ರಾಣೆಬೇನ್ನೂರು: ತಾಲೂಕಿನ ಚಳಗೇರಿ ಗ್ರಾಮದಲ್ಲಿ ಡೇಂಗ್ಯೂ ಜ್ವರಕ್ಕೆ ಬಾಲಕನೊರ್ವ ಬಲಿಯಾಗಿದ್ದು, ಗ್ರಾಮದ ಜನರಲ್ಲಿ ತೀವ್ರ ಆತಂಕ ಉಂಟು ಮಾಡಿದೆ.
ಗ್ರಾಮದ ಧನು ಅಡಿವೆಪ್ಪ ಹೊನ್ನಕ್ಕಳವರ(14) ಮೃತಪಟ್ಟ ಬಾಲಕ.
ಕಳೆದ ಒಂದು ವಾರದಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಬಾಲಕನಿಗೆ ಚಿಕಿತ್ಸೆ ಕೋಡಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದ್ದು, ಸ್ಥಳಕ್ಕೆ ತಾಲೂಕು ಆರೋಗ್ಯ ಅಧಿಕಾರಿಗಳು ಭೇಟಿ ನೀಡಿ ಮಾಹಿತಿ ಪಡೆಯುತ್ತಿದ್ದಾರೆ.
ಅಲ್ಲದೇ ಚಳಗೇರಿ ಗ್ರಾಮದ ಜನರಲ್ಲಿ ಇದೀಗ ತೀವ್ರ ಆತಂಕ ಉಂಟು ಮಾಡಿದ್ದು, ಸೂಕ್ತ ಚಿಕಿತ್ಸೆ ಹಾಗೂ ಜನರಿಗೆ ಆರೋಗ್ಯದ ಬಗ್ಗೆ ಅರಿವು ಮೂಡಿಸಬೇಕು ಎಂದು ಗ್ರಾಮಸ್ಥರು ಆರೋಗ್ಯ ಇಲಾಖೆಗೆ ಮನವಿ ಮಾಡಿದ್ದಾರೆ.
More Stories
ಬಹಳಷ್ಟು ಲಾಭ ಕೊಡುವುದಾಗಿ ನಂಬಿಸಿ 75.42 ಲಕ್ಷ ರೂ. ವಂಚನೆ
ಕಾಕೋಳ ಗ್ರಾಮದಲ್ಲಿ ಸೊಸೈಟಿಗೆ ಕನ್ನ ಹಾಕಿದ ಕಳ್ಳರು.
ಅಧಿಕಾರ ಶಾಶ್ವತವಲ್ಲ, ಜನರ ಸೇವೆ ನಿಜಾವಾದ ಶಾಶ್ವತ ಮಾಜಿ ಶಾಸಕ ಅರುಣಕುಮಾರ ಪೂಜಾರ