ರಾಣೆಬೇನ್ನೂರು: ಹಾವೇರಿ ಜಿಲ್ಲೆಯ ಏಳು ತಾಲೂಕು ಸೇರಿದಂತೆ ಉತ್ತರ ಕರ್ನಾಟಕದ್ಯಾಂತ ರೇಷ್ಮೆ ಬೆಳೆಗಾರರಿಗೆ ಇದೀಗ ಗುಡ್ ನ್ಯೂಸ್ ಒಂದು ಸಿಕ್ಕಿದೆ.
ಅದೇನೆಂದರೆ ರಾಣೆಬೇನ್ನೂರು ತಾಲೂಕಿನ ಹೂಲಿಹಳ್ಳಿ ಬಳಿವಿರುವ ಮೆಗಾ ಮಾರುಕಟ್ಟೆ ಪಕ್ಕದಲ್ಲಿ ರೇಷ್ಮೆ ಮಾರುಕಟ್ಟೆ ಕೇಂದ್ರಕ್ಕೆ ಇಂದು ಅಧಿಕೃತವಾಗಿ ಕಟ್ಟಡ ಭೂಮಿ ಪೂಜೆ ಮಾಡಲಾಯಿತು.
ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣನವರ ಮಾರುಕಟ್ಟೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿ ನಮ್ಮ ಹಾವೇರಿ ಜಿಲ್ಲೆಯ ಹಾಗೂ ಅಕ್ಕಪಕ್ಕದ ರೇಷ್ಮೆ ಬೆಳೆಗಾರರ ಬಹುದಿನಗಳ ಬೇಡಿಕೆಯಾಗಿ ಉಳಿದಿದ್ದ ರೇಷ್ಮೆ ಮಾರುಕಟ್ಟೆ ಇದೀಗ ನಮ್ಮ ನೇತೃತ್ವದಲ್ಲಿ ಚಾಲನೆ ಸಿಕ್ಕಿದೆ. ಸುಮಾರು ಐದು ಎಕರೆ ಪ್ರದೇಶದಲ್ಲಿ ಹದಿನೈದು ಕೋಟಿ ರೂ ವೆಚ್ಚದಲ್ಲಿ ವಿಶಾಲವಾದ ಮಾರುಕಟ್ಟೆ ನಿರ್ಮಾಣ ಮಾಡಲಾಗುವುದು. ಇದರಿಂದ ಇಲ್ಲಿನ ರೈತರಿಗೆ ಅನುಕೂಲಕರ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ತಹಸೀಲ್ದಾರ ಆರ್.ಹೆಚ್.ಭಾಗವಾನ, ರೇಷ್ಮೆ ಅಧಿಕಾರಿ ಪಾಟೀಲ, ಗ್ರಾಪಂ ಅಧ್ಯಕ್ಷೆ ಬಸಮ್ಮ ತಳವಾರ, ಮುಖಂಡರಾದ ಬಸವರಾಜ ಸವಣೂರು, ವೀರನಗೌಡ ಪೋಲಿಸಗೌಡರ ಸೇರಿದಂತೆ ಇತರರು ಹಾಜರಿದ್ದರು.
More Stories
ತಾಪಂ ಸಾಮಾನ್ಯ ಸಭೆಗೆ ತಹಸೀಲ್ದಾರ ಗೈರು, ನೋಟಿಸ್ ನೀಡುವಂತೆ ಉಪಕಾರ್ಯದರ್ಶಿ ಸೂಚನೆ
ತುಂಗಭದ್ರಾ ನದಿಯಲ್ಲಿ 15 ಕಿ.ಮೀ. ಈಜಿ ಪ್ರಾಣ ಉಳಿಸಿಕೊಂಡ ಮೈಸೂರಿನ ವೃದ್ಧ…!
ಮೂರು ಬೈಕಗಳ ನಡುವೆ ಭೀಕರ ಅಪಘಾತ ಒರ್ವ ಯುವಕ ಸಾವು, ಮೂವರು ಗಂಭೀರ.