ರಾಣೆಬೇನ್ನೂರು: ತಾಲೂಕಿನ ಹುಣಸಿಕಟ್ಟಿ ಗ್ರಾಮದ ಬಳಿ ಮಾಜಿ ಶಾಸಕರಾದ ಅರುಣಕುಮಾರ ಪೂಜಾರ ಅವರ ಕಾರು ಡಿಕ್ಕಿಯಾಗಿ ಯುವಕನೊರ್ವ ಗಾಯಗೊಂಡ ಘಟನೆ ಸಂಜೆ ನಡೆದಿದೆ.

ಬಿಜೆಪಿ ಜಿಲ್ಲಾಧ್ಯಕ್ಷರಾದ ಅರುಣಕುಮಾರ ಪೂಜಾರವರಿಗೆ ಸೇರಿದ ಸ್ವಂತ ಕಾರನ್ನು ಹುಣಸಿಕಟ್ಟಿ ಗ್ರಾಮದ ಪ್ರವೀಣ ಎಂಬ ಚಾಲಕ ಚಾಲನೆ ಮಾಡುತ್ತಿದ್ದ ಎನ್ನಲಾಗಿದೆ. ಕಾರಿನಲ್ಲಿ ಚಾಲಕ ಬಿಟ್ಟರೆ ಬೇರೆ ಯಾರು ಇರಲಿಲ್ಲ ಎಂದು ತಿಳಿದು ಬಂದಿದೆ.
ತಕ್ಷಣ ಸ್ಥಳೀಯರು ಯುವಕನನ್ನು ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಿದ್ದು, ಸ್ಥಳಕ್ಕೆ ರಾಣೆಬೇನ್ನೂರು ಗ್ರಾಮೀಣ ಠಾಣೆ ಪೋಲಿಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
More Stories
ಬಹಳಷ್ಟು ಲಾಭ ಕೊಡುವುದಾಗಿ ನಂಬಿಸಿ 75.42 ಲಕ್ಷ ರೂ. ವಂಚನೆ
ಕಾಕೋಳ ಗ್ರಾಮದಲ್ಲಿ ಸೊಸೈಟಿಗೆ ಕನ್ನ ಹಾಕಿದ ಕಳ್ಳರು.
ಅಧಿಕಾರ ಶಾಶ್ವತವಲ್ಲ, ಜನರ ಸೇವೆ ನಿಜಾವಾದ ಶಾಶ್ವತ ಮಾಜಿ ಶಾಸಕ ಅರುಣಕುಮಾರ ಪೂಜಾರ