ರಾಣೆಬೇನ್ನೂರು: ಕಳೆದ ಒಂದೂವರೆ ವರ್ಷ ನಂತರ ನಗರಸಭೆಯ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಸರ್ಕಾರ ಮೀಸಲಾತಿ ಪಟ್ಟಿ ರಚಿಸಿ ಆದೇಶ ಹೊರಡಿಸಿದೆ.
ಈ ಆದೇಶದಲ್ಲಿ ರಾಣೆಬೇನ್ನೂರು ನಗರಸಭೆಯ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿ ಪ್ರಕಟವಾಗಿದ್ದು ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗದ ಅ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿದೆ.
ಒಟ್ಟು 35 ಸ್ಥಾನ ಹೊಂದಿರುವ ನಗರಸಭೆ ಸದಸ್ಯರಲ್ಲಿ ಬಿಜೆಪಿ ಸದಸ್ಯರ ಸಂಖ್ಯೆ ಹೆಚ್ಚಾಳವಾಗಿದೆ. ನಂತರ ಆರ್.ಶಂಕರ್ ಸದಸ್ಯರು ಸೇರಿದಂತೆ ಕಾಂಗ್ರೆಸ್ ನ ಒಂಬತ್ತು ಜನರು ಸದಸ್ಯರು ಇದ್ದಾರೆ. ಈ ಬಾರಿ ಅಧ್ಯಕ್ಷ ಸ್ಥಾನಕ್ಕೆ ಮಹಿಳೆಯರು ನಡುವೆ ತೀವ್ರ ಪೈಪೋಟಿ ನಡೆಯುವುದರಲ್ಲಿ ಯಾವುದೇ ಎರಡು ಮಾತಿಲ್ಲ.
ಬಿಜೆಪಿ ಸದಸ್ಯರ ಪೈಕಿ ಹಿಂದುಳಿದ ವರ್ಗದ ಐದು ಜಮ ಮಹಿಳಾ ಸದಸ್ಯರು ಮುಂಚೂಣಿ ಇದ್ದರೆ ಕಾಂಗ್ರೆಸ್ ಪಕ್ಷದಿಂದ ಇಬ್ಬರು ಮಹಿಳೆಯರು ಸಹ ಪೈಪೋಟಿ ನಡೆಸಲು ಮುಂದಾಗಬಹದು . ಆದರೆ ಬಿಜೆಪಿ ಪಕ್ಷದ ನಗರಸಭೆ ಸದಸ್ಯರಲ್ಲಿ ಎಲ್ಲವೂ ಸರಿಯಿಲ್ಲ ಎಂಬ ಮಾತುಗಳು ಕೇಳಿಬಂದಿದ್ದು ಇದನ್ನೆ ಲಾಭ ಪಡೆದುಕೊಂಡು ಕಾಂಗ್ರೆಸ್ ಅಧಿಕಾರ ಪಡೆಯಲು ಮುಂದಾಗಬಹದು ಎಂಬ ಮಾತುಗಳು ಕೇಳಿ ಬರುತ್ತಿದೆ.
More Stories
ತಾಪಂ ಸಾಮಾನ್ಯ ಸಭೆಗೆ ತಹಸೀಲ್ದಾರ ಗೈರು, ನೋಟಿಸ್ ನೀಡುವಂತೆ ಉಪಕಾರ್ಯದರ್ಶಿ ಸೂಚನೆ
ತುಂಗಭದ್ರಾ ನದಿಯಲ್ಲಿ 15 ಕಿ.ಮೀ. ಈಜಿ ಪ್ರಾಣ ಉಳಿಸಿಕೊಂಡ ಮೈಸೂರಿನ ವೃದ್ಧ…!
ಮೂರು ಬೈಕಗಳ ನಡುವೆ ಭೀಕರ ಅಪಘಾತ ಒರ್ವ ಯುವಕ ಸಾವು, ಮೂವರು ಗಂಭೀರ.