ರಾಣೆಬೇನ್ನೂರು: ಬೆಳಗಾವಿಯಲ್ಲಿ ಕಾಂಗ್ರೆಸ್ ಪಕ್ಷ ಆಯೋಜನೆ ಮಾಡಿದ್ದ ಗಾಂಧಿ ಭಾರತ ಸಮಾವೇಶದಲ್ಲಿ ಭಾಗಿಯಾಗಿ ಮೃತಪಟ್ಟ ಕಾಂಗ್ರೆಸ್ ಕಾರ್ಯಕರ್ತನಿಗೆ ಕೆಪಿಸಿಸಿ ವತಿಯಿಂದ ಐದು ಲಕ್ಷ ಪರಿಹಾರ ಚೆಕ್ ಶಾಸಕ ಪ್ರಕಾಶ ಕೋಳಿವಾಡ ಮೃತನ ಕುಟುಂಬಕ್ಕೆ ವಿತರಣೆ ಮಾಡಿದರು.
ರಾಣೆಬೇನ್ನೂರು ತಾಲೂಕಿನ ನದಿಹರಳಹಳ್ಳಿ ಗ್ರಾಮದ ಬಸಪ್ಪ ಕೆಂಚಪ್ಪ ಪಾಮೇನಹಳ್ಳಿ(58) ಎಂಬ ಕಾರ್ಯಕರ್ತ ಬೆಳಗಾವಿ ಸಮಾವೇಶದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದರು.
ಈ ಹಿನ್ನೆಲೆ ಮೃತಪಟ್ಟ ಕಾಂಗ್ರೆಸ್ ಕಾರ್ಯಕರ್ತನ ಕುಟುಂಬಸ್ಥರು ನಾವು ಆರ್ಥಿಕವಾಗಿ ಬಡವರಾಗಿದ್ದು ನಮಗೆ ಪರಿಹಾರ ನೀಡುವಂತೆ ಶಾಸಕ ಪ್ರಕಾಶ ಕೋಳಿವಾಡ ಅವರ ಹತ್ತಿರ ಮನವಿ ಮಾಡಿದ್ದರು. ಅದರಂತೆ ಶಾಸಕ ಪ್ರಕಾಶ ಕೋಳಿವಾಡ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಗಮನಕ್ಕೆ ತಂದು ಐದುಲಕ್ಷ ಪರಿಹಾರ ಕೋಡಿಸುವಲ್ಲಿ ಯಶಸ್ವಿಯಾಗಿದ್ದಾರೆ.
More Stories
ತುಂಗಭದ್ರಾ ನದಿಯಲ್ಲಿ 15 ಕಿ.ಮೀ. ಈಜಿ ಪ್ರಾಣ ಉಳಿಸಿಕೊಂಡ ಮೈಸೂರಿನ ವೃದ್ಧ…!
ಮೂರು ಬೈಕಗಳ ನಡುವೆ ಭೀಕರ ಅಪಘಾತ ಒರ್ವ ಯುವಕ ಸಾವು, ಮೂವರು ಗಂಭೀರ.
ಆಟೋ ಚಾಲಕರಿಗೆ ಸನ್ಮಾನ ಸಮಾರಂಭ ಮಾಡಲಿರುವ “ಪರಮೇಶಣ್ಣ ಗೂಳಣ್ಣನವರ”