16 ಲಕ್ಷ ಮೌಲ್ಯದ ಬಂಗಾರ ಮಾರಾಟ ಮಾಡಲು ಯತ್ನಿಸಿದ ಮಹಿಳೆ ಬಂಧನ…

ಹಾವೇರಿ ಜಿಲ್ಲಾಸತ್ರ ಕೋರ್ಟ್‌ಗೆ ಬಾಂಬ್ ಬೆದರಿಕೆ ಪತ್ರ; ಕೋರ್ಟನಿಂದ ಓಡಿ ಬಂದ ಕಕ್ಷಿದಾರರು, ವಕೀಲರು.

ಸಿಎಂ ಕುರ್ಚಿ ಗುದ್ದಾಟದ ವಿಚಾರ…! ಮತ್ತೆ ಗರಂ ಆದ ಸಿಎಂ ಸಿದ್ಧರಾಮಯ್ಯ.

ಸಾಯಿ ಆಸ್ಪತ್ರೆ ವೈದ್ಯನ ಮೇಲೆ ಹಲ್ಲೆ: 8 ಜನರ ವಿರುದ್ಧ ಪ್ರಕರಣ ದಾಖಲು.

ಹಾವೇರಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ನಿಂಗರಾಜ ಕೋಡಿಹಳ್ಳಿ, ಪ್ರಧಾನ ಕಾರ್ಯದರ್ಶಿಯಾಗಿ ಸಿದ್ದು ಚಿಕ್ಕಬಿದರಿ ನೇಮಕ.

ನ್ಯಾಯಬೆಲೆ ಅಂಗಡಿ ಪ್ರಾಧಿಕಾರವನ್ನು ವರ್ಗಾವಣೆ ಮಾಡಿಕೊಡಲು ಲಂಚ ಸ್ವೀಕಾರ, ರಾಣೆಬೆನ್ನೂರ ತಹಶೀಲ್ದಾರ ಕಛೇರಿಯ ಆಹಾರ ನಿರೀಕ್ಷಕ ಬಂಧನ.

ಉಚಿತ ಚಿಕನ್ ಬಿರಿಯಾನಿ ಬೇಕಾ,‌ ಆಗಾದ್ರೆ ಬಸ್ ನಿಲ್ದಾಣಕ್ಕೆ ಬನ್ನಿ.

ಅಂಬೇಡ್ಕರ್, ಗಾಂಧಿ ಹೆಸರು ಅಳಿಸಲು ಹೊರಟಿರುವ ವಿರುದ್ಧ ನನ್ನ ಹೋರಾಟ; ಸಚಿವ ಸತೀಶ ಜಾರಕಿಹೊಳಿ

ನಗರಸಭೆ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಜಿಲ್ಲಾಧಿಕಾರಿ.

ತವರ ಮನೆಗೆ ಹೆಂಡತಿ ಹೋದಾಗ ಎರಡನೇ ಮದುವೆಯಾದ ಭೂಪ ಜೈಲು ಪಾಲು…!

ದಾರಿ ತಪ್ಪಿ ಬಂದಿದಲ್ಲ, ದಾರಿ ಹುಡಕಿಕೊಂಡು ಬಂದೇನಿ; ಗಜರಾಜನ ಕೂಗಾಟ

ತಾಯಿ ಮೇಲೆ ಹಲ್ಲೆ ಮಾಡಿದ್ರೆ ಹುಷಾರ…! ಪುತ್ರ, ಸೊಸೆಗೆ ಜೈಲು ಪಾಲು

ನಿರ್ಮಾಣ ಹಂತದ ಟ್ಯಾಂಕನಿದ್ದು ಬಿದ್ದು ಕಾರ್ಮಿಕ ಸಾವು.

ಒಂಟಿ ಮನೆಯಲ್ಲಿದ್ದ ಮಹಿಳೆಯ ಕತ್ತು ಕೊಯ್ದು ಕೊಲೆ‌ಮಾಡಿದ ವ್ಯಕ್ತಿ ಬಂಧನ

ರಾಣೆಬೇನ್ನೂರ ನಗರದಲ್ಲಿ ಮಹಿಳೆಯ ಭೀಕರ ಕೊಲೆ, ಕಾರಣ ನಿಗೂಢ…!

ಹೊಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವ ರೈತ ಸಾವು

ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.

ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.

ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.

ಸ್ಪೆಷಲ್ ತರಗತಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ,ಮಾಸ್ತರ ಎಸ್ಕೇಪ್..!

ನಗರದಲ್ಲಿ ಮುಸ್ಲಿಂ ಸಮುದಾಯದ ಬೃಹತ್ ಪ್ರತಿಭಟನೆ.. ಕಠಿಣ ಶಿಕ್ಷೆಗೆ ಆಗ್ರಹಿಸಿ ಸಾವಿರಾರು ಜನರು ಆಗ್ರಹ.

ರಾಣೆಬೇನ್ನೂರು: ಪ್ರವಾದಿ ಮುಹಮ್ಮದ್ ಪೈಗಂಬರ್ ಹಾಗೂ ಮುಸ್ಲಿಂ ಸಮುದಾಯದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಮಹಾರಾಷ್ಟ್ರ ಮೂಲದ ರಾಮಗಿರಿ ಮಹಾರಾಜ ಅವರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಸಾವಿರಾರು ಮುಸ್ಲಿಂ ಸಮುದಾಯದ ಜನರು ನಗರದಲ್ಲಿ ಮೌನ ಮೆರವಣಿಗೆ ಮೂಲಕ ಪ್ರತಿಭಟನೆ ನಡೆಸಿದರು.

ನಗರದ ಆಂಗ್ಲೋ ಉರ್ದು ಮೈದಾನದಿಂದ ಪ್ರಾರಂಭವಾದ ಪ್ರತಿಭಟನೆ ಮೆಡ್ಲೇರಿ ರಸ್ತೆ, ಪಿ.ಬಿ.ರಸ್ತೆ ಮಾರ್ಗವಾಗಿ ತಹಸೀಲ್ದಾರ ಕಚೇರಿಗೆ ತೆರಳಿತು.

 

ನಂತರ ಮಾತನಾಡಿದ ಮುಸ್ಲಿಂ ಸಮಾಜದ ಅಲ್ತಾಪ್ ಹಿಮಾಮಿ ನಾಡಿನ ಮಹಾಕವಿಯಾದ ಕುವೆಂಪು ಅವರು ಸರ್ವಜನಾಂಗದ ಶಾಂತಿಯ ತೋಟ ಎಂದು ನಮ್ಮ ರಾಜ್ಯ ನಮ್ಮ ದೇಶದ ಬಗ್ಗೆ ಹಾಡಿ ಹೊಗಳಿದ್ದಾರೆ. ಆದರೆ ಸಮಾಜದಲ್ಲಿ ಶಾಂತಿ ಕದಡುವ ಸಲುವಾಗಿ ಕೆಲವರು ಮುಂದಾಗಿದ್ದಾರೆ. ದೇಶದಲ್ಲಿ ಒಂದು ಧರ್ಮ ಇನ್ನೊಂದು ಧರ್ಮಕ್ಕೆ ನಿಂದಿಸುವುದಾಗಲಿ ಅಥವಾ ಅವಹೇಳನಕಾರಿ ಹೇಳಿಕೆ ನೀಡುವುದನ್ನು ಸಹಿಸುವುದಿಲ್ಲ.

ಅದರಂತೆ ಮಹಾರಾಷ್ಟ್ರ ಮೂಲದ ಮುಂಬ್ರಾ ಗ್ರಾಮದ ರಾಮಗಿರಿ ಮಹಾರಾಜ ಅವರು ಧಾರ್ಮಿಕ ಸಭೆಯಲ್ಲಿ ಮಹಮ್ಮದ್ ಪೈಗಂಬರ್ ಹಾಗೂ ಮುಸ್ಲಿಂ ಸಮುದಾಯದ ಕುರಿತು ಅವಹೇಳನಕಾರಿ ಭಾಷಣ ಮಾಡುವ ಮೂಲಕ ಸಮಾಜದಲ್ಲಿ ಶಾಂತಿ ಕದಡುವ ಕೆಲಸ ಮಾಡಿದ್ದಾರೆ. ಅಂತವರ ಮೇಲೆ ಕೇಂದ್ರ ಹಾಗೂ‌ ಮಹಾರಾಷ್ಟ್ರ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ರಾಷ್ಟ್ರಪತಿ ಮೂಲಕ ಆಗ್ರಹ ಮಾಡಿದರು.

 

ಅಂಜುಮನ್ ಸಂಸ್ಥೆ ಅಧ್ಯಕ್ಷರಾದ ಏಜಾಜ್ ಖಾಬ ಸೌದಾಗರ ಮಾತನಾಡಿ, ದೇಶದಲ್ಲಿ ಮುಸ್ಲಿಂ ಸಮುದಾಯದ ವಿರುದ್ಧ ನಿರಂತರವಾಗಿ ಅವಹೇಳನಕಾರಿ ಹೇಳಿಕೆ, ದೌರ್ಜನ್ಯ ಕಂಡು ಬರುತ್ತಿದ್ದ ಅವುಗಳನ್ನು ತಡೆಯಲು ಕೇಂದ್ರ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಮಹಮ್ಮದ್ ಪೈಗಂಬರ್ ಅವರು ಬಗ್ಗೆ ಇಂತಹ ನೀಚ ಹೇಳಿಕೆ ನೀಡಿದರು ಅವರ ಮೇಲೆ ಯಾವುದೇ ಕಾನೂನು ಕ್ರಮವನ್ನು ಈವರೆಗೂ ಜರುಗಿಸಿಲ್ಲ. ಕೂಡಲೇ ಅವರ ಮೇಲೆ ಕಾನೂನು ‌ಕ್ರಮ ಕೈಗೊಂಡು ಕಠಿಣ ಶಿಕ್ಷೆ ನೀಡಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

 

ಗ್ರೇಡ್-1 ತಹಸೀಲ್ದಾರ ಅರುಣಕುಮಾರ ಕಾರಗಿ ಮೂಲಕ ‌ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರಿಗೆ ಮನವಿ ಸಲ್ಲಿಸಿದರು.

 

ಪ್ರತಿಭಟನೆ ಸಮಯದಲ್ಲಿ ಅಂಜುಮನ್ ಸಂಸ್ಥೆಯ ಇಮ್ರಾನಖಾನ್ ಶಿರೇದ್, ರಫಿಕ್ ಮೆಣಸಿನಕಾಯಿ, ರಿಯಾಜ್ ಅಹ್ಮದ್ ಕುಪ್ಪೆಲೂರು,ಹುಸೇನಸಾಬ ಬಿದರಿ, ನೂರುಲ್ಲಾ ಖಾಜಿ, ಹಬೀಬವುಲ್ಲಾ ಕಂಬಳಿ, ಖಾಲಿದ್ ಬಾಶಾ ಭಾವಿಕಟ್ಟಿ, ನಜುರುಲ್ಲಾ ಕಿಲ್ಲೇದಾರ, ಭಾಷಾಸಾಬ್ ನೀಲಗಾರ ,ಅತಾವುಲ್ಲ ಉದಗಟ್ಟಿ ಸೇರಿದಂತೆ ಎಸ್ಡಿಪಿಐ ಪಕ್ಷದ ಮುಖಂಡರು ಹಾಜರಿದ್ದರು.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!