ರಾಣೇಬೆನ್ನೂರು : ಗೋವಾದ ಬಿಚ್ಚುಲಿಯ ಹಿರಬಾಯಿ ಸಭಾಂಗಣದಲ್ಲಿ ಅ.27ರಂದು ನಡೆಯಲಿರುವ 15ನೇ ಕನ್ನಡಿಗರ ಸಾಂಸ್ಕೃತಿಕ ಸಮ್ಮೇಳನದ ಅಂಗವಾಗಿ ಸಾಮಾಜಿಕ ಮತ್ತು ಧಾರ್ಮಿಕ ಸೇವೆಗೆ ನೀಡುವ ಕರುನಾಡ ಪದ್ಮಶ್ರೀ ಪ್ರಶಸ್ತಿಗೆ ತಾಲೂಕಿನ ಸಣ್ಣಸಂಗಾಪುರದ ಮಂಜಯ್ಯ ಚಾವಡಿ ಆಯ್ಕೆಯಾಗಿದ್ದಾರೆ.
ಗೋವಾದ ಬಿಚ್ಚುಲಿ ಕರ್ಮಭೂಮಿ ಕನ್ನಡ ಸಂಘ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಬೆಂಗಳೂರು ಕರ್ನಾಟಕ ಜಾಗೃತಿ ವೇದಿಕೆ ಸಂಯುಕ್ತ ಆಶ್ರಯದಲ್ಲಿ ನಡೆಯಲಿರುವ 15ನೇ ಕನ್ನಡಿಗರ ಸಾಂಸ್ಕೃತಿಕ ಸಮ್ಮೇಳನ ಕಾರ್ಯಕ್ರಮದಲ್ಲಿ ಗೋವಾದ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಪ್ರಶಸ್ತಿಯನ್ನು ಪ್ರಧಾನ ಮಾಡುವರು ಎಂದು ಕರ್ನಾಟಕ ಜಾಗೃತಿ ವೇದಿಕೆ ರಾಜ್ಯ ಸಂಚಾಲಕ ಮಹೇಶ್ ಬಾಬು ಸುರವೇ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
More Stories
ಬಹಳಷ್ಟು ಲಾಭ ಕೊಡುವುದಾಗಿ ನಂಬಿಸಿ 75.42 ಲಕ್ಷ ರೂ. ವಂಚನೆ
ಕಾಕೋಳ ಗ್ರಾಮದಲ್ಲಿ ಸೊಸೈಟಿಗೆ ಕನ್ನ ಹಾಕಿದ ಕಳ್ಳರು.
ಅಧಿಕಾರ ಶಾಶ್ವತವಲ್ಲ, ಜನರ ಸೇವೆ ನಿಜಾವಾದ ಶಾಶ್ವತ ಮಾಜಿ ಶಾಸಕ ಅರುಣಕುಮಾರ ಪೂಜಾರ