ರಾಣೆಬೇನ್ನೂರು: ಹಿಂದಿನ ಸರ್ಕಾರದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಚಿವರಾಗಿದ್ದ ಹೆಚ್.ಆಂಜನೇಯ ಅವರು ಬಂಜಾರ ಸಮುದಾಯದ ಕುರಿತು ಸುಳ್ಳು ಜಾತಿ ಗಣತಿ ವರದಿಯನ್ನು ಸರ್ಕಾರಕ್ಕೆ ನೀಡಿ, ಇದೀಗ ಒಳ ಮೀಸಲಾತಿಗೆ ಮುಂದಾಗಿದ್ದಾರೆ ಎಂದು ಬಂಜಾರ ಗುರುಪೀಠದ ಸರ್ದಾರ್ ಸೇವಾಲಾಲ್ ಸ್ವಾಮೀಜಿ ಆರೋಪ ಮಾಡಿದರು.
ರಾಣೆಬೇನ್ನೂರು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಂಜಾರ ಸಮಾಜವನ್ನು ಎಸ್ಸಿ ಮೀಸಲಾತಿಯಿಂದ ಹೊರಗಿಡಬೇಕು ಎಂದು ಕೆಲವರ ಕುತಂತ್ರ ಮಾಡಿ ಇದೀಗ ಒಳ ಮೀಸಲಾತಿ ಜಾರಿಗೆ ತರಲು ಮುಂದಾಗಿದ್ದಾರೆ. ರಾಜ್ಯದಲ್ಲಿ ಬಂಜಾರ ಸಮುದಾಯದ ತನ್ನದೆಯಾದ ಸಂಸ್ಕೃತಿ, ಆಚಾರ ವಿಚಾರ ಹೊಂದಿದ್ದು ಆರ್ಥಿಕವಾಗಿ ಬಹಳ ಹಿಂದ ಉಳಿದ ಸಮುದಾಯದ. ಇಂತಹ ಸಮುದಾಯಕ್ಕೆ ಇದೀಗ ಅನ್ಯಾಯ ಮಾಡುತ್ತಿರುವುದು ಸರಿಯಲ್ಲ ಎಂದು ತಿಳಿಸಿದರು.
2011 ರ ಜಾತಿ ಗಣತಿ ವರದಿಯ ಪ್ರಕಾರ ರಾಜ್ಯದಲ್ಲಿ ಕೇವಲ ಐದಾರು ಜಿಲ್ಲೆಯಲ್ಲಿ ಜಾತಿ ಗಣತಿ ಮಾಡಿ ಸರ್ಕಾರಕ್ಕೆ ವರದಿ ನೀಡಲಾಗಿದೆ. ಅಲ್ಲದೆ ಬಂಜಾರ ಸಮುದಾಯ ರಾಜ್ಯದಲ್ಲಿ ಆರ್ಥಿಕವಾಗಿ ಸದೃಢವಾಗಿದ್ದಾರೆ ಎಂದು ಹೇಳಲಾಗಿದೆ. ಈ ಹಿನ್ನೆಲೆ ಇದೀಗ ಎಸ್ಸಿ ಪಟ್ಟಿಯಲ್ಲಿ ಒಳ ಮೀಸಲಾತಿಯನ್ನು ಎಡ ಮತ್ತು ಬಲ ಸಮುದಾಯಕ್ಕೆ ನೀಡಬೇಕು ಎಂದು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಮುಂದಿನ ದಿನಗಳಲ್ಲಿ ಮೀಸಲಾತಿ ಜಾರಿ ಮಾಡಲಾಗುವುದು ಎಂದು ಹೇಳಿದ್ದಾರೆ ಆದರೆ ಯಾವುದೇ ಕಾರಣಕ್ಕೂ ಒಳ ಮೀಸಲಾತಿ ಜಾರಿ ಮಾಡಬಾರದು ಎಂದು ಸ್ವಾಮೀಜಿ ಆಗ್ರಹಿಸಿದರು.
More Stories
ಬಹಳಷ್ಟು ಲಾಭ ಕೊಡುವುದಾಗಿ ನಂಬಿಸಿ 75.42 ಲಕ್ಷ ರೂ. ವಂಚನೆ
ಕಾಕೋಳ ಗ್ರಾಮದಲ್ಲಿ ಸೊಸೈಟಿಗೆ ಕನ್ನ ಹಾಕಿದ ಕಳ್ಳರು.
ಅಧಿಕಾರ ಶಾಶ್ವತವಲ್ಲ, ಜನರ ಸೇವೆ ನಿಜಾವಾದ ಶಾಶ್ವತ ಮಾಜಿ ಶಾಸಕ ಅರುಣಕುಮಾರ ಪೂಜಾರ