ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.

ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.

ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.

ಸ್ಪೆಷಲ್ ತರಗತಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ,ಮಾಸ್ತರ ಎಸ್ಕೇಪ್..!

ಬಿಜೆಪಿ, ಜೆಡಿಎಸ್ ಹಾಗೂ ರೈತ ನಾಯಕ ರವಿಂದ್ರಗೌಡ ಪಾಟೀಲ ನೇತೃತ್ವದಲ್ಲಿ ಬೃಹತ್ ರೈತರ ಹೋರಾಟ.

ನಗರದಲ್ಲಿ NDA ವತಿಯಿಂದ ಕಾಂಗ್ರೆಸ್ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ.

ಬೆಂಬಲ ಬೆಲೆ ನೀಡಲು ಆಗ್ರಹಿಸಿ ಸರ್ಕಾರದ ವಿರುದ್ಧ ನಾಳೆ ಬಿಜೆಪಿ-ಜೆಡಿಎಸ್ ಜಂಟಿ ಪ್ರತಿಭಟನೆ

ಹೆಂಡತಿ ಹೊಡೆದು ಕೊಲೆ ಮಾಡಿದ ಪತಿರಾಯ..

ನಾವು ಯಾರನ್ನು ಟಾರ್ಗೆಟ್ ಮಾಡಲ್ಲ, ಮಾಡಿದ್ರೆ ಬೀಡಲ್ಲ ಎಸ್ಪಿ ಯಶೋಧ ವಂಟಗೋಡಿ.

ದೈಹಿಕ ಸಂಪರ್ಕ ಮಾಡಿ ಯುವತಿಗೆ ಕೈಕೊಟ್ಟ ಯುವಕ. ಯುವತಿ ಆತ್ಮಹತ್ಯೆ ಹುಡಗನ‌ ಮನೆ ಮುಂದೆ ಶವವಿಟ್ಟು ಪ್ರತಿಭಟನೆ..

ತಮ್ಮನ ಸಾವಿನಿಂದ ಮನನೊಂದ ಅಕ್ಕನು ನೇಣಿಗೆ ಶರಣು…!

ಸಚಿವ ಶಿವಾನಂದ ಪಾಟೀರನ್ನ BJP ಎಂದ ರೊಬೋಟ್

ರಾಣೆಬೇನ್ನೂರ ನಗರದಲ್ಲಿ ಭವ್ಯವಾಗಿ ನಡೆದ ಆರ್ ಎಸ್ ಎಸ್ ಪಥ ಸಂಚಲನ, ಒಂದು ಸಾವಿರ ಗಣವೇಷಧಾರಿಗಳು ಭಾಗಿ

ಎರಡು ವರ್ಷದಲ್ಲಿ ಎಷ್ಟು ಬಾರಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಗೆ ಹಾಜರಾಗದ ದಲಿತ ವಿರೋಧಿ ಶಾಸಕ; ಮಾಜಿ ಶಾಸಕ ಅರುಣಕುಮಾರ ಪೂಜಾರ.

ಕುದರಿಹಾಳ ಗ್ರಾಮದಲ್ಲಿ ಸಿಡಿಲು ಬಡಿದು ಯುವ ಕೃಷಿಕ ಸಾವು

ಕೈ-ಕಮಲ ನಡುವೆ ರಾಜಕೀಯ ಪ್ರತಿಷ್ಠೆ; ನಗರಸಭೆ ಸಾಮಾನ್ಯ ಸಭೆ ಮುಂದೂಡಿಕೆ.

ಹಾನಗಲ್ ತಹಸೀಲ್ದಾರ ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ.

ಬಿಗರ ಊಟ ಮಾಡಿ ಬರುತ್ತಿದ್ದವರು ಮಸಣಕ್ಕೆ *ನಿಂತಿದ್ದ ಟ್ರ್ಯಾಕ್ಟರ್ ಟ್ರೈಲರ್ ಗೆ ಟಾಟಾ ಸುಪ್ರೋ ಡಿಕ್ಕಿ* *ಸ್ಥಳದಲ್ಲಿಯೆ ಮೂವರ ದುರ್ಮರಣ, 20ಕ್ಕೂ ಅಧಿಕರಿಗೆ ಗಂಭೀರ ಗಾಯ*

ತಾಪಂ ಪ್ರಭಾರ ಇಓ ಬಸವರಾಜ ಶಿಡೇನೂರ ಬಳಿ ಒಂದೂವರೆ ಕೋಟಿ ಆಸ್ತಿ..

ಕಂದಾಯ ನಿರೀಕ್ಷ ಅಶೋಕ‌ ಅರಳೇಶ್ವರ ಬಳಿ ಕೋಟ್ಯಾಂತರ ಆಸ್ತಿ ಪತ್ತೆ.

ಶಿಕ್ಷಣಕ್ಕೆ ಆಧ್ಯತೆ ನೀಡಿದಾಗ ದೇಶ ಅಭಿವೃದ್ಧಿ ಹೊಂದಲು ಸಾಧ್ಯ ಶಾಸಕ ಪ್ರಕಾಶ ಕೋಳಿವಾಡ.

ರಾಣೆಬೇನ್ನೂರು: ಶಿಕ್ಷಣಕ್ಕೆ ಆಧ್ಯತೆ ನೀಡಿದಾಗ ಮಾತ್ರ ದೇಶ, ರಾಜ್ಯ, ಗ್ರಾಮಗಳು ಅಭಿವೃದ್ಧಿ ಹೊಂದಲು ಸಾಧ್ಯವೆಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.

ನಗರದ ನಗರಸಭೆ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಆಯೋಜನೆ ಮಾಡಿದ್ದ 78ನೇ ಸ್ವಾತಂತ್ರ್ಯ  ಕಾರ್ಯಕ್ರಮದ ಧ್ವಜಾರೋಹಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಚುನಾವಣೆಯಲ್ಲಿ ಕೋಟಿಗಟ್ಟಲೇ ಹಣ ಖರ್ಚು ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಶಿಕ್ಷಣದಿಂದ ಭ್ರಷ್ಟಾಚಾರ ಕಡಿವಾಣ ಹಾಕಬಹುದು ಹಾಗೂ ಸಮಾಜದಲ್ಲಿ ಸಮಾನತೆ ತರಲು ಸಾಧ್ಯವಾಗುತ್ತದೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಲಾಗಿದೆ. ಗ್ರಾಮೀಣ ಪ್ರದೇಶದ ಮಕ್ಕಳಿಗೂ ನಗರ ಪ್ರದೇಶದ ಮಕ್ಕಳ ರೀತಿಯಲ್ಲಿ ಇಂಗ್ಲೀಷ್ ಮಾಧ್ಯಮದ ಎಲ್‌ಕೆಜಿ ಮತ್ತು ಯುಕೆಜಿ ಶಿಕ್ಷಣವನ್ನು ನೀಡಲು ಕ್ರಮ ಕೈಗೊಳ್ಳಲಾಗಿದೆ. ತಾಲೂಕಿನಲ್ಲಿ ಮೊದಲ ಹಂತವಾಗಿ ೧೮ ಗ್ರಾಮಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ಪ್ರಾರಂಭಿಸಲಾಗಿದೆ ಎಂದರು.

ಧ್ವಜಾರೋಹಣ ನೆರವೇರಿಸಿದ ತಹಸೀಲ್ದಾರ ಆರ್.ಎಚ್.ಭಾಗವಾನ್ ಮಾತನಾಡಿ, ಅನೇಕರ ತ್ಯಾಗ, ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರಕಿದ ಇತಿಹಾಸವನ್ನು ಇಂದಿನ ಯುವ ಪೀಳಿಗೆಗೆ ತಿಳಿಸುವುದೇ ಸ್ವಾತಂತ್ರö್ಯ ದಿನಾಚರಣೆಯ ಉದ್ದೇಶವಾಗಿದೆ. ನಾವೆಲ್ಲಾ ಭಾರತೀಯರು ಒಂದಾಗಬೇಕು. ನಮ್ಮ ತಾಯ್ನಾಡಿಗೆ ಎಂದಿಗೂ ದ್ರೋಹ ಮಾಡಲು ಬಿಡುವುದಿಲ್ಲ ಎಂಬ ಭರವಸೆಯನ್ನು ನಾವಿಂದು ನೀಡಬೇಕಾಗಿದೆ. ನಮ್ಮ ದೇಶವನ್ನು ಶಕ್ತಿಯುತ ಮತ್ತು ವಿಶ್ವದಲ್ಲಿ ಗೌರವಾನ್ವಿತವಾಗಿಸಲು ನಾವು ಎಲ್ಲ ಪ್ರಯತ್ನಗಳನ್ನು ಮಾಡಬೇಕಾಗಿದೆ ಎಂದರು.

ಅಪರಾಧ ವಿಭಾಗದ ಪಿಎಸ್‌ಐ ಎಚ್.ಎನ್.ದೊಡ್ಡಮನಿ ನೇತೃತ್ವದಲ್ಲಿ ಪೋಲಿಸ್, ಗೃಹರಕ್ಷಕ ದಳ, ಎನ್.ಸಿ.ಸಿ, ಸ್ಕೌಟ್ಸ್, ಗೈಡ್, ಸೇವಾದಳ ಹಾಗೂ ವಿವಿಧ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮಕ್ಕಳು ಆಕರ್ಷಕ ಪಥಸಂಚಲನ ನಡೆಸಿದರು.

ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಮಕ್ಕಳು ವಿವಿಧ ಮನೋರಂಜನಾ ಕಾರ್ಯಕ್ರಮಗಳನ್ನು ನೀಡಿ ನೆರೆದಿದ್ದ ಜನರನ್ನು ರಂಜಿಸಿದರು.

ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಭೀಮಪ್ಪ ಕುಡಪಲಿ, ಟಿಎಪಿಸಿಎಂಎಸ್ ಅಧ್ಯಕ್ಷ ಯಲ್ಲರಡ್ಡಿ ರಡ್ಡೇರ, ನಗರಸಭೆ ಪೌರಾಯುಕ್ತ ಭೀಮಪ್ಪ ಇಂಗಳಗಿ, ತಾಪಂ ಇಒ ಪರಮೇಶ, ಡಿವೈಎಸ್‌ಪಿ ಡಾ.ಗಿರೀಶ ಬೋಜಣ್ಣನವರ, ಬಿಇಒ ಶಾಮಸುಂದರ ಅಡಿಗ ಹಾಗೂ ನಗರಸಭಾ ಸದಸ್ಯರುಗಳು ವೇದಿಕೆಯಲ್ಲಿದ್ದರು.

ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವನರನ್ನು ತಾಲೂಕು ಆಡಳಿತದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಅರ್ಹ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಕೊಡಮಾಡಲಾದ ಲ್ಯಾಪ್‌ಟ್ಯಾಪ್‌ಗಳನ್ನು ವಿತರಿಸಲಾಯಿತು.

ನ್ಯಾಷನಲ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ರಾಷ್ಟçಗೀತೆ, ನಾಡಗೀತೆ ಮತ್ತು ರೈತಗೀತೆಗಳನ್ನು ಹಾಡಿದರು.

 

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!