ರಾಣೆಬೇನ್ನೂರು: ನಗರದ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಮಾಜಿ ಸಂಸದ ಹಾಗೂ ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರಿಗೆ ಅಭಿಮಾನಿಗಳು ಮುಂದಿನ ಮುಖ್ಯಮಂತ್ರಿ ಎಂದು ಜೈಕಾರ ಹಾಕಿದ ಘಟನೆ ನಡೆಯಿತು.
ಹೌದು… ಬಿಜೆಪಿ ರಾಜಾಧ್ಯಕ್ಷ ಬಿ.ವೈ.ವಿಜೆಯೇಂದ್ರ ವಿರುದ್ಧ ಸತತ ವಾಗ್ದಾಳಿ ಮಾಡಿದ ನಂತರ ಅವರನ್ನು ಹೈಕಮಾಂಡ್ ಬಿಜೆಪಿ ಪಕ್ಷದಿಂದ ಉಚ್ಚಾಟನೆ ಮಾಡಲಾಗಿತ್ತು. ಇದರಿಂದ ಯತ್ನಾಳ ಅಭಿಮಾನಿಗಳು ಹಾಗೂ ಹಿಂದೂ ಕಾರ್ಯಕರ್ತರು ಬಿಜೆಪಿ ಪಕ್ಷದ ವಿರುದ್ಧ ಹರಿಹಾಯ್ದಿದ್ದರು.
ನಂತರ ರಾಜ್ಯಾದ್ಯಂತ ಯತ್ನಾಳ ಅವರಿಗೆ ಅಭಿಮಾನಿಗಳ ಸಂಖ್ಯೆ ಹೆಚ್ಚಾದ ಹಿನ್ನೆಲೆ ಅವರನ್ನು ಅಭಿಮಾನಿಗಳು ಮುಂದಿನ ಮುಖ್ಯಮಂತ್ರಿ ಎಂದು ಘೋಷಣೆ ಹಾಕುತ್ತಿದ್ದಾರೆ.
ಬಿಜೆಪಿ ಮುಖಂಡರು ದೂರ ದೂರ… ಬಿಜೆಪಿ ಪಕ್ಷದಿಂದ ಉಚ್ಚಾಟನೆಗೊಂಡ ನಂತರ ಬಿಜೆಪಿ ಪಕ್ಷದ ಮುಖಂಡರು ಯತ್ನಾಳ ಅವರಿಂದ ದೂರು ಉಳಿಯುತ್ತಿದ್ದಾರೆ.
ರಾಣೆಬೇನ್ನೂರು ನಗರಕ್ಕೆ ಆಗಮಿಸಿದ ಸಮಯದಲ್ಲಿ ಹಿಂದೂ ಕಾರ್ಯಕರ್ತರು ಹೊರತು ಪಡಿಸಿ ಯಾವೊಬ್ಬ ಬಿಜೆಪಿ ಕಾರ್ಯಕರ್ತರು ಹಾಜರರಿಲ್ಲ.
ಪಂಚಮಸಾಲಿ ಸಮಾಜದ ಬೆರಣಿಕೆಯಷ್ಟು ಮುಖಂಡರು ಆಗಮಿಸಿ ಅವರಿಗೆ ಸನ್ಮಾನ ಮಾಡಿದರು.
More Stories
ಬಹಳಷ್ಟು ಲಾಭ ಕೊಡುವುದಾಗಿ ನಂಬಿಸಿ 75.42 ಲಕ್ಷ ರೂ. ವಂಚನೆ
ಕಾಕೋಳ ಗ್ರಾಮದಲ್ಲಿ ಸೊಸೈಟಿಗೆ ಕನ್ನ ಹಾಕಿದ ಕಳ್ಳರು.
ಅಧಿಕಾರ ಶಾಶ್ವತವಲ್ಲ, ಜನರ ಸೇವೆ ನಿಜಾವಾದ ಶಾಶ್ವತ ಮಾಜಿ ಶಾಸಕ ಅರುಣಕುಮಾರ ಪೂಜಾರ