ರಾಣೆಬೇನ್ನೂರು: ನಗರದ ದೊಡ್ಡಕೆರೆಯನ್ನು 9ಕೋಟಿ ರು. ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.
ನಗರದ ವಿವಿಧ ವಾರ್ಡ್‍ಗಳಲ್ಲಿ ಬುಧವಾರ 15ನೇ ಹಣಕಾಸು ಯೋಜನೆ ಅನುದಾನದಲ್ಲಿ 289.13 ಲಕ್ಷ ರು.ಗಳ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಾಳಿಗೆ ಭೂಮಿ ಪೂಜೆ ಸಲ್ಲಿಸಿ ಅವರು ಮಾತನಾಡಿದರು.
ಸಣ್ಣ ನೀರಾವರಿ ಇಲಾಖೆ ಮೂಲಕ ಕೆರೆಯಲ್ಲಿ ಬೋಟಿಂಗ್ ಸೌಲಭ್ಯ ಕಲ್ಪಿಸಿ ಇದನ್ನೊಂದು ಪ್ರವಾಸಿ ತಾಣ ಮಾಡಲಾಗುವುದು ಎಂದರು.
ನಗರಸಭೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ, ಪೌರಾಯುಕ್ತ ಫಕ್ಕೀರಪ್ಪ ಇಂಗಳಗಿ, ನಗರಸಭೆ ಮಾಜಿ ಸದಸ್ಯ ಬಸವರಾಜ ಹುಚಗೊಂಡರ, ಸುಧೀರ ಕುರವತ್ತಿ, ಮಧು ಕೋಳಿವಾಡ, ಪ್ರಶಾಂತ ಜೈನ್, ಮಹೇಶ ಜೈನ್, ರಾಜು ಕೋತಾರಿ, ಸೋಹನಲಾಲ್ ಜೈನ್ ಮತ್ತಿತರರಿದ್ದರು.ಸುಧೀರ ಕುರವತ್ತಿ, ಮಧು ಕೋಳಿವಾಡ, ಪ್ರಶಾಂತ ಜೈನ್, ಮಹೇಶ ಜೈನ್, ರಾಜು ಕೋತಾರಿ, ಸೋಹನಲಾಲ್ ಜೈನ್ ಮತ್ತಿತರರಿದ್ದರು.
More Stories
ಹೆಂಡತಿ ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡ ಗಂಡ ತಡಸ ಗ್ರಾಮದಲ್ಲಿ ಘಟನೆ
ದೇವರಗುಡ್ಡ ಮಾಲತೇಶ ಸ್ವಾಮಿಯ ಆಡಳಿತ ತಹಸೀಲ್ದಾರ್ ಸುಪರ್ದಿಗೆ…
ಸ್ವಚ್ಛ ಕೈಯಿಂದ ಕೆಲಸ ಮಾಡಿ ಇಲ್ಲ ರಾಜೀನಾಮೆ ಕೊಟ್ಟು ಹೊರಗೆ ಹೋಗಿ; ಲೋಕಾಯುಕ್ತ ಅಧಿಕಾರಿಗಳು.