ರಾಣೆಬೇನ್ನೂರು: ನಗರವನ್ನು ಪ್ಲಾಸ್ಟಿಕ್ ಮುಕ್ತವಾಗಿಸಲು ಸಾರ್ವಜನಿಕರು ಸಹಕರಿಸಬೇಕು ಎಂದು ನಗರಸಭೆ ಪೌರಾಯುಕ್ತ ಎಫ್.ಐ.ಇಂಗಳಗಿ ಹೇಳಿದರು.
ಇಲ್ಲಿನ ಅಶೋಕಸರ್ಕಲ್‍ನಲ್ಲಿ ಭಾನುವಾರ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಏರ್ಪಡಿಸಲಾಗಿದ್ದ 76ನೇ ಗಣ ರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ನಗರದ ಜನತೆಯ ಪ್ರಾಥಮಿಕ ಸಮಸ್ಯೆಗಳನ್ನು ನೀಗಿಸಲು ಸರ್ಕಾರ ಹಾಗೂ ನಗರಸಭೆ ಮೂಲಕ ಸುಮಾರು 45 ಕೋಟಿ ರು.ಗಳ ವೆಚ್ಚದಲ್ಲಿ ರಸ್ತೆ, ಚರಂಡಿ, ಉದ್ಯಾನವನ ಅಭಿವೃದ್ಧಿ, ಬೀದಿ ದೀಪ, ವೃತ್ತಗಳು, ಹೊಸ ಅಂಗನವಾಡಿ ಕಟ್ಟಡ ನಿರ್ಮಾಣ, ಸ್ಮಶಾನ ಅಭಿವೃದ್ಧಿ ಇತ್ಯಾದಿ ಅಭಿವೃದ್ಧಿ ಕಾಮಗಾರಿಗಳನ್ನು ಅನುμÁ್ಠನಗೊಳಿಸಲು ಕ್ರಮ ವಹಿಸಲಾಗುತ್ತಿದೆ ಎಂದರು.
ಶಾಸಕ ಪ್ರಕಾಶ ಕೋಳಿವಾಡ, ಬಿಇಒ ಶಾಮಸುಂದರ ಅಡಿಗ, ಡಿವೈಎಸ್‍ಪಿ ಡಾ.ಗಿರೀಶ ಭೋಜಣ್ಣನವರ, ಶಹರ ಸಿಪಿಐ ಡಾ.ಶಂಕರ್, ಶಿಕ್ಷಕರು, ವಿದ್ಯಾರ್ಥಿಗಳು ಇದ್ದರು.
ಗಣರಾಜ್ಯೋತ್ಸವ ಸಮಾರಂಭಕ್ಕೆ ಚುನಾಯಿತ ನಗರಸಭೆ ಗೈರು:
ನಗರದ ಅಶೋಕ ಸರ್ಕಲ್‍ನಲ್ಲಿ ತಾಲೂಕು ಆಡಳಿತದ ವತಿಯಿಂದ ನಗರಸಭೆ ಸಹಯೋಗದಲ್ಲಿ ನಡೆಯುವ ಗಣರಾಜ್ಯೋತ್ಸವ ಸಮಾರಂಭಕ್ಕೆ ಪಕ್ಷಬೇಧ ಮರೆತು ಎಲ್ಲಾ ಚುನಾಯಿತ ಸದಸ್ಯರು ಗೈರು ಹಾಜರಾಗಿದ್ದರು.
More Stories
ತುಂಗಭದ್ರಾ ನದಿಯಲ್ಲಿ 15 ಕಿ.ಮೀ. ಈಜಿ ಪ್ರಾಣ ಉಳಿಸಿಕೊಂಡ ಮೈಸೂರಿನ ವೃದ್ಧ…!
ಮೂರು ಬೈಕಗಳ ನಡುವೆ ಭೀಕರ ಅಪಘಾತ ಒರ್ವ ಯುವಕ ಸಾವು, ಮೂವರು ಗಂಭೀರ.
ಆಟೋ ಚಾಲಕರಿಗೆ ಸನ್ಮಾನ ಸಮಾರಂಭ ಮಾಡಲಿರುವ “ಪರಮೇಶಣ್ಣ ಗೂಳಣ್ಣನವರ”