ರಾಣೆಬೇನ್ನೂರು: ತಾಲೂಕಿನ ಸರ್ಕಾರಿ ಹೆರಿಗೆ ಆಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಯಲ್ಲಿ ಒಂದೇ ವರ್ಷದಲ್ಲಿ ಸುಮಾರು 34 ಶಿಶುಮರಣ ಆಗಿರುವುದು ತಾಪಂ ಕೆಡಿಪಿ ಸಭೆಯಲ್ಲಿ ಬಹಿರಂಗವಾಗಿದೆ.
ನಗರದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಇತ್ತೀಚಿಗೆ ಬಳ್ಳಾರಿ ಜಿಲ್ಲೆಯಲ್ಲಿ ಬಾಣಂತಿಯರ ಸಾವು ಹಿನ್ನೆಲೆ ಸಭೆಯಲ್ಲಿ ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನೆ ಬಗ್ಗೆ ಶಾಸಕರು ಚರ್ಚೆ ಮಾಡಿದರು. ಈ ಸಮಯದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ ನಮ್ಮಲ್ಲಿ ಯಾವುದೇ ಬಾಣಂತಿಯರ ಸಾವು ಆಗಿಲ್ಲ ಆದರೆ ಜನವರಿ ಯಿಂದ ಇಲ್ಲಿಯವರೆಗೆ ಸುಮಾರು ಮೂವತ್ತು ನಾಲ್ಕು ಶಿಶುಮರಣ ವಾಗಿದೆ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದರು.
ಇದಕ್ಕೆ ಕಾರಣ ಕೇಳಿದರೆ ಮಕ್ಕಳ ಹೃದಯ ಸಮಸ್ಯೆ, ಶ್ವಾಸಕೋಶ ಹಾಗೂ ಹಾಲು ಹೆಚ್ಚಾಗಿ ಕುಡಿದ ಹಿನ್ನೆಲೆ ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದರು.

More Stories
16 ಲಕ್ಷ ಮೌಲ್ಯದ ಬಂಗಾರ ಮಾರಾಟ ಮಾಡಲು ಯತ್ನಿಸಿದ ಮಹಿಳೆ ಬಂಧನ…
ಹಾವೇರಿ ಜಿಲ್ಲಾಸತ್ರ ಕೋರ್ಟ್‌ಗೆ ಬಾಂಬ್ ಬೆದರಿಕೆ ಪತ್ರ; ಕೋರ್ಟನಿಂದ ಓಡಿ ಬಂದ ಕಕ್ಷಿದಾರರು, ವಕೀಲರು.
ಸಾಯಿ ಆಸ್ಪತ್ರೆ ವೈದ್ಯನ ಮೇಲೆ ಹಲ್ಲೆ: 8 ಜನರ ವಿರುದ್ಧ ಪ್ರಕರಣ ದಾಖಲು.