ರಾಣೆಬೇನ್ನೂರು: ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ನಿನ್ನೆ ಕಾಂಗ್ರೆಸ್ ಪಕ್ಷ ಆಯೋಜಿಸಿದ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಕಾರ್ಯಕ್ರಮಕ್ಕೆ ತೆರಳಿದ ಕಾಂಗ್ರೆಸ್ ಕಾರ್ಯಕರ್ತನೊರ್ವ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ.
ತಾಲೂಕಿನ ನದಿಹರಳಹಳ್ಳಿ ಗ್ರಾಮದ ಕಟ್ಟಾ ಕಾಂಗ್ರೆಸ್ ಕಾರ್ಯಕರ್ತ ಬಸಪ್ಪ ಪಾಮೇನಹಳ್ಳಿ(63) ಮೃತಪಟ್ಟ ವ್ಯಕ್ತಿ.
ಇವರು ನಿನ್ನೆಯ ದಿನ ನದಿಹರಳಹಳ್ಳಿ ಗ್ರಾಮದಿಂದ ಕಾರ್ಯಕರ್ತರ ಜತೆ ಬಸ್ಸಿನಲ್ಲಿ ಕಾರ್ಯಕ್ರಮಕ್ಕೆ ಹೋಗಿದ್ದರು. ಬೆಳಗಾವಿ ಮುಟ್ಟಿದ ತಕ್ಷಣ ಅವರಿಗೆ ಅಸ್ತವ್ಯಸ್ತ ಆಗಿದ್ದಾರೆ. ಆದರೂ ಸಹ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಹೋದಾಗ ಮೃತಪಟ್ಟಿದ್ದಾರೆ ಎನ್ನಲಾಗಿದೆ. ತಡರಾತ್ರಿ ಗ್ರಾಮದ ಕಾಂಗ್ರೆಸ್ ಕಾರ್ಯಕರ್ತರು ಶವವನ್ನು ಗ್ರಾಮಕ್ಕೆ ತಂದಿದ್ದು, ಕುಟುಂಬಸ್ಥರ ಪರಿಹಾರಕ್ಕೆ ಆಗ್ರಹ ಮಾಡಿದ್ದಾರೆ..
More Stories
ತುಂಗಭದ್ರಾ ನದಿಯಲ್ಲಿ 15 ಕಿ.ಮೀ. ಈಜಿ ಪ್ರಾಣ ಉಳಿಸಿಕೊಂಡ ಮೈಸೂರಿನ ವೃದ್ಧ…!
ಮೂರು ಬೈಕಗಳ ನಡುವೆ ಭೀಕರ ಅಪಘಾತ ಒರ್ವ ಯುವಕ ಸಾವು, ಮೂವರು ಗಂಭೀರ.
ಆಟೋ ಚಾಲಕರಿಗೆ ಸನ್ಮಾನ ಸಮಾರಂಭ ಮಾಡಲಿರುವ “ಪರಮೇಶಣ್ಣ ಗೂಳಣ್ಣನವರ”