ರಾಣೆಬೇನ್ನೂರು: ಹಾಡುಹಗಲೇ ಯುವತಿಯೊಬ್ಬಳು ತನ್ನ ದುಪ್ಪಟ್ಟದಿಂದ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಣೆಬೇನ್ನೂರು ನಗರದ ಕೇಂಬ್ರಿಡ್ಜ್ ಸ್ಕೂಲ್ ಹತ್ತಿರ ಪಾರ್ಕಿನಲ್ಲಿ ನಡೆದಿದೆ.
ಮೃತ ಯುವತಿ ಸಂಜನಾ ರಾಜಶೇಖರ ನಾಯಕ(28) ಎಂದು ಗುರುತಿಸಲಾಗಿದೆ.
ಯುವತಿ ಬಿಇ ಸಿವಿಲ್ ವ್ಯಾಸಂಗ ಮುಗಿಸಿದ್ದು ಕೆಲಸ ಮಾಡುತ್ತಿದ್ದಳು. ಮದುವೆಯಾಗದ ಕಾರಣ ತೀವ್ರ ಖಿನ್ನತೆಗೆ ಒಳಗಾಗಿದ್ದಳು ಎನ್ನಲಾಗಿದೆ. ಈ ಹಿನ್ನೆಲೆ ಮನೆಯಿಂದ ಹೊರಗೆ ಬಂದು ಪಾರ್ಕಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಸ್ಥಳಕ್ಕೆ ರಾಣೆಬೇನ್ನೂರು ಶಹರ ಠಾಣೆ ಪೋಲಿಸರು ಹಾಗೂ ಎಫ್ ಎಸ್ ಎಲ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.
ಶಹರ ಪೋಲಿಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
More Stories
ಬಹಳಷ್ಟು ಲಾಭ ಕೊಡುವುದಾಗಿ ನಂಬಿಸಿ 75.42 ಲಕ್ಷ ರೂ. ವಂಚನೆ
ಕಾಕೋಳ ಗ್ರಾಮದಲ್ಲಿ ಸೊಸೈಟಿಗೆ ಕನ್ನ ಹಾಕಿದ ಕಳ್ಳರು.
ಅಧಿಕಾರ ಶಾಶ್ವತವಲ್ಲ, ಜನರ ಸೇವೆ ನಿಜಾವಾದ ಶಾಶ್ವತ ಮಾಜಿ ಶಾಸಕ ಅರುಣಕುಮಾರ ಪೂಜಾರ