ರಾಣೆಬೇನ್ನೂರು: ಉತ್ತರ ಕರ್ನಾಟಕ ಭಾಗದಲ್ಲಿ ರೇಷ್ಮೆ ಬೆಳೆ ಹೆಚ್ಚಾಗಿ ಬೆಳೆಯುತ್ತಿರುವದರಿಂದ ಈ ಭಾಗದ ರೇಷ್ಮೆ ಬೆಳೆಗಾರರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸುಮಾರು 15ಕೋಟಿ ರೂ ವೆಚ್ಚದ ರೇಷ್ಮೆ ಮೆಗಾ ಮಾರುಕಟ್ಟೆ ನಿರ್ಮಿಸಲಾಗುತ್ತಿದೆ ಎಂದು ಪಶುಸಂಗೋಪನೆ ಮತ್ತು ರೇಷ್ಮೆ ಇಲಾಖೆ ಸಚಿವ ಕೆ.ವೆಂಕಟೇಶ ಹೇಳಿದರು.
ರಾಣೆಬೇನ್ನೂರು ತಾಲೂಕಿನ ಕೂನಬೇವು ಗ್ರಾಮದ ವ್ಯಾಪ್ತಿ ನಿರ್ಮಾಣಗೊಳ್ಳುತ್ತಿರುವ ನೂತನ ರೇಷ್ಮೆ ಮೆಗಾ ಮಾರುಕಟ್ಟೆ ಕಟ್ಟಡ ಕಾಮಗಾರಿಯನ್ನು ವೀಕ್ಷಣೆ ಮಾಡಿ ಮಾತನಾಡಿದರು.
ಉತ್ತರ ಕರ್ನಾಟಕ ಭಾಗದ ಸಾವಿರಾರು ರೇಷ್ಮೆ ಬೆಳೆಗಾರರು ತಮ್ಮ ರೇಷ್ಮೆ ಮಾರಾಟ ಮಾಡಲು ದೂರದ ರಾಮನಗರಕ್ಕೆ ಹೋಗುತ್ತಿದ್ದರು. ಇದರಿಂದ ಪ್ರಯಾಣ ವೆಚ್ಚ ಹಾಗೂ ರೇಷ್ಮೆ ಗುಣಮಟ್ಟ ಕಳೆದುಕೊಳ್ಳುವ ಸಂಭವ ಹೆಚ್ಚಾಗಿತ್ತು. ಆದ್ದರಿಂದ ಇಲ್ಲಿನ ರೈತರಿಗೆ ಅನಕೂಲಕ್ಕಾಗಿ ಸರ್ಕಾರ ಹೊಸ ರೇಷ್ಮೆ ಮೆಗಾ ಮಾರುಕಟ್ಟೆ ನಿರ್ಮಾಣ ಮಾಡಲು ಮುಂದಾಯಿತು. ಅದರಂತೆ ಈಗಾಗಲೇ ರಾಣೆಬೇನ್ನೂರು ತಾಲೂಕಿನ ಕೂನಬೇವು ಗ್ರಾಮದ ವ್ಯಾಪ್ತಿಯಲ್ಲಿ ಸುಮಾರು ಐದು ಎಕರೆ ಜಾಗದಲ್ಲಿ ಕಾಮಗಾರಿ ಪ್ರಾರಂಭವಾಗಿದ್ದು ಒಂದು ವರ್ಷದೊಳಗೆ ಮುಕ್ತಾಯಗೊಂಡು ಲೋಕಾರ್ಪಣೆಗೊಳ್ಳಲಿದೆ ಎಂದು ಹೇಳಿದರು.
ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣನವರ ಮಾತನಾಡಿ, ನಮ್ಮ ಹಾವೇರಿ ಜಿಲ್ಲೆಯಲ್ಲಿ ರೇಷ್ಮೆ ಮಾರುಕಟ್ಟೆ ನಿರ್ಮಾಣವಾಗುತ್ತಿರುವುದು ಈ ಭಾಗದ ರೇಷ್ಮೆ ಬೆಳಗಾರರಿಗೆ ವರದಾನವಾಗಲಿದೆ. ಆದಷ್ಟು ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿಯನ್ನು ಕಾಯ್ದುಕೊಳ್ಳುವಂತೆ ಸೂಚನೆ ನೀಡಿದರು.
ಸಚಿವರು ಭೇಟಿ ಸಮಯದಲ್ಲಿ ಮುಖಂಡರಾದ ಬಸವರಾಜ ಸವಣೂರು, ಸಂಜೀವ ಮೋಟೆಬೆನ್ನೂರು ಸೇರಿದಂತೆ ಗ್ರಾಪಂ ಸದಸ್ಯರು ಹಾಜರಿದ್ದರು.
ರೇಷ್ಮೆ ಇಲಾಖೆಯ ಉಪ ನಿರ್ದೇಶಕರಾದ ಎಂ.ಡಿ.ಪಾಟೀಲ, ತಾಲೂಕು ರೇಷ್ಮೆ ವಿಸ್ತರಣಾಧಿಕಾರಿ ನರ್ಮಾದ ಎಂ, ಸಹಾಯಕ ರೇಷ್ಮೆ ಅಧಿಕಾರಿ ಬಿ.ಆರ್.ಅಂಗಡಿ, ರೇಷ್ಮೆ ಜಂಟಿ ನಿರ್ದೇಶಕ ವೈ.ಟಿ.ತಿಮ್ಮಯ, ಬ್ಯಾಡಗಿ ರೇಷ್ಮೆ ವಿಸ್ತರಣಾಧಿಕಾರಿ ಭಾರತಿ ಡಿ ನಾಯಕ, ಎಸ್.ಎನ್.ಕೋರೆ ಸೇರಿದಂತೆ ಇತರ ಅಧಿಕಾರಿಗಳು ಹಾಜರಿದ್ದರು.

More Stories
ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.
ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.
ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.