ರಾಣೆಬೇನ್ನೂರು: ಕಳೆದ ಐವತ್ತು ವರ್ಷಗಳಿಂದ ಹಳೆ ಸರ್ಕಾರಿ ಕಚೇರಿಯಲ್ಲಿದ್ದ ಗ್ರಾಮೀಣ ಪೋಲಿಸ್ ಠಾಣೆಗೆ ಇದೀಗ ಸರ್ಕಾರದಿಂದ ಹೊಸ ಕಟ್ಟಡ ಭಾಗ್ಯ ದೊರೆತಿದೆ.
ಹೌದು…ರಾಣೆಬೇನ್ನೂರು ತಾಲೂಕಿನಲ್ಲಿ ಅತಿ ಹೆಚ್ಚು ಗ್ರಾಮಗಳ ಬೀಟ್ ಹೊಂದಿರುವ ಗ್ರಾಮೀಣ ಪೋಲಿಸ್ ಠಾಣೆಗೆ ಸ್ವಂತ ಸುಸಜ್ಜಿತ ಕಟ್ಟಡ ಇರಲಿಲ್ಲ. ಇದರಿಂದ ಬಂದಂತಹ ಸಾರ್ವಜನಿಕರು ಹಳೆ ಕಟ್ಟಡ ಹೊರಗಡೆ ನಿಂತು ತಮ್ಮ ಕುಂದುಕೊರತೆಗಳನ್ನು ನಿವಾರಿಸಿಕೊಂಡು ಹೋಗುತ್ತಿದ್ದರು. ಇದನ್ನು ಮನಗಂಡ ಸರ್ಕಾರ ಹಾಗೂ ಗೃಹ ಇಲಾಖೆಯು ಸುಮಾರು 2.50 ಕೋಟಿ ವೆಚ್ಚದಲ್ಲಿ ಹೊಸ ಕಟ್ಟಡ ನಿರ್ಮಾಣ ಮಾಡಲು ಅನುದಾನ ನೀಡಿದೆ.
ಇಂದು ಶಾಸಕ ಪ್ರಕಾಶ ಕೋಳಿವಾಡ ಹಾಗೂ ಜಿಲ್ಲಾ ಪೋಲಿಸ ವರಿಷ್ಠಾಧಿಕಾರಿ ಅಂಶುಕುಮಾರ ಗುದ್ದಲಿ ಪೂಜೆ ಮಾಡುವ ಮೂಲಕ ನೂತನ ಕಟ್ಟಡಕ್ಕೆ ಚಾಲನೆ ನೀಡಿದರು.
ಈ ಸಮಯದಲ್ಲಿ ಪೋಲಿಸ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಹಾಜರಿದ್ದರು.
More Stories
ತುಂಗಭದ್ರಾ ನದಿಯಲ್ಲಿ 15 ಕಿ.ಮೀ. ಈಜಿ ಪ್ರಾಣ ಉಳಿಸಿಕೊಂಡ ಮೈಸೂರಿನ ವೃದ್ಧ…!
ಮೂರು ಬೈಕಗಳ ನಡುವೆ ಭೀಕರ ಅಪಘಾತ ಒರ್ವ ಯುವಕ ಸಾವು, ಮೂವರು ಗಂಭೀರ.
ಆಟೋ ಚಾಲಕರಿಗೆ ಸನ್ಮಾನ ಸಮಾರಂಭ ಮಾಡಲಿರುವ “ಪರಮೇಶಣ್ಣ ಗೂಳಣ್ಣನವರ”