ರಾಣೆಬೇನ್ನೂರು: ತಾಲೂಕಿನ ಚಳಗೇರಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ-04 ರ ಮೇಲೆ ಕಾರು ಡಿಕ್ಕಿಯಾಗಿ ಮಹಿಳೆಯೊಬ್ಬಳು ಸ್ಥಳದಲ್ಲಿ ಸಾವನ್ನಪ್ಪಿದ ಘಟನೆ ಬುಧವಾರ ನಡೆದಿದೆ.
ಗ್ರಾಮದ ದುರ್ಗಮ್ಮ ಬಸಪ್ಪ ಹೊನ್ನಕ್ಕಳವರ(52) ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ.
ಮಹಿಳೆ ರಸ್ತೆ ದಾಟುವಾಗ ಹುಬ್ಬಳ್ಳಿ ಯಿಂದ ಬೆಂಗಳೂರು ಕಡೆ ತೆರಳುತ್ತಿದ್ದ ಕಾರು ಏಕಾಏಕಿ ಬಂದು ರಭಸವಾಗಿ ಮಹಿಳೆಗೆ ಡಿಕ್ಕಿಯಾಗಿದೆ. ಇದರಿಂದ ಮಹಿಳೆ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲಿ ಸಾವನ್ನಪ್ಪಿದ್ದಾಳೆ.
ಸ್ಥಳಕ್ಕೆ ರಾಣೆಬೇನ್ನೂರು ಗ್ರಾಮೀಣ ಪೋಲಿಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
More Stories
ಬಹಳಷ್ಟು ಲಾಭ ಕೊಡುವುದಾಗಿ ನಂಬಿಸಿ 75.42 ಲಕ್ಷ ರೂ. ವಂಚನೆ
ಕಾಕೋಳ ಗ್ರಾಮದಲ್ಲಿ ಸೊಸೈಟಿಗೆ ಕನ್ನ ಹಾಕಿದ ಕಳ್ಳರು.
ಅಧಿಕಾರ ಶಾಶ್ವತವಲ್ಲ, ಜನರ ಸೇವೆ ನಿಜಾವಾದ ಶಾಶ್ವತ ಮಾಜಿ ಶಾಸಕ ಅರುಣಕುಮಾರ ಪೂಜಾರ