ರಾಣೆಬೇನ್ನೂರು: ಮೈಲಾರ ಜಾತ್ರೆಗೆ ಹೊರಟಿದ್ದ ಎತ್ತಿನ ಬಂಡಿಗೆ ಪಲ್ಸರ್ ಬೈಕ್ ಡಿಕ್ಕಿಯಾಗಿ ಮೂವರು ಕೃಷಿ ಪದವಿ ವಿದ್ಯಾರ್ಥಿಗಳು ಸಾವನ್ನಪ್ಪಿದ ಘಟನೆ ರಾಣೆಬೇನ್ನೂರು ತಾಲೂಕಿನ ಗುಡಗೂರು ಕ್ರಾಸ್ ಬಳಿ ತಡ ರಾತ್ರಿ ನಡೆದಿದೆ.
ಹಾವೇರಿ ಜಿಲ್ಲೆಯ ಕನವಳ್ಳಿ ಗ್ರಾಮದ ಶಶಿಕುಮಾರ ಹುಲಗಪ್ಪ ಉಪ್ಪಾರ(25), ಬಿಜಾಪುರ ಜಿಲ್ಲೆಯ ಇಂಡಿ ತಾಲೂಕಿನ ಗೋಡಿಹಾಳ ಗ್ರಾಮದ ಆಕಾಶ ಮಲಕಪ್ಪ ಬೀರಾದಾರ(23) ಹಾಗೂ ಬೀದರ್ ಜಿಲ್ಲೆಯ ಜೋಜಾನ ಗ್ರಾಮದ ದರ್ಶನ(23) ಮೃತಪಟ್ಟ ವಿದ್ಯಾರ್ಥಿಗಳು.
ಇವರು ತಡರಾತ್ರಿ ಗುತ್ತಲ ಗ್ರಾಮದಿಂದ ಕೃಷಿ ವಿವಿಗೆ ಪಲ್ಸರ್ ಬೈಕಿನಲ್ಲಿ ಮರಳುವಾಗ ಯಾವುದೋ ಎತ್ತಿನಗಾಡಿಗೆ ಡಿಕ್ಕಿಯಾಗಿದೆ. ಈ ಹಿನ್ನೆಲೆ ಡಿಕ್ಕಿ ರಭಸಕ್ಕೆ ವಿದ್ಯಾರ್ಥಿಗಳು ಸ್ಥಳದಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಸ್ಥಳಕ್ಕೆ ರಾಣೆಬೇನ್ನೂರು ಗ್ರಾಮೀಣ ಪೋಲಿಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
More Stories
ಬಹಳಷ್ಟು ಲಾಭ ಕೊಡುವುದಾಗಿ ನಂಬಿಸಿ 75.42 ಲಕ್ಷ ರೂ. ವಂಚನೆ
ಕಾಕೋಳ ಗ್ರಾಮದಲ್ಲಿ ಸೊಸೈಟಿಗೆ ಕನ್ನ ಹಾಕಿದ ಕಳ್ಳರು.
ಅಧಿಕಾರ ಶಾಶ್ವತವಲ್ಲ, ಜನರ ಸೇವೆ ನಿಜಾವಾದ ಶಾಶ್ವತ ಮಾಜಿ ಶಾಸಕ ಅರುಣಕುಮಾರ ಪೂಜಾರ