ರಾಣೆಬೇನ್ನೂರು: ಸ್ವಾತಂತ್ರ್ಯ ದಿನಾಚರಣೆ ಸಮಯದಲ್ಲಿ ರಾಷ್ಟ್ರೀಯತೆ ಹಾಗೂ ಹಾಗೂ ಸ್ವಾತಂತ್ರ್ಯ ಹೋರಾಟದ ಬಗ್ಗೆ ಭಾಷಣ ಮಾಡುವುದನ್ನು ಕೇಳಿದ್ದೇವಿ ಆದರೆ ಸರ್ಕಾರಿ ನೌಕರನೊರ್ವ ಮಹಾಭಾರತದ ಶಕುನಿ ಡೈಲಾಗ್ ಹೊಡೆದು ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ನಗರದ ನಗರಸಭಾ ಕ್ರೀಡಾಂಗಣದಲ್ಲಿ ಆಯೋಜಿಸಿದ 78 ನೇ ಸ್ವಾತಂತ್ರ್ಯ ದಿನಾಚರಣೆ ಸಮಯದಲ್ಲಿ ಈ ಪ್ರಸಂಗ ನಡೆದಿದೆ.
ಶಿಕ್ಷಣ ಇಲಾಖೆಯ ಸಿ ಆರ್ ಪಿ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಬೀರಪ್ಪ ಅಣಜಿ ಎಂಬ ನೌಕರ ಈ ಡೈಲಾಗ್ ಹೇಳಿದ್ದಾರೆ. ಸ್ವತಂತ್ರ ದಿನದ ಸಮಯದಲ್ಲಿ ಸ್ವಾತಂತ್ರಕ್ಕಾಗಿ ಹೋರಾಟ ಮಾಡಿದ ದೇಶ ಭಕ್ತರು ಬಗ್ಗೆ ಹಾಗೂ ದೇಶದ ಬಗ್ಗೆ ಮಾತನಾಡುವ ಬದಲಾಗಿ ಶಕುನಿ ಪಾತ್ರದ ಡೈಲಾಗ್ ಹೇಳಿದ್ದಾರೆ. ಇದಕ್ಕೆ ಶಿಕ್ಷಣ ಇಲಾಖೆಯ ಬಿಇಓ ಶ್ಯಾಮಸುಂದರ ಅಡಿಗ ಹಾಗೂ ಇಲಾಖೆಯ ಎಲ್ಲಾ ಸಿಬ್ಬಂದಿಗಳು ಸಹ ಸಾಥ್ ನೀಡಿದ್ದಾರೆ.
ಸ್ವತಂತ್ರ ದಿನಾಚರಣೆಗೆ ಆಗಮಿಸಿದ ಸ್ಥಳೀಯರ ಹಾಗೂ ಜನಪ್ರತಿನಿಧಿಗಳು ಶಿಕ್ಷಕನ ವರ್ತನೆಗೆ ಆಕ್ರೋಶ ವ್ಯಕ್ತಪಡಿಸಿ ಅವರ ಮೇಲೆ ಕ್ರಮ ಕೈಗೊಳ್ಳಲು ಒತ್ತಾಯಿಸಿದ್ದಾರೆ
More Stories
ತಾಪಂ ಸಾಮಾನ್ಯ ಸಭೆಗೆ ತಹಸೀಲ್ದಾರ ಗೈರು, ನೋಟಿಸ್ ನೀಡುವಂತೆ ಉಪಕಾರ್ಯದರ್ಶಿ ಸೂಚನೆ
ತುಂಗಭದ್ರಾ ನದಿಯಲ್ಲಿ 15 ಕಿ.ಮೀ. ಈಜಿ ಪ್ರಾಣ ಉಳಿಸಿಕೊಂಡ ಮೈಸೂರಿನ ವೃದ್ಧ…!
ಮೂರು ಬೈಕಗಳ ನಡುವೆ ಭೀಕರ ಅಪಘಾತ ಒರ್ವ ಯುವಕ ಸಾವು, ಮೂವರು ಗಂಭೀರ.