಸ್ಯೆ ಎದುರಾಗಿದ್ದು ಅನೇಕ ಬಾರಿ ಗ್ರಾಮ ಪಂಚಾಯತ್ ಗೆ ಮನವಿ ಮಾಡಿದ್ದರು ಸಮಸ್ಯೆ ಸರಿದೂಗಿಲ್ಲ.
ಇದರಿಂದ ರೊಚ್ಚಿಗೆದ್ದ ಶಾಲಾ ಮಕ್ಕಳು ಹಾಗೂ ಶಿಕ್ಷಕರು ಸೇರಿ ಗ್ರಾಮದಲ್ಲಿರುವ ಗ್ರಾಮ ಪಂಚಾಯತಿಗೆ ತೆರಳಿ ಪ್ರತಿಭಟನೆ ನಡೆಸಿ ಆಡಳಿತ ಮಂಡಳಿ ಹಾಗೂ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಅಲ್ಲದೆ ವಿದ್ಯಾರ್ಥಿಗಳು ನಮಗೆ ಕುಡಿಯಲು ಕೂಡಲೇ ಶಾಲೆಗೆ ನೀರು ಸರಬರಾಜು ಮಾಡಬೇಕು ಎಂದು ಆಗ್ರಹ ಮಾಡಿದರು.
More Stories
ತುಂಗಭದ್ರಾ ನದಿಯಲ್ಲಿ 15 ಕಿ.ಮೀ. ಈಜಿ ಪ್ರಾಣ ಉಳಿಸಿಕೊಂಡ ಮೈಸೂರಿನ ವೃದ್ಧ…!
ಮೂರು ಬೈಕಗಳ ನಡುವೆ ಭೀಕರ ಅಪಘಾತ ಒರ್ವ ಯುವಕ ಸಾವು, ಮೂವರು ಗಂಭೀರ.
ಆಟೋ ಚಾಲಕರಿಗೆ ಸನ್ಮಾನ ಸಮಾರಂಭ ಮಾಡಲಿರುವ “ಪರಮೇಶಣ್ಣ ಗೂಳಣ್ಣನವರ”