ರಾಣೆಬೇನ್ನೂರು: ಕುಮದ್ವತಿ ನದಿಯಲ್ಲಿ ಈಜಲು ಹೋಗಿ ಇಬ್ಬರು ಬಾಲಕರು ಮೃತಪಟ್ಟ ಘಟನೆ ತಾಲೂಕಿನ ಲಿಂಗದಹಳ್ಳಿ ಗ್ರಾಮದಲ್ಲಿ ಮಧ್ಯಾಹ್ನ ನಡೆದಿದೆ.
ಗ್ರಾಮದ ರಾಕೇಶ ಬಸಪ್ಪ ಕೂಲೇರ(12) ಸಂತೋಷ ಬಸವರಾಜ ಚನ್ನಗೌಡ್ರ(12) ಮೃತಪಟ್ಟ ಬಾಲಕರು.
ಇವರಿಬ್ಬರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಆರನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು ಎನ್ನಲಾಗಿದೆ. ಮಧ್ಯಾಹ್ನ ಸಮಯದಲ್ಲಿ ಸ್ನಾನ ಮಾಡಲು ನದಿಗೆ ತೆರಳಿದ್ದು, ಈ ಸಮಯದಲ್ಲಿ ಈಜು ಬಾರದೆ ಮೃತಪಟ್ಟಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಇಬ್ಬರು ಬಾಲಕರ ಮೃತದೇಹವನ್ನು ಹೊರಗೆ ತಗೆದಿದ್ದು, ಶವಗಾರಕ್ಕೆ ರವಾನಿಸಲಾಗಿದೆ
ಘಟನೆ ನಡೆದ ಜಾಗಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು, ಪೋಲಿಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
More Stories
ಸ್ವಚ್ಛ ಕೈಯಿಂದ ಕೆಲಸ ಮಾಡಿ ಇಲ್ಲ ರಾಜೀನಾಮೆ ಕೊಟ್ಟು ಹೊರಗೆ ಹೋಗಿ; ಲೋಕಾಯುಕ್ತ ಅಧಿಕಾರಿಗಳು.
ಗುಡಗೂರು ಗ್ರಾಮದಲ್ಲಿ ವೃದ್ಧನ ಮೇಲೆ ಹರಿದ ಖಾಸಗಿ ಶಾಲೆಯ ಬಸ್.
ಇಸ್ವತ್ತು ಉತಾರ ನೀಡಲು ಲಂಚ ಪಡೆಯುತ್ತಿದ್ದ ಪಿಡಿಓ, ಉಪಾಧ್ಯಕ್ಷ ಸೇರಿ ಮೂರ ಜನ ಗ್ರಾಪಂ ಸದಸ್ಯರ ಬಂಧನ.