ರಾಣೆಬೇನ್ನೂರು: ಇಲ್ಲಿನ ನಗರಸಭೆಯ ಅಧ್ಯಕ್ಷ ಸ್ಥಾನದ ಮೀಸಲಾತಿ ಹಂಚಿಕೆ ವಿಚಾರಣೆಯ ಕುರಿತು ನ.08 ರಂದು ಧಾರವಾಡ ಹೈಕೋರ್ಟ್ ಪೀಠ ಕೈಗೆತ್ತಿಕೊಳ್ಳಲಿದೆ.
ಕಳೆದ ಮೂರು ತಿಂಗಳ ಹಿಂದೆ ರಾಜ್ಯ ಸರ್ಕಾರ ರಾಜ್ಯದ ಎಲ್ಲಾ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ ಗಳ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿ ಹಂಚಿಕೆ ಮಾಡಿ ಆದೇಶ ಹೊರಡಿಸಿತು. ಆದರೆ ರಾಣೆಬೇನ್ನೂರು ನಗರಸಭೆಯ ಮೀಸಲಾತಿ ಹಂಚಿಕೆ ವಿರೋಧಿಸಿ ಸ್ಥಳಿಯ ನಗರಸಭೆ ಸದಸ್ಯ ಶಶಿಧರ ಬಸೇನಾಯಕ ಹೈಕೋರ್ಟ್ ಮೊರೆ ಹೋಗಿದ್ದರು. ಈ ಹಿಂದೆ ನಗರಸಭೆ ಅಧ್ಯಕ್ಷ ಸ್ಥಾನ ಹಿಂದುಳಿದ ಅ ವರ್ಗ ಮಹಿಳೆಗೆ ನೀಡಲಾಗಿತ್ತು. ಆದರೆ ಮತ್ತೆ ಅದೇ ಮೀಸಲಾತಿಯನ್ನು ಯಥಾವತ್ತಾಗಿ ಸರ್ಕಾರ ನೀಡಿದೆ ಆದರೆ ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಇಲ್ಲಿಯವರೆಗೆ ಪರಿಶಿಷ್ಟ ಪಂಗಡ ಸಮುದಾಯಕ್ಕೆ ಮೀಸಲಾತಿ ಕಲ್ಪಿಸಿಲ್ಲ ಎಂದು ಸರ್ಕಾರದ ವಿರುದ್ಧ ಹೈಕೋರ್ಟ್ ಮೊರೆ ಹೋಗಿದ್ದರು.
ಇದನ್ನು ಗಮನಿಸಿದ ಮಾನ್ಯ ನ್ಯಾಯಾಲಯ ನಾಳೆಯ ದಿವಸ ಈ ಪ್ರಕರಣ ಕುರಿತು ವಿಚಾರಣೆ ನಡೆಸಿ ಮೀಸಲಾತಿ ಹಂಚಿಕೆ ಕುರಿತು ತೀರ್ಪು ಪ್ರಕಟಿಸಿಬಹುದೆ ಎಂದು ಕಾದು ನೋಡಬೇಕಾಗಿದೆ.
More Stories
ಬಹಳಷ್ಟು ಲಾಭ ಕೊಡುವುದಾಗಿ ನಂಬಿಸಿ 75.42 ಲಕ್ಷ ರೂ. ವಂಚನೆ
ಕಾಕೋಳ ಗ್ರಾಮದಲ್ಲಿ ಸೊಸೈಟಿಗೆ ಕನ್ನ ಹಾಕಿದ ಕಳ್ಳರು.
ಅಧಿಕಾರ ಶಾಶ್ವತವಲ್ಲ, ಜನರ ಸೇವೆ ನಿಜಾವಾದ ಶಾಶ್ವತ ಮಾಜಿ ಶಾಸಕ ಅರುಣಕುಮಾರ ಪೂಜಾರ