ಬ್ಯಾಡಗಿ: ಜವರಾಯ ಯಾವ ಸಮಯದಲ್ಲಿ ಹೇಗೆ ಬರುತ್ತಾನೆ ಎಂಬುದು ಯಾರಿಗೂ ತಿಳಿದಿರಲಿಲ್ಲ ಆದರೆ ದೇವರ ದರ್ಶನ ಮುಗಿಸಿಕೊಂಡು ಬರುತ್ತಿದ್ದ ಕುಟುಂಬಕ್ಕೆ ಜವರಾಯ ಅಡ್ಡವಾಗಿ ನಿಂತು ಹದಿನೈದು ಜೀವಗಳನ್ನು ಹಾರಿಸಿಕೊಂಡು ಹೋಗಿದ್ದಾನೆ.
ಹೌದು ಬ್ಯಾಡಗಿ ತಾಲೂಕಿನ ಮೋಟೆಬೇನ್ನೂರು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ-48 ರಲ್ಲಿ ಭೀಕರ ಅಪಘಾತದಲ್ಲಿ ಹದಿನೈದು ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಮೂಲತಃ ಶಿವಮೊಗ್ಗ ಜಿಲ್ಲೆಯ ಜನರು ಎಂದು ತಿಳಿದು ಬಂದಿದ್ದು, ಇವರು ಸವದತ್ತಿ ಯಲ್ಲಮ್ಮನ ದರ್ಶನ ಪಡೆದು ವಾಪಾಸು ಬರುತ್ತಿದ್ದ ಸಮಯದಲ್ಲಿ ಟಿಟಿ ವಾಹನ ಲಾರಿಗೆ ಅಪ್ಪಳಿಸಿದೆ. ಇದರಿಂದ ಟಿಟಿ ವಾಹನದಲ್ಲಿ ಇದ್ದ ಸುಮಾರು ಹದಿನೈದು ಜನರು ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೋಲಿಸರ ಶವಗಳನ್ನು ಹೊರ ತೆಗೆದು ಆಸ್ಪತ್ರೆಗೆ ರವಾನಿಸಿದ್ದು, ಮೃತರ ಹೆಸರುಗಳು ಇನ್ನೂ ಪತ್ತೆಯಾಗಿಲ್ಲ.
More Stories
ಬಹಳಷ್ಟು ಲಾಭ ಕೊಡುವುದಾಗಿ ನಂಬಿಸಿ 75.42 ಲಕ್ಷ ರೂ. ವಂಚನೆ
ಕಾಕೋಳ ಗ್ರಾಮದಲ್ಲಿ ಸೊಸೈಟಿಗೆ ಕನ್ನ ಹಾಕಿದ ಕಳ್ಳರು.
ಅಧಿಕಾರ ಶಾಶ್ವತವಲ್ಲ, ಜನರ ಸೇವೆ ನಿಜಾವಾದ ಶಾಶ್ವತ ಮಾಜಿ ಶಾಸಕ ಅರುಣಕುಮಾರ ಪೂಜಾರ