*ರಾಣೆಬೇನ್ನೂರು ಸುದ್ದಿ.ಕಾಂ
ಮುಂದಿನ ಫೆಬ್ರವರಿ ವೇಳೆಗೆ ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ತಯಾರಿಗಳಾಗುತ್ತಿವೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.
ಕೆಪಿಸಿಸಿ ಕಚೇರಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಗಿದೆ. ಮತದಾರರ ಪಟ್ಟಿ ಕೂಡ ಸಿದ್ಧಗೊಳ್ಳುತ್ತಿದೆ. ಚುನಾವಣೆಯನ್ನಂತು ನಿಲ್ಲಿಸಲು ಸಾಧ್ಯವಿಲ್ಲ. ಫೆಬ್ರವರಿಯಲ್ಲಿ ಮತದಾನದ ಸಾಧ್ಯತೆ ಇದೆ ಎಂದರು.
ಸಚಿವ ಸಂಪುಟ ಪುನರ್ ರಚನೆ ಚರ್ಚೆಯೇ ಇಲ್ಲ. ಅದರ ಅವಶ್ಯಕತೆಯೂ ಇಲ್ಲ. ಸಂಪುಟದಲ್ಲಿ ಒಂದು ಸ್ಥಾನ ಮಾತ್ರ ಖಾಲಿ ಇದೆ. ಬೆಳಗಾವಿಯ ಅಧಿವೇಶನದ ಬಳಿಕ ಅದನ್ನು ಭರ್ತಿ ಮಾಡುವ ಬಗ್ಗೆ ಪರಿಶೀಲಿಸಲಾಗುತ್ತಿದೆ.ಸಂಪುಟ ಪುನರ್ ರಚನೆಯಂತೂ ಸದ್ಯಕ್ಕಿಲ್ಲ ಎಂದು ಹೇಳಿದರು..

More Stories
ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.
ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.
ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.