16 ಲಕ್ಷ ಮೌಲ್ಯದ ಬಂಗಾರ ಮಾರಾಟ ಮಾಡಲು ಯತ್ನಿಸಿದ ಮಹಿಳೆ ಬಂಧನ…

ಹಾವೇರಿ ಜಿಲ್ಲಾಸತ್ರ ಕೋರ್ಟ್‌ಗೆ ಬಾಂಬ್ ಬೆದರಿಕೆ ಪತ್ರ; ಕೋರ್ಟನಿಂದ ಓಡಿ ಬಂದ ಕಕ್ಷಿದಾರರು, ವಕೀಲರು.

ಸಿಎಂ ಕುರ್ಚಿ ಗುದ್ದಾಟದ ವಿಚಾರ…! ಮತ್ತೆ ಗರಂ ಆದ ಸಿಎಂ ಸಿದ್ಧರಾಮಯ್ಯ.

ಸಾಯಿ ಆಸ್ಪತ್ರೆ ವೈದ್ಯನ ಮೇಲೆ ಹಲ್ಲೆ: 8 ಜನರ ವಿರುದ್ಧ ಪ್ರಕರಣ ದಾಖಲು.

ಹಾವೇರಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ನಿಂಗರಾಜ ಕೋಡಿಹಳ್ಳಿ, ಪ್ರಧಾನ ಕಾರ್ಯದರ್ಶಿಯಾಗಿ ಸಿದ್ದು ಚಿಕ್ಕಬಿದರಿ ನೇಮಕ.

ನ್ಯಾಯಬೆಲೆ ಅಂಗಡಿ ಪ್ರಾಧಿಕಾರವನ್ನು ವರ್ಗಾವಣೆ ಮಾಡಿಕೊಡಲು ಲಂಚ ಸ್ವೀಕಾರ, ರಾಣೆಬೆನ್ನೂರ ತಹಶೀಲ್ದಾರ ಕಛೇರಿಯ ಆಹಾರ ನಿರೀಕ್ಷಕ ಬಂಧನ.

ಉಚಿತ ಚಿಕನ್ ಬಿರಿಯಾನಿ ಬೇಕಾ,‌ ಆಗಾದ್ರೆ ಬಸ್ ನಿಲ್ದಾಣಕ್ಕೆ ಬನ್ನಿ.

ಅಂಬೇಡ್ಕರ್, ಗಾಂಧಿ ಹೆಸರು ಅಳಿಸಲು ಹೊರಟಿರುವ ವಿರುದ್ಧ ನನ್ನ ಹೋರಾಟ; ಸಚಿವ ಸತೀಶ ಜಾರಕಿಹೊಳಿ

ನಗರಸಭೆ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಜಿಲ್ಲಾಧಿಕಾರಿ.

ತವರ ಮನೆಗೆ ಹೆಂಡತಿ ಹೋದಾಗ ಎರಡನೇ ಮದುವೆಯಾದ ಭೂಪ ಜೈಲು ಪಾಲು…!

ದಾರಿ ತಪ್ಪಿ ಬಂದಿದಲ್ಲ, ದಾರಿ ಹುಡಕಿಕೊಂಡು ಬಂದೇನಿ; ಗಜರಾಜನ ಕೂಗಾಟ

ತಾಯಿ ಮೇಲೆ ಹಲ್ಲೆ ಮಾಡಿದ್ರೆ ಹುಷಾರ…! ಪುತ್ರ, ಸೊಸೆಗೆ ಜೈಲು ಪಾಲು

ನಿರ್ಮಾಣ ಹಂತದ ಟ್ಯಾಂಕನಿದ್ದು ಬಿದ್ದು ಕಾರ್ಮಿಕ ಸಾವು.

ಒಂಟಿ ಮನೆಯಲ್ಲಿದ್ದ ಮಹಿಳೆಯ ಕತ್ತು ಕೊಯ್ದು ಕೊಲೆ‌ಮಾಡಿದ ವ್ಯಕ್ತಿ ಬಂಧನ

ರಾಣೆಬೇನ್ನೂರ ನಗರದಲ್ಲಿ ಮಹಿಳೆಯ ಭೀಕರ ಕೊಲೆ, ಕಾರಣ ನಿಗೂಢ…!

ಹೊಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವ ರೈತ ಸಾವು

ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.

ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.

ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.

ಸ್ಪೆಷಲ್ ತರಗತಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ,ಮಾಸ್ತರ ಎಸ್ಕೇಪ್..!

ರಾಣೆಬೇನ್ನೂರ ತಾಲೂಕ ಹಸಿರಿಕರಣಕ್ಕೆ “ಟ್ರೀ ಪಾರ್ಕ್” ಶಾಸಕ ಪ್ರಕಾಶ ಕೋಳಿವಾಡ

ರಾಣೆಬೇನ್ನೂರು: ತಾಲೂಕಿನ ಹಸಿರಕರಕ್ಕಾಗಿ ಸುಮಾರು ಎರಡು ಕೋಟಿ ರೂ ವೆಚ್ಚದಲ್ಲಿ ಟ್ರೀ ಪಾರ್ಕ್ (ಸಾಲು ಮರದ ತಿಮ್ಮಕ್ಕ ವನ) ನಿರ್ಮಾಣಕ್ಕೆ ಈಗಾಗಲೇ ಅನುಮೋದನೆ ಸಿಕ್ಕಿದ್ದು, ತಾಲೂಕಿನ ಯಾವ ಭಾಗದಲ್ಲಿ ಮಾಡಬೇಕು ಎಂಬುದನ್ನು ಅಧಿಕಾರಿಗಳು ಹಾಗೂ ಮುಖಂಡರ ಜತೆ ಚರ್ಚಿಸಿ ಮಾಡಲಾಗುವುದು ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.

ತಾಲೂಕಿನ ಗುಡಗೂರ ಗ್ರಾಮ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಲೋಕೋಪಯೋಗಿ ಇಲಾಖೆಯ ಸುಮಾರು ಹದಿನಾಲ್ಕು ಕೋಟಿ ರೂಗಳ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದರು.

ರಾಣೆಬೇನ್ನೂರು ತಾಲೂಕಿನಲ್ಲಿ ಈಗಾಗಲೇ ಅಭಿವೃದ್ಧಿ ಸೇರಿದಂತೆ  ವಿವಿಧ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಕ್ರಿಯಾಯೋಜನೆ ಸಿದ್ಧಪಡಿಸಲಾಗಿದ್ದು ಸರ್ಕಾರದಿಂದ ಮಂಜೂರಾತಿ ದೊರೆತ ತಕ್ಷಣ ಕಾಮಗಾರಿ ಪ್ರಾರಂಭಿಸಲಾಗುವುದು. ಅಲ್ಲದೆ ಗುತ್ತಿಗೆದಾರರು ಉತ್ತಮ ಗುಣಮಟ್ಟದ ಕಾಮಗಾರಿ ಮಾಡುವ ಮೂಲಕ ಕಾಮಗಾರಿ ಗುಣಮಟ್ಟ ಕಾಪಾಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.

ತಾಲೂಕಿನಲ್ಲಿ ತಂತ್ರಜ್ಞಾನಕ್ಕೆ ಹೆಚ್ಚಿನ ಆಧ್ಯತೆ ನೀಡುವ ಸಲುವಾಗಿ ಕಿಯೋನಿಕ್ಸ್ ಕಂಪನಿ ವತಿಯಿಂದ ರಾಣೆಬೇನ್ನೂರು ನಗರದಲ್ಲಿ ಪ್ಲಗ್ ಆಂಡ್ ಪೇ(plug and pay) ಕಂಪನಿಯ ತೆರೆಯಲು ಯೋಜನೆ ಹಾಕಲಾಗಿದೆ. ಈ ಹಿನ್ನೆಲೆ ಕಿಯೋನಿಕ್ಸ್ ಅಧ್ಯಕ್ಷರಾಗಿರುವ ಶರತ ಬಚ್ಚೆಗೌಡ ತಾಲೂಕಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಲಿದ್ದಾರೆ. ಅದರ ಜೊತೆ ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ ಸಹ ತಾಲೂಕಿಗೆ ಆಗಮಿಸಿ ಪ್ರವಾಸೋದ್ಯಮ ಅಭಿವೃದ್ಧಿ ಪಡಿಸಲು ವಿವಿಧ ಸ್ಥಳಗಳಿಗೆ ಭೇಟಿ ಯೋಜನೆಯ ರೂಪರೇಷೆಗಳನ್ನು ಹಾಕಿಕೊಳ್ಳಲಿದ್ದಾರೆ ಎಂದು ತಿಳಿಸಿದರು.

ಲೋಕೋಪಯೋಗಿ ಇಲಾಖೆ ಎಇಇ ಮರಿಸ್ವಾಮಿ, ಇಂಜನೀಯರಗಳಾದ ರಮೇಶನಾಯಕ, ಸುಹಾಸ್, ನವೀನ ಸೇರಿದಂತೆ ವಿವಿಧ ಮುಖಂಡರು ಹಾಗೂ ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಹಾಜರಿದ್ದರು.

 

 

 

 

 

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!